ಖಾಂಡ್ವಾದಲ್ಲಿ ಬೀದಿ ನಾಯಿಗಳ ಹಾವಳಿ ಬಗ್ಗೆ ದೂರು ನೀಡಲು ನಾಯಿ ವೇಷ ಧರಿಸಿಯೇ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ್ದು  
ದೇಶ

ಬೀದಿ ನಾಯಿ ಹಾವಳಿ: ಮಧ್ಯ ಪ್ರದೇಶದ ಖಾಂಡ್ವಾದಲ್ಲಿ ಶ್ವಾನ ವೇಷ ಧರಿಸಿ ಜಿಲ್ಲಾಧಿಕಾರಿ ಕಚೇರಿಗೆ ಬಂದು ವಿಶಿಷ್ಟ ಪ್ರತಿಭಟನೆ- Video

ವ್ಯಕ್ತಿಯೊಬ್ಬರು ನಾಯಿ ವೇಷ ಧರಿಸಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಾರ್ವಜನಿಕ ಅಹವಾಲು ಸ್ವೀಕಾರ ಸಭೆಗೆ ಆಗಮಿಸಿದ್ದು, ಇದನ್ನು ನೋಡಲು ಅಧಿಕಾರಿಗಳು ಹಾಗೂ ಸ್ಥಳೀಯರು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ್ದು ಕಂಡುಬಂತು.

ಮಧ್ಯಪ್ರದೇಶದ ಖಾಂಡ್ವಾದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚುತ್ತಿರುವುದನ್ನು ಖಂಡಿಸಿ ವಿಶಿಷ್ಟ ಪ್ರತಿಭಟನೆ ಮೂಲಕ ಸುದ್ದಿಯಾಗಿದ್ದಾರೆ.

ವ್ಯಕ್ತಿಯೊಬ್ಬರು ನಾಯಿ ವೇಷ ಧರಿಸಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಾರ್ವಜನಿಕ ಅಹವಾಲು ಸ್ವೀಕಾರ ಸಭೆಗೆ ಆಗಮಿಸಿದ್ದು, ಇದನ್ನು ನೋಡಲು ಅಧಿಕಾರಿಗಳು ಹಾಗೂ ಸ್ಥಳೀಯರು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ್ದು ಕಂಡುಬಂತು.

ಈ ಪ್ರತಿಭಟನೆ ವಿಶಿಷ್ಟವಾಗಿರುವುದಷ್ಟೇ ಅಲ್ಲದೆ, ನಗರ ಪ್ರದೇಶಗಳಲ್ಲಿ ಹೆಚ್ಚುತ್ತಿರುವ ಬೀದಿ ನಾಯಿಗಳ ಸಮಸ್ಯೆ ಹಾಗೂ ಸಾಮಾನ್ಯ ನಾಗರಿಕರ ಸುರಕ್ಷತೆ ಕುರಿತು ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ಸಾರ್ವಜನಿಕರ ಸುರಕ್ಷತೆಯನ್ನು ಖಚಿತಪಡಿಸುವುದು ಆಡಳಿತ ಇಲಾಖೆಯ ಜವಾಬ್ದಾರಿಯಾಗಿದೆ. ಈ ಸಮಸ್ಯೆಗೆ ಶಾಶ್ವತ ಹಾಗೂ ಸೂಕ್ಷ್ಮತೆಯಿಂದ ಕೂಡಿದ ಪರಿಹಾರ ಕಂಡುಕೊಳ್ಳುವುದು ಅಗತ್ಯವಾಗಿದೆ ಎಂಬುದು ಸಂಘ-ಸಂಸ್ಥೆಗಳು, ಸಾಮಾನ್ಯ ನಾಗರಿಕರ ಆಗ್ರಹವಾಗಿದೆ.

ಖಾಂಡ್ವಾ ಜಿಲ್ಲಾಧಿಕಾರಿ ಕಚೇರಿಯಲ್ಲಿ ಪ್ರತಿಪಕ್ಷದ ನಾಯಕ ದೀಪಕ್ ಮುಲ್ಲು ರಾಥೋಡ್ ಹಾಗೂ ಇತರರು, ಕಳೆದ ನಾಲ್ಕು ವರ್ಷಗಳಲ್ಲಿ ಬೀದಿ ನಾಯಿಗಳ ಸಂತಾನಹರಣಕ್ಕಾಗಿ 40 ಲಕ್ಷ ರೂಪಾಯಿ ವೆಚ್ಚ ಮಾಡಿದ್ದರೂ 13,225 ನಾಯಿ ಕಡಿತ ಪ್ರಕರಣಗಳು ವರದಿಯಾಗಿರುವುದನ್ನು ಜಿಲ್ಲಾಧಿಕಾರಿಗಳ ಮುಂದೆ ಪ್ರಸ್ತಾಪಿಸಿದರು.

ದೆಹಲಿಯಿಂದ ಬಂದ ‘ಡಾಗ್ಗಿ ಬ್ರದರ್’ ಎಂಬ ವ್ಯಕ್ತಿ, ಸಂತಾನಹರಣ ಕಾರ್ಯಕ್ರಮದಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ ದೂರು ಸಲ್ಲಿಸಿದರು. ಈ ಯೋಜನೆಯಲ್ಲಿ ಪಾರದರ್ಶಕತೆ ಕಾಪಾಡಬೇಕು ಹಾಗೂ ಬೀದಿ ನಾಯಿಗಳ ನಿಯಂತ್ರಣಕ್ಕೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಆದರೆ ಕಾರ್ಯನಿರ್ವಾಹಕ ಎಂಜಿನಿಯರ್ ಸಂಜಯ್ ಶುಕ್ಲಾ ಸೇರಿದಂತೆ ಅಧಿಕಾರಿಗಳು ಅಕ್ರಮ ನಡೆದಿರುವ ಆರೋಪಗಳನ್ನು ತಳ್ಳಿಹಾಕಿದರು. ಶೀಘ್ರದಲ್ಲೇ ಸಂಬಂಧಿತ ಅಂಕಿಅಂಶಗಳನ್ನು ಹಂಚಿಕೊಳ್ಳುವುದಾಗಿ ಅವರು ಭರವಸೆ ನೀಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Pak ಬಣ್ಣ ಬಯಲು: ಕಾಶ್ಮೀರ ರಕ್ತದೋಕುಳಿಗೆ 10,000 ಉಗ್ರರ ರವಾನಿಸಿದ್ದ: Hafiz Saeed ಪಾಪಕೃತ್ಯ ಬಹಿರಂಗಪಡಿಸಿದ ಮೌಲ್ವಿ, Video ವೈರಲ್

ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆ: ನಕಲಿ ಪಿಂಚಣಿದಾರರಿಗೆ ಸರ್ಕಾರ ಶಾಕ್; 18 ಲಕ್ಷ ಖಾತೆಗಳು ತಾತ್ಕಾಲಿಕ ಸ್ಥಗಿತ, ವಂಚನೆಯಲ್ಲಿ ಬೆಂಗಳೂರೇ ನಂ.1..!

ಪುಣೆಯಲ್ಲಿ ಘೋರ ಕೃತ್ಯ: 9 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ; ಯುವಕನ ಬಂಧನ!

ಕೋಲ್ಕತ್ತಾದ ಹೊಟೇಲ್ ನಲ್ಲಿ ಭೀಕರ ಅಗ್ನಿ ಅವಘಡ: 9 ಮಂದಿ ಸಾವು, 6 ಜನರಿಗೆ ಗಾಯ-Video

ಕ್ಷಿಪಣಿ ದಾಳಿ ಆರೋಪ: Iranಗೆ UAE ಶಾಕ್, ಎಲ್ಲಾ ವ್ಯಾಪಾರ-ವಾಣಿಜ್ಯ ವಹಿವಾಟು ಸಂಪೂರ್ಣ ಸ್ಥಗಿತ..!