ಪುಣೆ: ಮಹಾರಾಷ್ಟ್ರದ ಪುಣೆ ಜಿಲ್ಲೆಯಲ್ಲಿ ಒಂಬತ್ತು ವರ್ಷದ ಬಾಲಕಿಯ ಮೇಲೆ ಯುವಕನೊಬ್ಬ ಅತ್ಯಾಚಾರ ಎಸಗಿ ಕೊಲೆ ಮಾಡಿದ್ದಾನೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.
ಜುನ್ನಾರ್ ತಹಸಿಲ್‌ನ ಪಿಂಪಲ್‌ವಾಡಿ ಗ್ರಾಮದಲ್ಲಿ ಮಂಗಳವಾರ ಮಧ್ಯಾಹ್ನ ಈ ಘೋರ ಕೃತ್ಯ ನಡೆದಿದ್ದು, ಆರೋಪಿ 25 ವರ್ಷದ ಯುವಕನನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಆರೋಪಿ ಯುವಕ, ಬಾಲಕಿಯನ್ನು ಆಕೆಯ ಮನೆಯಿಂದ ಹತ್ತಿರದ ಜಮೀನಿಗೆ ಕರೆದೊಯ್ದು, ಲೈಂಗಿಕ ದೌರ್ಜನ್ಯ ಎಸಗಿ ನಂತರ ಕೊಂದಿದ್ದಾನೆ ಎಂದು ಪುಣೆ ಗ್ರಾಮೀಣ ಪೊಲೀಸ್ ವರಿಷ್ಠಾಧಿಕಾರಿ ಸಂದೀಪ್ ಸಿಂಗ್ ಗಿಲ್ ತಿಳಿಸಿದ್ದಾರೆ.
"ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ. ಹೆಚ್ಚಿನ ತನಿಖೆ ನಡೆಯುತ್ತಿದೆ" ಎಂದು ಗಿಲ್ ಹೇಳಿದ್ದಾರೆ.