ಸಾಂಕೇತಿಕ ಚಿತ್ರ online desk
ದೇಶ

ಖಾಸಗಿ ಕಂಪನಿಯಿಂದ ಪತ್ನಿ ಮೂಲಕ ₹10 ಲಕ್ಷ ಲಂಚ ಪಡೆದ ಕೇಂದ್ರ ಸಚಿವಾಲಯದ ಹಣಕಾಸು ಸಲಹೆಗಾರ ಅಂದರ್!

ಭಾರತೀಯ ನಾಗರಿಕ ಲೆಕ್ಕಪತ್ರ ಸೇವೆಯ (ICAS) 2020ನೇ ಬ್ಯಾಚ್‌ನ ಅಧಿಕಾರಿಯಾಗಿರುವ ಸಂದೀಪ್, ಈ ನವೀಕರಣ ಕಡತದ ಪ್ರಕ್ರಿಯೆಗಾಗಿ ಉದ್ಯಮಿಯೊಬ್ಬರಿಂದ ₹15 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎಂದು ಆರೋಪಿಸಲಾಗಿದೆ.

ನವದೆಹಲಿ: ಖಾಸಗಿ ಕಂಪನಿಯೊಂದರ ನವೀಕರಣ ಕಡತವನ್ನು ವಿಲೇವಾರಿ ಮಾಡುವ ಸಂಬಂಧ, ತಮ್ಮ ಪತ್ನಿಯ ಮೂಲಕ 10 ಲಕ್ಷ ರೂಪಾಯಿ ಲಂಚ ಸ್ವೀಕರಿಸಿದ ಆರೋಪದ ಮೇಲೆ, ಮಾಹಿತಿ ಮತ್ತು ಪ್ರಸಾರ ಸಚಿವಾಲಯದಲ್ಲಿ ಆಂತರಿಕ ಹಣಕಾಸು ಸಲಹೆಗಾರರಾಗಿ (IFA) ಕಾರ್ಯನಿರ್ವಹಿಸುತ್ತಿದ್ದ ಲೆಕ್ಕಪತ್ರಗಳ ಉಪ ನಿಯಂತ್ರಕರೊಬ್ಬರನ್ನು ಸಿಬಿಐ ಬಂಧಿಸಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.

ಭಾರತೀಯ ನಾಗರಿಕ ಲೆಕ್ಕಪತ್ರ ಸೇವೆಯ (ICAS) 2020ನೇ ಬ್ಯಾಚ್‌ನ ಅಧಿಕಾರಿಯಾಗಿರುವ ಸಂದೀಪ್, ಈ ನವೀಕರಣ ಕಡತದ ಪ್ರಕ್ರಿಯೆಗಾಗಿ ಉದ್ಯಮಿಯೊಬ್ಬರಿಂದ ₹15 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎಂದು ಆರೋಪಿಸಲಾಗಿದೆ ಎಂದು ಅವರು ಹೇಳಿದರು.

'ಖಾಸಗಿ ಕಂಪನಿಯೊಂದರ ಗುತ್ತಿಗೆ ನವೀಕರಣಕ್ಕೆ ಸಂಬಂಧಿಸಿದ ಕಡತವನ್ನು ತ್ವರಿತವಾಗಿ ವಿಲೇವಾರಿ ಮಾಡಲು, ದೂರುದಾರರಿಂದ ₹10 ಲಕ್ಷ ಲಂಚ ಪಡೆಯಲು ಆರೋಪಿ ಅಂತಿಮವಾಗಿ ಒಪ್ಪಿಕೊಂಡಿದ್ದರು' ಎಂದು ಸಿಬಿಐ ವಕ್ತಾರರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಮಂಗಳವಾರ ಬಲೆ ಬೀಸಿದ ತನಿಖಾ ಸಂಸ್ಥೆಯು, ತನ್ನ ಪತ್ನಿಯ ಮೂಲಕ ₹10 ಲಕ್ಷ ಲಂಚ ಪಡೆಯುತ್ತಿದ್ದಾಗ ಆರೋಪಿ ಅಧಿಕಾರಿ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ ಎಂದು ವಕ್ತಾರರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ಹೈಡ್ರಾಮಾ: EC ಕಚೇರಿ ಮುತ್ತಿಗೆಗೆ ಯತ್ನಿಸಿದ ರಾಹುಲ್, ಪ್ರಿಯಾಂಕಾ ಗಾಂಧಿ ಸೇರಿ INDIA ಒಕ್ಕೂಟದ ಹಲವು ಸಂಸದರು ಪೊಲೀಸ್ ವಶಕ್ಕೆ..!

ಏಷ್ಯನ್‌ ಗೇಮ್ಸ್‌ ವಿಜೇತರಿಗೆ ಸಿಎಂ ಅಭಿನಂದನೆ; ಚಿನ್ನದ ಪದಕ ವಿಜೇತರಿಗೆ 1 ಕೋಟಿ ನಗದು,ಗ್ರೂಪ್-ಬಿ ಹುದ್ದೆಗಳಿಗೆ ನೇರ ನೇಮಕಾತಿ!

'ಮತದಾರರ ಪಟ್ಟಿ ಪರಿಷ್ಕರಣೆ'ಯಲ್ಲಿ ಅಕ್ರಮ ಆರೋಪ; CEC ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹ, INDIA ಒಕ್ಕೂಟದಿಂದ ‘ಪ್ರಜಾಪ್ರಭುತ್ವ ಉಳಿಸಿ’ ಪಾದಯಾತ್ರೆ ಆರಂಭ..!

ಶಾಲೆಗಳಲ್ಲಿ ಸಂವಿಧಾನದ ಪ್ರಸ್ತಾವನೆ ಪಠಣೆ: ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್!

9/11 ಮಾದರಿಯಲ್ಲೇ ಇಸ್ರೇಲ್ ಧ್ವಂಸಕ್ಕೆ ಸಂಚು..! ಫ್ಲೈದುಬೈ ಏರ್‌ಲೈನ್ಸ್ ಸೇರಿದ್ದೇ ಆ ಕ್ರೂರ ಉದ್ದೇಶಕ್ಕಾಗಿ; ಸತ್ಯ ಬಾಯಿಬಿಟ್ಟ ಕಿಲ್ಲರ್ ಪೈಲಟ್ ಹಮಾಮ್..!