ತೆಹೆಲ್ಕಾ ನಿಯತಕಾಲಿಕೆಯ ಮಾಜಿ ಮುಖ್ಯ ಸಂಪಾದಕ ತರುಣ್ ತೇಜಪಾಲ್ 
ದೇಶ

2013ರ ಲೈಂಗಿಕ ದೌರ್ಜನ್ಯ ಪ್ರಕರಣ: ಶಿಕ್ಷೆ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ Tehelka ಮಾಜಿ ಸಂಪಾದಕ ತರುಣ್ ತೇಜಪಾಲ್

ಆಗಸ್ಟ್ 6ರಂದು ಬಾಂಬೆ ಹೈಕೋರ್ಟ್‌ನ ಗೋವಾ ಪೀಠವು ಮಾಜಿ ಸಹೋದ್ಯೋಗಿ ದಾಖಲಿಸಿದ್ದ ಅತ್ಯಾಚಾರ ಪ್ರಕರಣದಲ್ಲಿ ತೇಜ್‌ಪಾಲ್ ಅವರನ್ನು ದೋಷಿ ಎಂದು ತೀರ್ಪು ನೀಡಿತ್ತು.

ನವದೆಹಲಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ತಮ್ಮ ವಿರುದ್ಧದ ಶಿಕ್ಷೆಯನ್ನು ಪ್ರಶ್ನಿಸಿ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಸಂಪಾದಕ ತರುಣ್ ತೇಜ್‌ಪಾಲ್ ಸುಪ್ರೀಂ ಕೋರ್ಟ್‌ ಮೊರೆ ಹೋಗಿದ್ದಾರೆ.

ಬಾಂಬೆ ಹೈಕೋರ್ಟ್‌ ನೀಡಿರುವ ತೀರ್ಪನ್ನು ಪ್ರಶ್ನಿಸಿ ವಕೀಲ ಆದಿತ್ಯ ಸಮದ್ದಾರ್ ಮೂಲಕ ಮೇಲ್ಮನವಿ ಸಲ್ಲಿಸಿದ್ದಾರೆ.

ಆಗಸ್ಟ್ 6ರಂದು ಬಾಂಬೆ ಹೈಕೋರ್ಟ್‌ನ ಗೋವಾ ಪೀಠವು ಮಾಜಿ ಸಹೋದ್ಯೋಗಿ ದಾಖಲಿಸಿದ್ದ ಅತ್ಯಾಚಾರ ಪ್ರಕರಣದಲ್ಲಿ ತೇಜ್‌ಪಾಲ್ ಅವರನ್ನು ದೋಷಿ ಎಂದು ತೀರ್ಪು ನೀಡಿತ್ತು.

2021ರಲ್ಲಿ ಗೋವಾ ಸೆಷನ್ಸ್ ಕೋರ್ಟ್ ನೀಡಿದ್ದ ಖುಲಾಸೆ ತೀರ್ಪನ್ನು ರದ್ದುಗೊಳಿಸಿದ್ದ ಹೈಕೋರ್ಟ್, ತೇಜ್‌ಪಾಲ್‌ಗೆ 10 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿತ್ತು.

ಇದರ ಜೊತೆಗೆ ರೂ.10.21 ಲಕ್ಷ ದಂಡವನ್ನೂ ವಿಧಿಸಲಾಗಿದ್ದು, ಸಂಪೂರ್ಣ ಮೊತ್ತವನ್ನು ಸಂತ್ರಸ್ತೆಗೆ ನೀಡುವಂತೆ ನ್ಯಾಯಾಲಯ ಆದೇಶಿಸಿತ್ತು.

ತೇಜ್‌ಪಾಲ್ ಪರ ವಕೀಲರ ಮನವಿಯನ್ನು ಪರಿಗಣಿಸಿದ ನ್ಯಾಯಾಲಯ, ಶರಣಾಗಲು ನೀಡಿದ್ದ ಎರಡು ವಾರಗಳ ಅವಧಿಯನ್ನು ನಾಲ್ಕು ವಾರಗಳಿಗೆ ವಿಸ್ತರಿಸಿತ್ತು.

ನ್ಯಾಯಮೂರ್ತಿಗಳಾದ ನೀಲಾ ಗೋಖಲೆ ಮತ್ತು ಅಮಿತ್ ಜಮ್ಸಂದೇಕರ್ ಅವರಿದ್ದ ಹೈಕೋರ್ಟ್‌ ಪೀಠವು ಭಾರತೀಯ ದಂಡ ಸಂಹಿತೆಯ ಸೆಕ್ಷನ್‌ 376(2)(f), 354A ಮತ್ತು 354B ಅಡಿಯಲ್ಲಿ ತೇಜ್‌ಪಾಲ್ ಅವರನ್ನು ದೋಷಿ ಎಂದು ಘೋಷಿಸಿತ್ತು.

ಇದಕ್ಕೂ ಮೊದಲು ಇದೇ ಪ್ರಕರಣದಲ್ಲಿ ಗೋವಾ ಸರ್ಕಾರವೂ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದು, ತೇಜ್‌ಪಾಲ್‌ಗೆ ವಿಧಿಸಿರುವ 10 ವರ್ಷಗಳ ಜೈಲು ಶಿಕ್ಷೆಯನ್ನು ಮತ್ತಷ್ಟು ಹೆಚ್ಚಿಸುವಂತೆ ಮನವಿ ಮಾಡಿದೆ.

ಗಂಭೀರ ಸ್ವರೂಪದ ಅಪರಾಧವಾಗಿರುವುದರಿಂದ ನ್ಯಾಯದ ದೃಷ್ಟಿಯಿಂದ ಇನ್ನಷ್ಟು ಕಠಿಣ ಶಿಕ್ಷೆ ಅಗತ್ಯ ಎಂದು ಗೋವಾ ಸರ್ಕಾರ ತನ್ನ ಮನವಿಯಲ್ಲಿ ಒತ್ತಾಯಿಸಿದೆ.

2013ರಲ್ಲಿ ಗೋವಾದಲ್ಲಿ ‘ತೆಹಲ್ಕಾ’ ನಿಯತಕಾಲಿಕೆ ಆಯೋಜಿಸಿದ್ದ ಕಾರ್ಯಕ್ರಮದ ವೇಳೆ ಹೋಟೆಲ್‌ನ ಲಿಫ್ಟ್‌ನಲ್ಲಿ ಕಿರಿಯ ಸಹೋದ್ಯೋಗಿಯ ಮೇಲೆ ಅತ್ಯಾಚಾರ ಎಸಗಿದ ಆರೋಪ ತೇಜ್‌ಪಾಲ್ ವಿರುದ್ಧ ದಾಖಲಾಗಿತ್ತು. 62 ವರ್ಷದ ತೇಜ್‌ಪಾಲ್ ತಮ್ಮ ವಿರುದ್ಧದ ಪ್ರಕರಣವನ್ನು ರಾಜಕೀಯ ಪ್ರೇರಿತ ಎಂದು ಹೇಳಿಕೊಂಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾಡಿಗೆ ಬೆಂಕಿ ಹಚ್ಚಿ, ಶಿಬಿರಗಳನ್ನೇ ಸ್ಫೋಟಿಸಿದ ಕಳ್ಳಬೇಟೆಗಾರರು: ಚಾಮರಾಜನಗರ ಎನ್‌ಕೌಂಟರ್ ಪ್ರತಿಕಾರಕ್ಕೆ 10 ಎಕರೆ ಅರಣ್ಯವೇ ಬಲಿ!

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ: ಕಾಂಗ್ರೆಸ್ ನಾಯಕರ ಮೌನಕ್ಕೆ ಮಲ್ಲಿಕಾರ್ಜುನ ಖರ್ಗೆ ಬೇಸರ, ‘ನನಗೆ ನೋವಾಗಿದೆ’ ಎಂದ ಅಧ್ಯಕ್ಷ..!

ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಪ್ರಜ್ವಲ್ ರೇವಣ್ಣಗೆ ಅಕ್ರಮವಾಗಿ ಮೊಬೈಲ್ ಕೊಟ್ಟಿದ್ದ ವ್ಯಕ್ತಿಯ ಬಂಧನ

Gen Z ವೋಟರ್ಸ್ ಮೇಲೆ ಮೋದಿ ಕಣ್ಣು: ಕೇಂದ್ರ ಸಚಿವರಿಗೆ 'Social media Scorecard'; ಯುವ ಜನತೆ ಸೆಳೆಯಲು ನಾಯಕರಿಗೆ ಹೊಸ ಟಾಸ್ಕ್..!

Pakಗೆ ಭಾರತ ಬಿಗ್ ಶಾಕ್: ದೆಹಲಿಯಲ್ಲಿ ಗರ್ಜಿಸಿದ ಬುಲ್ಡೋಜರ್; ಪಾಕಿಸ್ತಾನ ರಾಯಭಾರ ಕಚೇರಿ ಮುಂಭಾಗದ ಅನಧಿಕೃತ ನಿರ್ಮಾಣಗಳು ಧ್ವಂಸ..!