ಘಟನೆ ನಡೆದ ಸ್ಛಳ 
ದೇಶ

ದೆಹಲಿಯಲ್ಲಿ ದಾರಿಹೋಕರ ಮೇಲೆ ಚಾಕುವಿನಿಂದ ದಾಳಿ: ಆರು ಮಂದಿಗೆ ಗಾಯ!

ಮಂಗೋಲ್‌ಪುರಿಯ 'ಎಲ್ ಬ್ಲಾಕ್' (L Block) ನ ಮೂರು ಬೀದಿಗಳಲ್ಲಿ ಶುಕ್ರವಾರ ಸಂಜೆ ಈ ದಾಳಿಗಳು ನಡೆದಿವೆ. ಗಾಯಗೊಂಡವರನ್ನು ಸಂಜಯ್ ಗಾಂಧಿ ಸ್ಮಾರಕ ಆಸ್ಪತ್ರೆಗೆ ದಾಖಲಿಸಲಾಗಿದೆ.

ನವದೆಹಲಿ: ರಾಷ್ಟ್ರ ರಾಜಧಾನಿಯ ಮಂಗೋಲ್‌ಪುರಿ ಪ್ರದೇಶದಲ್ಲಿ ವ್ಯಕ್ತಿಗಳ ಗುಂಪೊಂದು ದಾರಿಹೋಕರ ಮೇಲೆ ಚಾಕುವಿನಿಂದ ದಾಳಿ ನಡೆಸಿದ ಪರಿಣಾಮ ಕನಿಷ್ಠ ಆರು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಂಗೋಲ್‌ಪುರಿಯ 'ಎಲ್ ಬ್ಲಾಕ್' (L Block) ನ ಮೂರು ಬೀದಿಗಳಲ್ಲಿ ಶುಕ್ರವಾರ ಸಂಜೆ ಈ ದಾಳಿಗಳು ನಡೆದಿವೆ. ಗಾಯಗೊಂಡವರನ್ನು ಸಂಜಯ್ ಗಾಂಧಿ ಸ್ಮಾರಕ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇವರಲ್ಲಿ ಇಬ್ಬರನ್ನು ನಂತರ ಸಫ್ದರ್‌ಜಂಗ್ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ರವಾನಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಆರೋಪಿಗಳನ್ನು ಗುರುತಿಸಲು ಮತ್ತು ಬಂಧಿಸಲು ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ. ಹಳೆಯ ದ್ವೇಷದ ಹಿನ್ನೆಲೆಯಲ್ಲಿ ಈ ದಾಳಿ ನಡೆದಿರಬಹುದು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

ಶಂಕಿತರಲ್ಲಿ ಕೆಲವರು ಅಪ್ರಾಪ್ತರು ಎಂದು ಶಂಕಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ದಾಳಿಕೋರರು ಜನರ ಬಳಿ ಇದ್ದ ವಸ್ತುಗಳನ್ನು ದೋಚಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದು, ಈ ಘಟನೆಯು ಆ ಪ್ರದೇಶದಲ್ಲಿ ಆತಂಕದ ವಾತಾವರಣವನ್ನು ಸೃಷ್ಟಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಹಾರ್ಮುಜ್ ಜಲಸಂಧಿ ನಮ್ಮದೇ: ಟ್ರಂಪ್ ಸ್ಫೋಟಕ ಹೇಳಿಕೆ; ನಮ್ಮ ಭೂಪ್ರದೇಶಕ್ಕೆ ಕೈಹಾಕಿದರೆ ಸರ್ವನಾಶ ಗ್ಯಾರಂಟಿ- ಟೆಹ್ರಾನ್ ಖಡಕ್ ವಾರ್ನಿಂಗ್

ತೆಲಂಗಾಣ Hazelo Pharmaದಲ್ಲಿ ಭೀಕರ ಅಗ್ನಿ ಅವಘಡ; ಇಬ್ಬರ ದುರ್ಮರಣ, ಎಂಟು ಮಂದಿಗೆ ಗಂಭೀರ ಗಾಯ..!

‘ನನಗೆ ಸಾಯುವುದೊಂದೇ ದಾರಿ’: ಐಫೋನ್ EMI, 'ಮಹಾ' ದುರಂತ, ಇಡೀ ಕುಟುಂಬ ಬಲಿ

ಮಗನನ್ನು ರಕ್ಷಿಸಲು ಹೋಗಿ ಬೆಟ್ಟದಿಂದ ಕೆಳಗೆ ಬಿದ್ದ ತಂದೆ; ಇಬ್ಬರು ಇಲ್ಲದೆ ನಾನೇಕೆ ಅಂತ ತಾಯಿಯೂ ಆತ್ಮಹತ್ಯೆ, Video

ತಾರಕಕ್ಕೇರಿದ ಉಕ್ರೇನ್ ಯುದ್ಧ; Zelensky ತವರೂರಿನ ಮೇಲೆ ರಷ್ಯಾ ಭೀಕರ ದಾಳಿ, ಕನಿಷ್ಟ 14 ಸಾವು!