ನವದೆಹಲಿ: ದೇಶದ ಅಧಿಕೃತ ಕಾರ್ಯಕ್ರಮಗಳಲ್ಲಿ ರಾಷ್ಟ್ರೀಯ ಗೀತೆ 'ವಂದೇ ಮಾತರಂ' ಹಾಡುವಿಕೆಯನ್ನು ಮೊದಲ ಎರಡು ಚರಣಗಳಿಗೆ ಸೀಮಿತಗೊಳಿಸಿದ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ನಿರ್ಧಾರವನ್ನು ಖಂಡಿಸಿ ಭಾರತೀಯ ಜನತಾ ಪಕ್ಷ(ಬಿಜೆಪಿ) ಶನಿವಾರ ನಿರ್ಣಯ ಅಂಗೀಕರಿಸಿದೆ.
ಇಂದು ಕೇಸರಿ ಪಕ್ಷದ ಪ್ರಧಾನ ಕಚೇರಿಯಲ್ಲಿ ನಡೆದ ಬಿಜೆಪಿ ಸಭೆಗೂ ಮುನ್ನ ಪಕ್ಷದ ಎಲ್ಲಾ ನಾಯಕರು ರಾಷ್ಟ್ರೀಯ ಗೀತೆ 'ವಂದೇ ಮಾತರಂ'ನ ಎಲ್ಲಾ ಆರು ಚರಣಗಳನ್ನು ಹಾಡಿದರು. ನಂತರ ಕಾಂಗ್ರೆಸ್‌ನ 'ವಂದೇ ಮಾತರಂ' ವಿರೋಧಿ ನಡೆ ಖಂಡಿಸಿ ನಿರ್ಣಯ ಅಂಗೀಕರಿಸಲಾಯಿತು.
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ವಂದೇ ಮಾತರಂ ಗೀತೆಗೆ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿದ್ದ ಬಿಜೆಪಿ, ಇದೀಗ ವಿರೋಧ ಪಕ್ಷವನ್ನು "ಹೊಸ ಮುಸ್ಲಿಂ ಲೀಗ್" ಎಂದು ಟೀಕಿಸಿದೆ.
ಕಾಂಗ್ರೆಸ್ ಪಕ್ಷದ ಕಾರ್ಯಕ್ರಮಗಳಲ್ಲಿ ಕೇವಲ ಮೊದಲ ಎರಡು ಚರಣಗಳನ್ನು ಮಾತ್ರ ಹಾಡಬೇಕು ಎಂಬ 1937ರ ನಿರ್ಣಯವನ್ನೇ ಮುಂದುವರಿಸಲು ಇಂದು ಗುರುವಾರ ನಿರ್ಧರಿಸಿದೆ.