ಹೈದರಾಬಾದ್: ಹೈದರಾಬಾದ್ ನಲ್ಲಿ ರಾಕಿಂಗ್ ಸ್ಟಾರ್ ಯಶ್ ಅಭಿನಯದ 'ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್'(Toxic: A Fairy Tale for Grown-Ups) ಚಿತ್ರದ ಫ್ರೀ ರಿಲೀಸ್ ಇವೆಂಟ್ ನಲ್ಲಿ ಅವಘಡವೊಂದು ಸಂಭವಿಸಿದೆ.
ಶನಿವಾರ ರಾತ್ರಿ ಹೈದ್ರಾಬಾದ್‌ನ ಮಲ್ಲ ರೆಡ್ಡಿ ವಿಶ್ವವಿದ್ಯಾಲಯದಲ್ಲಿ ನಡೆದ ಫ್ರೀ ರಿಲೀಸ್ ಇವೆಂಟ್ ನಲ್ಲಿ ಸೌಂಡ್ ಸಿಸ್ಟಮ್ ಕುಸಿದು ಬಿದ್ದು ನಾಲ್ವರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಇದರಿಂದ ಯಶ್ ಕೆಲ ಕಾಲ ಗಾಬರಿ ಆಗಿದ್ದರು ಮತ್ತು ಮಾತು ನಿಲ್ಲಿಸಿ ಏನಾಯಿತು ಅಂತ ವೇದಿಕೆ ಮೇಲಿಂದಲೇ ಕೇಳಿದ್ದರು.
ಈ ಅವಘಡಕ್ಕೆ ಸಂಬಂಧಿಸಿದಂತೆ ಇದೀಗ ಹೈದರಾಬಾದ್ ಪೊಲೀಸರು ಯಶ್ ಅವರಿಗೆ ಬಿಗ್ ಶಾಕ್ ನೀಡಿದ್ದು, . ಘಟನೆಗೆ ಸಂಬಂಧಿಸಿದಂತೆ ಮಲ್ಲಾ ರೆಡ್ಡಿ ಇನ್ಸ್ಟಿಟ್ಯೂಟ್ ಮ್ಯಾನೇಜ್ಮೆಂಟ್ ಹಾಗೂ ಇವೆಂಟ್ ಮ್ಯಾನೇಜರ್ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
"ಘಟನೆಯಲ್ಲಿ ಒಬ್ಬ ವಿದ್ಯಾರ್ಥಿಯ ಕಾಲಿನ ಮೂಳೆ ಮುರಿದಿದೆ ಮತ್ತು ಇತರ ಮೂವರಿಗೆ ಸಣ್ಣಪುಟ್ಟ ಗಾಯಗಳಾಗಿವೆ" ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದಾರೆ.
ಯಶ್ ಭಾಷಣ ಮಾಡುತ್ತಿದ್ದಾಗ, ವಿದ್ಯಾರ್ಥಿಗಳ ಗುಂಪೊಂದು ಸೌಂಡ್ ಬಾಕ್ಸ್ ಸಿಸ್ಟಮ್ ಸ್ಟ್ಯಾಂಡ್ ಮೇಲೆ ಹತ್ತಿತ್ತು. ಈ ವೇಳೆ ಇದ್ದಕ್ಕಿದ್ದಂತೆ ಅದು ಕುಸಿದು ಬಿದಿದ್ದೆ. ಪರಿಣಾಮ ನಾಲ್ವರು ಗಾಯಗೊಂಡಿದ್ದು, ಅವರನ್ನು ತಕ್ಷಣ ಹತ್ತಿರದ ಆಸ್ಪತ್ರೆಗೆ ಸಾಗಿಸಲಾಯಿತು ಎಂದು ಅವರು ಹೇಳಿದ್ದಾರೆ.