ಕಾಜಿಯಾ 
ದೇಶ

ಕೇರಳದ 19 ವರ್ಷದ ವಿದ್ಯಾರ್ಥಿನಿ ಮುಡಿಗೆ 'ಮಿಸ್ ಯೂನಿವರ್ಸ್ ಇಂಡಿಯಾ 2026' ಕಿರೀಟ; ಯಾರು ಈ ಅತಿಲೋಕ ಸುಂದರಿ?

ಭಾನುವಾರ ಜೈಪುರದಲ್ಲಿ ನಡೆದ ಸ್ಪರ್ಧೆಯ ಅಂತಿಮ ಸುತ್ತಿನಲ್ಲಿ 52 ಇತರ ಸ್ಪರ್ಧಿಗಳನ್ನು ಹಿಂದಿಕ್ಕಿದ ಕಾಜಿಯಾ, 'ಮಿಸ್ ಯೂನಿವರ್ಸ್ ಇಂಡಿಯಾ 2026' ವಿನ್ನರ್ ಆಗಿ ಹೊರಹೊಮ್ಮಿದರು.

ಜೈಪುರ: ಕೇರಳದ 19 ವರ್ಷದ ಕಾನೂನು ವಿದ್ಯಾರ್ಥಿನಿ ಕಾಜಿಯಾ ಲಿಜ್ ಮೆಜೊ ಅವರು 2026ರ ಮಿಸ್ ಯೂನಿವರ್ಸ್ ಇಂಡಿಯಾ ಕಿರೀಟವನ್ನು ತಮ್ಮ ಮುಡಿಗೇರಿಸಿಕೊಂಡಿದ್ದಾರೆ.

ಭಾನುವಾರ ಜೈಪುರದಲ್ಲಿ ನಡೆದ ಸ್ಪರ್ಧೆಯ ಅಂತಿಮ ಸುತ್ತಿನಲ್ಲಿ 52 ಇತರ ಸ್ಪರ್ಧಿಗಳನ್ನು ಹಿಂದಿಕ್ಕಿದ ಕಾಜಿಯಾ, 'ಮಿಸ್ ಯೂನಿವರ್ಸ್ ಇಂಡಿಯಾ 2026' ವಿನ್ನರ್ ಆಗಿ ಹೊರಹೊಮ್ಮಿದರು. ಈ ಮೂಲಕ ಈ ವೇದಿಕೆಯಲ್ಲಿ ಗೆಲುವು ಕಂಡ ಕೇರಳದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ.

ಕಾಜಿಯಾ ಲಿಜ್ ಮೆಜೊ ಅವರು ನವೆಂಬರ್‌ನಲ್ಲಿ ಪೋರ್ಟೊ ರಿಕೊದಲ್ಲಿ ನಡೆಯಲಿರುವ 75ನೇ ಮಿಸ್ ಯೂನಿವರ್ಸ್ ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧಿಸಲಿದ್ದಾರೆ.

ತಮಿಳುನಾಡಿನ ವೈಷ್ಣವಿ ಗಣೇಶ್ ಮೊದಲ ರನ್ನರ್ ಅಪ್ ಆಗಿ ಆಯ್ಕೆಯಾದರೆ, ಗುಜರಾತ್‌ನ ಅನುಶ್ರೀ ಸತವ್ಲೇಕರ್ ಎರಡನೇ ರನ್ನರ್ ಅಪ್ ಆಗಿ, ಮಹಾರಾಷ್ಟ್ರದ ತೇಜಸ್ವಿನಿ ಶ್ರೀವಾಸ್ತವ ಮೂರನೇ ರನ್ನರ್ ಅಪ್ ಆಗಿ, ಉತ್ತರಾಖಂಡದ ಅನುಭಾ ವಶಿಷ್ಟ್ ಚೌಧರಿ ನಾಲ್ಕನೇ ರನ್ನರ್ ಅಪ್ ಆಗಿ ಸೌಂದರ್ಯ ಸ್ಪರ್ಧೆಯಲ್ಲಿ ಸ್ಥಾನ ಪಡೆದರು.

ಯಾರು ಕಾಜಿಯಾ ಲಿಜ್ ಮೆಜೊ?

ಕೇರಳದ ಮಾವೆಲಿಕ್ಕರದಲ್ಲಿ ಹುಟ್ಟಿ ಬೆಳೆದ ಕಾಜಿಯಾ ಕಾನೂನು ವಿದ್ಯಾರ್ಥಿನಿಯಾಗಿದ್ದು, ಮಾಡೆಲ್, ನಟಿ ಮತ್ತು ನರ್ತಕಿಯಾಗಿಯೂ ಹೆಸರು ಮಾಡಿದ್ದಾರೆ. ಅವರ ಇನ್‌ಸ್ಟಾಗ್ರಾಮ್ ಬಯೋ ಅವರನ್ನು "ಮಾಡೆಲ್ - ನಟಿ - ನರ್ತಕಿ" ಎಂದು ವಿವರಿಸಿದೆ.

ಕಾಜಿಯಾ ಅವರು ಇನ್‌ಸ್ಟಾಗ್ರಾಮ್​ನಲ್ಲಿ 40,000ಕ್ಕೂ ಹೆಚ್ಚು ಫಾಲೋವರ್​ಗಳನ್ನು ಹೊಂದಿದ್ದಾರೆ. ಇದಕ್ಕೂ ಮುನ್ನ ಮಿಸ್ ಟೀನ್ ಇಂಟರ್ನ್ಯಾಷನಲ್, 2025ರಲ್ಲಿ ಭಾರತವನ್ನು ಪ್ರತಿನಿಧಿಸಿ, ಮೊದಲ ರನ್ನರ್-ಅಪ್ ಆಗಿ ಹೊರಹೊಮ್ಮಿದ್ದರು. ಇದೀಗ ಕೇವಲ 19ನೇ ವಯಸ್ಸಿನಲ್ಲಿ ಮಿಸ್ ಯೂನಿವರ್ಸ್ ಇಂಡಿಯಾ ಕಿರೀಟವನ್ನು ಗೆಲ್ಲುವ ಮೂಲಕ ದೊಡ್ಡ ಮನ್ನಣೆಗೆ ಪಾತ್ರರಾಗಿದ್ದಾರೆ.

ಅಬುಧಾಬಿಯಲ್ಲಿ ಬೆಳೆದ ಕಾಜಿಯಾ

2007 ರಲ್ಲಿ ಜನಿಸಿದ ಕಾಜಿಯಾ ಲಿಜ್ ಮೆಜೊ ಅವರು ತಮ್ಮ ಬಾಲ್ಯವನ್ನು ಯುಎಇಯ ಅಬುಧಾಬಿಯಲ್ಲಿ ಕಳೆದರು. ಅವರು ಎಮಿರೇಟ್ಸ್ ರಾಷ್ಟ್ರೀಯ ಶಾಲೆ, ಸೇಂಟ್ ಜೋಸೆಫ್ ಶಾಲೆ ಮತ್ತು ಅಬುಧಾಬಿ ಇಂಡಿಯನ್ ಶಾಲೆಯಲ್ಲಿ ಅಧ್ಯಯನ ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತೀಯ ಮೂಲದ ನ್ಯಾಯಶಾಸ್ತ್ರಜ್ಞೆಗೆ ಈ ಬಾರಿಯ ನೊಬೆಲ್ ಶಾಂತಿ ಪ್ರಶಸ್ತಿ; ನವನೀತ್ ನವಿ ಪಿಳ್ಳೈಗೆ ಒಲಿದ ನೊಬೆಲ್ ಶಾಂತಿ ಗರಿ

'ಪೋಷಕರು ನನ್ನ ಆ ಖಾಸಗಿ ವಿಡಿಯೋ ನೋಡಿದ್ದರು, ಏರ್‌ಪೋರ್ಟ್‌ನಲ್ಲೇ ಕುಳಿತು ಅತ್ತಿದ್ದೆ: ವೈರಲ್‌ ಪಾರ್ಟಿ ಬಗ್ಗೆ ಅಪೂರ್ವ ಮುಖಿಜಾ! Video

ಪ್ರಜ್ವಲ್​​ ರೇವಣ್ಣಗೆ ಬಿಗ್ ಶಾಕ್; ಪರಪ್ಪನ ಅಗ್ರಹಾರದಿಂದ ಬೆಳಗಾವಿಯ ಹಿಂಡಲಗಾ ಜೈಲಿಗೆ ಮಾಜಿ ಸಂಸದನ ಶಿಫ್ಟ್!

CJP ಪ್ರತಿಭಟನೆ ಹಿನ್ನೆಲೆಯಲ್ಲಿ ರೈಲುಗಳ ರದ್ದತಿ: ಯುವಕರಿಗೆ ಹೆದರುವುದಾದರೆ ಇಡೀ ದೇಶವನ್ನೇ ಬಂದ್ ಮಾಡಿ; ಕೇಂದ್ರದ ವಿರುದ್ಧ ಅಭಿಜಿತ್ ದೀಪ್ಕೆ ಆಕ್ರೋಶ

Cockroach Janta Partyಗೆ ಬಿಗ್ ಶಾಕ್: ಜಂತರ್ ಮಂತರ್ ಪ್ರತಿಭಟನೆಗೆ ಅನುಮತಿ ನಿರಾಕರಿಸಿದ ದೆಹಲಿ ಪೊಲೀಸರು, 57 ಮೆಟ್ರೋ ನಿಲ್ದಾಣಗಳು ಬಂದ್..!