ಜಾರ್ಖಂಡ್ ವಿದ್ಯಾರ್ಥಿಗಳ ಪ್ರತಿಭಟನೆ 
ದೇಶ

ಜಾರ್ಖಂಡ್‌ ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ ಹೋರಾಗಾರ್ತಿಗೆ 38 ಮಂದಿ ಲೈಂಗಿಕ ಕಿರುಕುಳ: ಎಫ್‌ಐಆರ್‌ ದಾಖಲು, ‘JMM ಗೂಂಡಾಗಳ’ ಕೃತ್ಯ ಎಂದ ಬಿಜೆಪಿ

ಸಂತ್ರಸ್ತೆ ಜೆಪಿಎಸ್‌ಸಿ-ಜೆಎಸ್‌ಎಸ್‌ಸಿ ರಿಫಾರ್ಮ್ಸ್‌ ಮಂಚ್‌ನ ಸದಸ್ಯೆಯಾಗಿದ್ದು, ಬಿಜೆಪಿ ನಾಯಕ ಹಾಗೂ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಬಾಬುಲಾಲ್ ಮರಾಂಡಿ ಅವರೊಂದಿಗೆ ಸೋಮವಾರ ಕೋಟ್ವಾಲಿ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದರು.

ರಾಂಚಿ: ನೇಮಕಾತಿ ಪರೀಕ್ಷೆಗಳಲ್ಲಿನ ಅಕ್ರಮಗಳನ್ನು ಖಂಡಿಸಿ ಜಾರ್ಖಂಡ್‌ನ ರಾಂಚಿಯಲ್ಲಿ ನಡೆದ ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ ಮಹಿಳಾ ಕಾರ್ಯಕರ್ತೆಯೊಬ್ಬರಿಗೆ ಕಿರುಕುಳ ನೀಡಿದ ಆರೋಪದ ಮೇಲೆ 38 ಮಂದಿ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಆಗಸ್ಟ್‌ 21ರಂದು ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಈ ಘಟನೆ ನಡೆದಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

ಸಂತ್ರಸ್ತೆ ಜೆಪಿಎಸ್‌ಸಿ-ಜೆಎಸ್‌ಎಸ್‌ಸಿ ರಿಫಾರ್ಮ್ಸ್‌ ಮಂಚ್‌ನ ಸದಸ್ಯೆಯಾಗಿದ್ದು, ಬಿಜೆಪಿ ನಾಯಕ ಹಾಗೂ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಬಾಬುಲಾಲ್ ಮರಾಂಡಿ ಅವರೊಂದಿಗೆ ಸೋಮವಾರ ಕೋಟ್ವಾಲಿ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದರು.

ಪ್ರಕರಣದಲ್ಲಿ ಎಂಟು ಮಂದಿಯನ್ನು ಹೆಸರಿಸಲಾಗಿದ್ದು, ಇನ್ನೂ 30 ಅಪರಿಚಿತ ವ್ಯಕ್ತಿಗಳ ವಿರುದ್ಧವೂ ಪ್ರಕರಣ ದಾಖಲಿಸಲಾಗಿದೆ. ಕಿರುಕುಳ ಸೇರಿದಂತೆ ಭಾರತೀಯ ನ್ಯಾಯ ಸಂಹಿತೆಯ (BNS) ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಕೋಟ್ವಾಲಿ ಠಾಣೆಯ ಇನ್‌ಚಾರ್ಜ್‌ ಅಧಿಕಾರಿ ಸನೋಜ್ ಚೌಧರಿ ತಿಳಿಸಿದ್ದಾರೆ.

ನೇಮಕಾತಿ ಪರೀಕ್ಷೆಗಳಲ್ಲಿನ ಅಕ್ರಮಗಳನ್ನು ವಿರೋಧಿಸಿ ಆಲ್ಬರ್ಟ್ ಎಕ್ಕಾ ಚೌಕ್‌ ಬಳಿ ಮೆರವಣಿಗೆ ನಡೆಸುತ್ತಿದ್ದ ವೇಳೆ ಘಟನೆ ನಡೆದಿದೆ ಎನ್ನಲಾಗಿದೆ.

ಸಂತ್ರಸ್ತೆ ಹೇಳಿದ್ದೇನು?

“ನಾವು ಶಾಂತಿಯುತವಾಗಿ ಮೆರವಣಿಗೆ ನಡೆಸುತ್ತಿದ್ದೆವು. ಮುಖ್ಯಮಂತ್ರಿ ಹೇಮಂತ್ ಸೊರೆನ್ ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಪ್ರತಿಕೃತಿ ದಹಿಸಲು ಮುಂದಾಗಿದ್ದೆವು. ಈ ವೇಳೆ ಸುಮಾರು ಎಂಟು ಮಂದಿ ಪರಿಚಿತರು ಹಾಗೂ 30ಕ್ಕೂ ಹೆಚ್ಚು ಅಪರಿಚಿತರು ನನ್ನ ಮೇಲೆ ಹಲ್ಲೆ ನಡೆಸಿ ಕಿರುಕುಳ ನೀಡಿದರು” ಎಂದು ಸಂತ್ರಸ್ತೆ ಆರೋಪಿಸಿದ್ದಾರೆ.

‘JMM ಗೂಂಡಾಗಳ’ ಕೃತ್ಯ ಎಂದ ಬಿಜೆಪಿ

ಘಟನೆಯನ್ನು ಖಂಡಿಸಿರುವ ಬಾಬುಲಾಲ್ ಮರಾಂಡಿ, ಪ್ರಜಾಸತ್ತಾತ್ಮಕವಾಗಿ ತಮ್ಮ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿಗಳ ಮೇಲೆ “ಜೆಎಂಎಂ ಗೂಂಡಾಗಳು” ನಡೆಸಿದ ಹೇಡಿತನದ ದಾಳಿ ಅತ್ಯಂತ ಖಂಡನೀಯ ಎಂದು ಹೇಳಿದ್ದಾರೆ. ಅಂತೆಯೇ “ಬಿಜೆಪಿ ವಿದ್ಯಾರ್ಥಿಗಳ ಪರವಾಗಿ ದೃಢವಾಗಿ ನಿಂತಿದೆ. ಅವರ ಹೋರಾಟಕ್ಕೆ ಎಲ್ಲ ಹಂತಗಳಲ್ಲೂ ಬೆಂಬಲ ನೀಡಲಿದೆ” ಎಂದು ಮರಾಂಡಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

SIR ವಿರುದ್ಧ 'ಚುನಾವಣಾ ಆಯೋಗ ಚಲೋ' ಘೋಷಿಸಿದ ಪ್ರಕಾಶ್ ರಾಜ್; ಆಯುಕ್ತರ ರಾಜೀನಾಮೆಗೆ ಆಗ್ರಹ

ನಾಳೆ ಜಗತ್ತಿನಾದ್ಯಂತ ಯಶ್ ನಟನೆಯ 'Toxic' ಚಿತ್ರ ಬಿಡುಗಡೆ; ಇಂದು ದಿಢೀರ್ ಕೋರ್ಟ್ ಮೆಟ್ಟಿಲೇರಿದ ನಿರ್ಮಾಪಕ!

ಬೆಂಗಳೂರು: ಸಿಗ್ನಲ್‌ನಲ್ಲಿ ನಿಂತಿದ್ದ ಬೈಕ್‌ಗೆ ವೇಗವಾಗಿ ಬಂದ ಕಾರು ಡಿಕ್ಕಿ, ಹೇರ್ ಸ್ಟೈಲಿಸ್ಟ್ ಸಾವು; Video