ಒಂದೇ ಕುಟುಂಬದ ಐವರು ಆತ್ಮಹತ್ಯೆ 
ದೇಶ

ಶ್ರೀಶೈಲ: ಹೋಟೆಲ್‌ನಲ್ಲಿ ಒಂದೇ ಕುಟುಂಬದ ಐವರು ಆತ್ಮಹತ್ಯೆ; ಕಾರಣ ನಿಗೂಢ

ಪ್ರಾಥಮಿಕ ವರದಿಗಳ ಪ್ರಕಾರ, ಇಬ್ಬರು ಸದಸ್ಯರು ಹಾಲ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದರೆ, ಮೂವರು ಮಹಿಳೆಯರು ಬಾತ್ ರೂಮ್ ನಲ್ಲಿ ಮೃತಪಟ್ಟಿರುವುದು ಕಂಡುಬಂದಿದೆ.

ಶ್ರೀಶೈಲಂ: ಶ್ರೀಶೈಲದ ವಡ್ಡೇರಾದ ಖಾಸಗಿ ಹೋಟೆಲ್‌ನ ಕೊಠಡಿ ಸಂಖ್ಯೆ 12 ರಲ್ಲಿ ಒಂದೇ ಕುಟುಂಬದ ಐವರು ಸದಸ್ಯರು ಆತ್ಮಹತ್ಯೆ ಮಾಡಿಕೊಂಡಿರುವ ಭೀಕರ ಘಟನೆ ನಡೆದಿದೆ.

ಪ್ರಾಥಮಿಕ ವರದಿಗಳ ಪ್ರಕಾರ, ಇಬ್ಬರು ಸದಸ್ಯರು ಹಾಲ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದರೆ, ಮೂವರು ಮಹಿಳೆಯರು ಬಾತ್ ರೂಮ್ ನಲ್ಲಿ ಮೃತಪಟ್ಟಿರುವುದು ಕಂಡುಬಂದಿದೆ.

ಮೃತರನ್ನು ಆಂಧ್ರಪ್ರದೇಶದ ಸತ್ಯಸಾಯಿ ಜಿಲ್ಲೆಯ ಬಟ್ಟಲಪಲ್ಲಿ ಗ್ರಾಮದ ನಿವಾಸಿಗಳಾದ ಸುಧಾಕರ್ (36), ಗೋಗುಳ ಆದಿಲಕ್ಷ್ಮಿ (50), ಮಲ್ಲೇಶ್ವರಿ (45), ಶ್ರೀದೇವಿ (33) ಮತ್ತು ಮಣಿಕಂಠ (15) ಎಂದು ಗುರುತಿಸಲಾಗಿದೆ.

ಈ ಘಟನೆ ಎರಡು ದಿನಗಳ ಹಿಂದೆಯೇ ನಡೆದಿರುವುದಾಗಿ ವರದಿಯಾಗಿದೆ. ಆದರೆ ತಡವಾಗಿ ಬೆಳಕಿಗೆ ಬಂದಿದೆ. ಹೋಟೆಲ್ ನ ಒಂದು ಕೊಠಡಿಯಿಂದ ದುರ್ವಾಸನೆ ಬರುತ್ತಿರುವುದನ್ನು ಗಮನಿಸಿದ ಸಿಬ್ಬಂದಿ, ಹೋಗಿ ಪರಿಶೀಲಿಸಿದಾಗ, ಕೊಠಡಿ ಸಂಖ್ಯೆ 12 ರಲ್ಲಿ ಐವರು ಮೃತಪಟ್ಟಿರುವುದು ಕಂಡುಬಂದಿವೆ. ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಪೊಲೀಸರು ಬಾಗಿಲು ತೆಗೆದು ಕೊಠಡಿಯೊಳಗೆ ಹೋಗಿ ಪರಿಶೀಲಿಸಿದ್ದಾರೆ. ಅಲ್ಲಿ ಫ್ಯಾನ್‌ಗೆ ನೇಣುಬಿಗಿದುಕೊಂಡ ಸ್ಥಿತಿಯಲ್ಲಿ ಮೂವರು ಮಹಿಳೆಯರು ಹಾಗೂ ಇಬ್ಬರು ಪುರುಷರು ಪತ್ತೆಯಾಗಿದ್ದಾರೆ.

ಶ್ರೀಶೈಲಂ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದು, ಮೇಲ್ನೋಟಕ್ಕೆ ಆರ್ಥಿಕ ಸಮಸ್ಯೆ ಕಾರಣ ಎಂದು ಹೇಳಲಾಗಿದೆ, ಆದರೆ ಸಾವಿಗೆ ನಿಖರ ಕಾರಣ ಪತ್ತೆಹಚ್ಚಲು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

ಹಿರಿಯೂರು ಬಳಿ ಸಮರ್ಥ್ ಶಾಮನೂರು ಕಾರು ಅಪಘಾತ: ಕಾಂಗ್ರೆಸ್ ಶಾಸಕ ಅಪಾಯದಿಂದ ಪಾರು!

20 TMC ನಾಯಕರ ಅನರ್ಹತೆ ಪ್ರಕರಣ: ಅಭಿಷೇಕ್‌ ಬ್ಯಾನರ್ಜಿ ಅರ್ಜಿ ವಿಚಾರಣೆಗೆ ಸುಪ್ರೀಂಕೋರ್ಟ್‌ ಅಸ್ತು; ಬಂಡಾಯ ಸಂಸದರಿಗೆ Notice ಜಾರಿ..!

"ಕೇಸರಿ ಧರಿಸುವ ಯೋಗ ಗುರು ಸಭ್ಯತೆಯ ಎಲ್ಲಾ ಮಿತಿಗಳನ್ನು ಮೀರಿದ್ದಾರೆ": ಬಾಬಾ ರಾಮ್‌ದೇವ್ ವಿರುದ್ಧ ಕಂಗನಾ ಮತ್ತೆ ಕಿಡಿ

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಎಲ್ಲಾ 329 ಅಭ್ಯರ್ಥಿಗಳಿಗೆ CID ಶಾಕ್, ಇಂದೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್!