ಮಣಿಪುರದಲ್ಲಿ ಉಗ್ರರ ಅಟ್ಟಹಾಸ (ಸಂಗ್ರಹ ಚಿತ್ರ) 
ದೇಶ

ಮಣಿಪುರದಲ್ಲಿ ಉಗ್ರರ ಅಟ್ಟಹಾಸ: ನಾಲ್ವರ ಸಾವು, ಒಬ್ಬ ನಾಪತ್ತೆ

ಮಣಿಪುರದ ಕಾಂಗ್‌ಪೊಕ್ಪಿ ಜಿಲ್ಲೆಯಲ್ಲಿ ಶಸ್ತ್ರಸಜ್ಜಿತ ಉಗ್ರರು ವಾಹನದ ಮೇಲೆ ಹೊಂಚುಹಾಕಿ ದಾಳಿ ನಡೆಸಿದ್ದು, ಲಿಯಾಂಗ್‌ಮೈ ನಾಗಾ ಸಮುದಾಯಕ್ಕೆ ಸೇರಿದ ನಾಲ್ವರು ಮೃತಪಟ್ಟಿದ್ದಾರೆ.

ಇಂಫಾಲ: ಮಣಿಪುರದಲ್ಲಿ ಮತ್ತೆ ಉಗ್ರರು ಅಟ್ಟಹಾಸ ಮೆರೆದಿದ್ದು, ವಾಹನದ ಮೇಲೆ ನಡೆದ ಭೀಕರ ದಾಳಿಯಲ್ಲಿ 4 ಮಂದಿ ಸಾವನ್ನಪ್ಪಿ ಓರ್ವ ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಣಿಪುರದ ಕಾಂಗ್‌ಪೊಕ್ಪಿ ಜಿಲ್ಲೆಯಲ್ಲಿ ಶಸ್ತ್ರಸಜ್ಜಿತ ಉಗ್ರರು ವಾಹನದ ಮೇಲೆ ಹೊಂಚುಹಾಕಿ ದಾಳಿ ನಡೆಸಿದ್ದು, ಲಿಯಾಂಗ್‌ಮೈ ನಾಗಾ ಸಮುದಾಯಕ್ಕೆ ಸೇರಿದ ನಾಲ್ವರು ಮೃತಪಟ್ಟಿದ್ದಾರೆ. ಮತ್ತೊಬ್ಬ ವ್ಯಕ್ತಿ ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ.

ಮೂಲಗಳ ಪ್ರಕಾರ ಮಕುಯಿ ಆಶಾಂಗ್‌ ಮತ್ತು ಥಬಂಬಾ ನಾಗಾ ನಡುವಿನ ನಿರ್ಜನ ಪ್ರದೇಶದಲ್ಲಿ ವಾಹನ ಸಾಗುತ್ತಿದ್ದ ವೇಳೆ ಉಗ್ರರು ದಾಳಿ ನಡೆಸಿದ್ದಾರೆ. ದಾಳಿಯ ತೀವ್ರತೆಗೆ ನಾಲ್ವರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮೃತದೇಹಗಳನ್ನು ಸೆನಾಪತಿ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನೆಯ ಬಳಿಕ ಪ್ರದೇಶದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಭದ್ರತಾ ಪಡೆಗಳು ಪರಿಸ್ಥಿತಿಯ ಮೇಲೆ ನಿಗಾ ವಹಿಸಿವೆ. ನಾಪತ್ತೆಯಾಗಿರುವ ವ್ಯಕ್ತಿಯ ಪತ್ತೆಗಾಗಿ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ.

ಅಂಗಡಿ-ಮುಂಗಟ್ಟು ಬಂದ್

ನಾಲ್ವರ ಹತ್ಯೆಯನ್ನು ಖಂಡಿಸಿ ನಾಗಾ ಪೀಪಲ್ಸ್ ಆರ್ಗನೈಸೇಷನ್‌ (NPO) ಸೆನಾಪತಿ ಜಿಲ್ಲಾ ಕೇಂದ್ರ ಪಟ್ಟಣದಲ್ಲಿನ ಅಂಗಡಿ-ಮುಂಗಟ್ಟು ಹಾಗೂ ವಾಣಿಜ್ಯ ಸಂಸ್ಥೆಗಳನ್ನು ಬಂದ್ ಮಾಡುವಂತೆ ಸೂಚಿಸಿದೆ. ಘಟನೆಯ ಹಿನ್ನೆಲೆಯಲ್ಲಿ ಪ್ರದೇಶದಲ್ಲಿ ಭದ್ರತೆ ಹೆಚ್ಚಿಸಲಾಗಿದ್ದು, ದಾಳಿಯ ಹಿಂದಿರುವ ಶಸ್ತ್ರಸಜ್ಜಿತ ಗುಂಪು ಹಾಗೂ ದಾಳಿಯ ಉದ್ದೇಶದ ಕುರಿತು ತನಿಖೆ ಮುಂದುವರಿದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘Vote chori’ ಹೈಡ್ರಾಮಾ: "ಭೇಟಿ ಸಾಧ್ಯವಿಲ್ಲ, ಏನಿದ್ದರೂ ಕೋರ್ಟ್ ಮೂಲಕವೇ ಬನ್ನಿ; ರಾಹುಲ್ ಗಾಂಧಿ-ಖರ್ಗೆ ಭೇಟಿ ಮನವಿ ತಿರಸ್ಕರಿಸಿದ CJI ಸೂರ್ಯ ಕಾಂತ್..!

ಹೆಬ್ಬಾಳ ಕಿರು ಸುರಂಗ ಯೋಜನೆ "ಅವೈಜ್ಞಾನಿಕ": 1,350 ಕೋಟಿ ರೂ. ಸಾರ್ವಜನಿಕ ಹಣ ಪೋಲು: ಸಂಸದ ತೇಜಸ್ವಿ ಸೂರ್ಯ ಆಕ್ಷೇಪ

ನಾನೀಗ DCM, ಡಿಕೆ.ಶಿವಕುಮಾರ್ CM, ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ: ಡಾ. ಜಿ. ಪರಮೇಶ್ವರ್

ಶಕ್ತಿ, ಜ್ಞಾನ, ಸಂಸ್ಕೃತಿ, ಸಮಾನತೆಯ ಸಂಗಮ ಮೈಸೂರು ದಸರಾ: ಸಿಎಂ ಡಿಕೆ ಶಿವಕುಮಾರ್

ಇಂಧನ ಸ್ಥಾವರಗಳ ಮೇಲಿನ ದಾಳಿಯನ್ನು ನಿಲ್ಲಿಸಲು ರಷ್ಯಾ-ಉಕ್ರೇನ್ ಒಪ್ಪಿಕೊಂಡಿವೆ: ಟ್ರಂಪ್ ಘೋಷಣೆ