8 ಕಾಂಗ್ರೆಸ್ ಶಾಸಕರನ್ನು ಸದನದಿಂದ ಹೊರಹಾಕಿದ ಸ್ಪೀಕರ್! Online Desk
ದೇಶ

ಅಧಿವೇಶನದಲ್ಲಿ ಭಾರೀ ಹೈಡ್ರಾಮಾ; 8 ಕಾಂಗ್ರೆಸ್ ಶಾಸಕರನ್ನು ಸದನದಿಂದ ಹೊರಹಾಕಿದ ಸ್ಪೀಕರ್!

ಹರಿಯಾಣ ವಿಧಾನಸಭೆಯ ಮುಂಗಾರು ಅಧಿವೇಶನದ ಆರಂಭದ ದಿನವೇ ಸದನದಲ್ಲಿ ಭಾರಿ ಗದ್ದಲ ಮತ್ತು ನಿಯಮ ಉಲ್ಲಂಘನೆ ಆರೋಪದ ಮೇಲೆ 8 ಕಾಂಗ್ರೆಸ್ ಶಾಸಕರನ್ನು ಅಮಾನತುಗೊಳಿಸಿ ಸ್ಪೀಕರ್ ಹರ್ವಿಂದರ್ ಕಲ್ಯಾಣ್ ಅವರು ಆದೇಶ ಹೊರಡಿಸಿದ್ದಾರೆ. ಆ ಕುರಿತ ವರದಿ ಇಲ್ಲಿದೆ:

ಚಂಡೀಗಢ (ಹರಿಯಾಣ): ಸಂಸತ್ತಿನ ಅಧಿವೇಶನವೇ ಆಗಲಿ ಅಥವಾ ಯಾವುದೇ ರಾಜ್ಯದ ವಿಧಾನಸಭೆಯ ಅಧಿವೇಶನವಾಗಲಿ ಪೂರ್ಣ ಪ್ರಮಾಣದಲ್ಲಿ ನಡೆಯಲ್ಲ! ಒಂದು ಆಡಳಿತ ಪಕ್ಷ ಹಾಗೂ ವಿಪಕ್ಷಗಳ ಗದ್ದಲದಿಂದ ಅಧಿವೇಶನಗಳು ಮುಂದೂಡುತಲೆ ಇರುತ್ತವೆ. ಜೊತೆಗೆ ಈ ಅಧಿವೇಶನಗಳಿಗೆ ಹಾಜಾರಗುವ ಸದಸ್ಯರ ಸಂಖ್ಯೆ ಕೂಡ ಕಮ್ಮಿಯೇ. ಅದರಲ್ಲೂ, ಕೆಲವು ಸದಸ್ಯರು ಅನಾರೋಗ್ಯದ ನೆಪವೊಡ್ಡಿ ವರ್ಷವಾದರೂ ಸದನದತ್ತ ಮುಖ ಮಾಡುವುದೇ ಇಲ್ಲ! ಇದರ ನಡುವೆ, ಸದನಕ್ಕೆ ಬಂದು ಗದ್ದಲ ಉಂಟು ಮಾಡಿದ ಆರೋಪದ ಮೇರೆಗೆ ಶಾಸಕರು ಅಮಾನತು ಆಗುವುದು ಸಾಮಾನ್ಯವಾಗಿದೆ. ಅದಕ್ಕೆ ಸ್ಪಷ್ಟ ಉದಾಹರಣೆ ಹರಿಯಾಣದಲ್ಲಿ ನಡೆದಿರುವ ಘಟನೆ. ಆ ಕುರಿತ ವರದಿ ಇಲ್ಲಿದೆ:

ಹರಿಯಾಣ ವಿಧಾನಸಭೆಯ ಮುಂಗಾರು ಅಧಿವೇಶನದ ಆರಂಭದ ದಿನವೇ ಸದನದಲ್ಲಿ ಭಾರಿ ಗದ್ದಲ ಮತ್ತು ನಿಯಮ ಉಲ್ಲಂಘನೆ ಆರೋಪದ ಮೇಲೆ 8 ಕಾಂಗ್ರೆಸ್ ಶಾಸಕರನ್ನು ಅಮಾನತುಗೊಳಿಸಿ ಸ್ಪೀಕರ್ ಹರ್ವಿಂದರ್ ಕಲ್ಯಾಣ್ ಅವರು ಆದೇಶ ಹೊರಡಿಸಿದ್ದಾರೆ. ವಿಕಾಸ್ ಸಹಾರನ್, ಆದಿತ್ಯ ಸುರ್ಜೇವಾಲಾ, ಗೋಕುಲ್ ಸೆಟಿಯಾ, ಬಲರಾಮ್ ಡಾಂಗಿ, ಇಂದುರಾಜ್ ನರ್ವಾಲ್, ದೇವೇಂದರ್ ಹನ್ಸ್, ಶಕುಂತಲಾ ಖಟಕ್, ಜಸ್ಸಿ ಪೆಟ್ವರ್ ಅವರು ಅಮಾನತು ಆದ ಶಾಸಕರಾಗಿದ್ದಾರೆ.

ಅಮಾನತಿಗೆ ಅಸಲಿ ಕಾರಣವೇನು?

ಅಧಿವೇಶನದ ವೇಳೆ ಹರಿಯಾಣ ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ ಅವರು ನೀಡಿದ ಒಂದು ಹೇಳಿಕೆಯನ್ನು ಕಾಂಗ್ರೆಸ್ ಶಾಸಕರು ತಮಗೆ "ಗೂಂಡಾಗಳು" ಎಂದು ಕರೆದಿದ್ದಾರೆ ಎಂದು ಅರ್ಥೈಸಿಕೊಂಡರು. ಈ ಹೇಳಿಕೆಯನ್ನು ಸದನದ ನಡಾವಳಿಯಿಂದ ತೆಗೆದುಹಾಕಬೇಕು ಎಂದು ವಿರೋಧ ಪಕ್ಷದ ನಾಯಕ ಭೂಪಿಂದರ್ ಸಿಂಗ್ ಹೂಡಾ ಮತ್ತು ಕಾಂಗ್ರೆಸ್ ಶಾಸಕರು ಭಾರಿ ಪಟ್ಟು ಹಿಡಿದರು. ಈ ಬಗ್ಗೆ, ಸ್ಪೀಕರ್ ಅವರು ಪರಿಶೀಲಿಸಿ ನಿರ್ಧಾರ ಕೈಗೊಳ್ಳುವುದಾಗಿ ಹೇಳಿದರೂ ಸಮಾಧಾನಗೊಳ್ಳದ ಕಾಂಗ್ರೆಸ್ ಶಾಸಕರು, ಸದನದ ಭಾವಿಗೆ ನುಗ್ಗಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಲಾರಂಭಿಸಿದರು. ಇದರೊಂದಿಗೆ, ಪೇಪರ್ ಲೀಕ್ ಹಗರಣ ಸೇರಿದಂತೆ ವಿವಿಧ ವಿಷಯಗಳ ಕುರಿತ ಬ್ಯಾನರ್ ಮತ್ತು ಪ್ಲೇಕಾರ್ಡ್‌ಗಳನ್ನು ಪ್ರದರ್ಶಿಸಿದರು. ಇನ್ನು,  ಪ್ರತಿಭಟನೆಯ ತೀವ್ರತೆ ಹೆಚ್ಚಾದಾಗ ಸ್ಪೀಕರ್ ಹರ್ವಿಂದರ್ ಕಲ್ಯಾಣ್ ಅವರು, "ಶಾಸಕರು ಸದನದ ನಿಯಮಾವಳಿ ಮತ್ತು ಗೌರವವನ್ನು ಗಾಳಿಗೆ ತೂರುತ್ತಿದ್ದಾರೆ. ವಿಡಿಯೋಗಳನ್ನು ಪ್ರದರ್ಶಿಸುತ್ತಾ ಭದ್ರತಾ ಸಿಬ್ಬಂದಿಯ ಮೇಲೆಯೇ ಕೈಮಾಡುತ್ತಿದ್ದಾರೆ" ಎಂದು ಗಂಭೀರ ಆಕ್ಷೇಪ ವ್ಯಕ್ತಪಡಿಸಿದರು.

ಅದರಂತೆ, ಕಾಂಗ್ರೆಸ್ ಶಾಸಕರು ಪದೇ ಪದೇ ಎಚ್ಚರಿಕೆ ನೀಡಿದರೂ ಶಾಂತರಾಗದಿದ್ದಾಗ, ಸ್ಪೀಕರ್ ಅವರು ಎಂಟು ಶಾಸಕರನ್ನು ಆ ದಿನದ ಮಟ್ಟಿಗೆ ಅಮಾನತುಗೊಳಿಸಿ ತಕ್ಷಣವೇ ಸದನದಿಂದ ಹೊರಗೆ ಕಳುಹಿಸುವಂತೆ ಮಾರ್ಷಲ್‌ಗಳಿಗೆ ಆದೇಶ ನೀಡಿದರು. ಇನ್ನು, ಈ ಘಟನೆಯನ್ನು ತೀವ್ರವಾಗಿ ಖಂಡಿಸಿದ ವಿರೋಧ ಪಕ್ಷದ ನಾಯಕ ಭೂಪಿಂದರ್ ಸಿಂಗ್ ಹೂಡಾ, "ನಾನು ನನ್ನ ಇಡೀ ರಾಜಕೀಯ ಜೀವನದಲ್ಲಿ ಶಾಸಕರೊಂದಿಗೆ ಇಂತಹ ಕೀಳು ನಡವಳಿಕೆಯನ್ನು ಎಲ್ಲಿಯೂ ನೋಡಿಲ್ಲ. ವಿರೋಧ ಪಕ್ಷ ಎತ್ತಿರುವ ಗಂಭೀರ ಪ್ರಶ್ನೆಗಳಿಗೆ ಉತ್ತರಿಸಲು ಧೈರ್ಯವಿಲ್ಲದ ಸರ್ಕಾರ ನಮ್ಮನ್ನು ಹತ್ತಿಕ್ಕಲು ನೋಡುತ್ತಿದೆ" ಎಂದು ಆಕ್ರೋಶ ಹೊರಹಾಕಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳ-ಟಿಬೆಟ್ ಗಡಿಯಲ್ಲಿ ಜಲಪ್ರಳಯ: ಸಾವಿನ ಸಂಖ್ಯೆ 469ಕ್ಕೆ ಏರಿಕೆ; 1,400ಕ್ಕೂ ಹೆಚ್ಚು ಜನ ನಾಪತ್ತೆ, ಮತ್ತೊಂದು ಪ್ರವಾಹದ ಭೀತಿ..!

US-Iran ಸಂಘರ್ಷ ಉಲ್ಬಣ: ನೌಕಾ ದಿಗ್ಬಂಧನ ಮುಂದುವರಿದರೆ ಶೇ.100ರಷ್ಟು ಪ್ರತೀಕಾರ; ‘ನೆತನ್ಯಾಹು ನರಕಕ್ಕೆ’: ಟ್ರಂಪ್‌ಗೆ Tehran ಖಡಕ್ ಎಚ್ಚರಿಕೆ

ಪ್ರವಾಹದ ಅಬ್ಬರಕ್ಕೆ ನೇಪಾಳ ತತ್ತರ; ಸಂಪರ್ಕಕ್ಕೆ ಸಿಗದೆ 290 ಭಾರತೀಯರು, ರಕ್ಷಣಾ ಕಾರ್ಯಾಚರಣೆ ಚುರುಕು..!

ರಕ್ಷಾ ಬಂಧನದ ಇತಿಹಾಸ ಏನು? ಸಹೋದರರಿಗೆ ರಾಖಿ ಕಟ್ಟುವುದರ ಮಹತ್ವ ತಿಳಿದುಕೊಳ್ಳಿ!

ಸಿಲಿಕಾನ್ ಸಿಟಿಯಲ್ಲಿ ಮಧ್ಯರಾತ್ರಿ ಗುಂಡಿನ ಸದ್ದು; ಮಾರಕಾಸ್ತ್ರ ಹಿಡಿದು ಅಬ್ಬರಿಸುತ್ತಿದ್ದ ರೌಡಿಶೀಟರ್ ಹೆಡೆಮುರಿ ಕಟ್ಟಿದ ಬೆಂಗಳೂರಿನ ಪೊಲೀಸರು