ಸಂಗ್ರಹ ಚಿತ್ರ 
ದೇಶ

ಗಾಯಕ Ankit Balyan ಹತ್ಯೆ ಪ್ರಕರಣ: ಉತ್ತರ ಪ್ರದೇಶದಲ್ಲಿ ಎನ್‌ಕೌಂಟರ್; ಇಬ್ಬರು sharpshooterಗಳು ಹತ..!

ಕೈರಾನಾ ರಸ್ತೆಯಲ್ಲಿರುವ ಇಂಡಿಯನ್ ಗ್ಯಾಸ್ ಗೋದಾಮಿನ ಬಳಿ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ನಡೆದ ಪ್ರತಿದಾಳಿ ಗುಂಡಿನ ಚಕಮಕಿಯಲ್ಲಿ ಇಬ್ಬರೂ ಗಾಯಗೊಂಡಿದ್ದರು.

ಲಖನೌ: ಪ್ರಸಿದ್ಧ ಹರಿಯಾಣವಿ ಗಾಯಕ ಮತ್ತು ಯೂಟ್ಯೂಬರ್ ಅಂಕಿತ್ ಬಾಲ್ಯನ್ ಕೊಲೆ ಪ್ರಕರಣದ ಇಬ್ಬರು ಪ್ರಮುಖ ಶೂಟರ್‌ಗಳನ್ನು ಉತ್ತರ ಪ್ರದೇಶ ಪೊಲೀಸರು ಎನ್‌ಕೌಂಟರ್‌ನಲ್ಲಿ ಹೊಡೆದುರುಳಿಸಿದ್ದಾರೆ.

ಸೋಮವಾರ (ಆಗಸ್ಟ್ 31, 2026) ಮುಂಜಾನೆ ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯಲ್ಲಿ ಪೊಲೀಸ್ ಎನ್‌ಕೌಂಟರ್‌ನಲ್ಲಿ ಆರೋಪಿಗಳು ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ.

ಶಾಮ್ಲಿ ಪೊಲೀಸರ ಪ್ರಕಟಣೆ ಪ್ರಕಾರ, ಮೋಹಿತ್ (22) ಮತ್ತು ಸುಮಿತ್ (24) ತಲಾ ರೂ.50,000 ಬಹುಮಾನ ಘೋಷಿಸಲಾಗಿದ್ದ ಆರೋಪಿಗಳಾಗಿದ್ದರು.

ಕೈರಾನಾ ರಸ್ತೆಯಲ್ಲಿರುವ ಇಂಡಿಯನ್ ಗ್ಯಾಸ್ ಗೋದಾಮಿನ ಬಳಿ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ನಡೆದ ಪ್ರತಿದಾಳಿ ಗುಂಡಿನ ಚಕಮಕಿಯಲ್ಲಿ ಇಬ್ಬರೂ ಗಾಯಗೊಂಡಿದ್ದರು.

ಗಾಯಗೊಂಡ ಆರೋಪಿಗಳನ್ನು ಶಾಮ್ಲಿಯ ಜಿಲ್ಲಾ ಸಂಯುಕ್ತ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ವೇಳೆ ಇಬ್ಬರೂ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಆಗಸ್ಟ್ 26ರ ಸಂಜೆ ಶಾಮ್ಲಿಯ ಕೊತ್ವಾಲಿ ಪ್ರದೇಶದಲ್ಲಿರುವ ಜಿಮ್‌ನಿಂದ ಅಂಕಿತ್ ಬಾಲ್ಯನ್ ಹೊರಬರುತ್ತಿದ್ದಾಗ ಎರಡು ಬೈಕ್‌ಗಳಲ್ಲಿ ಬಂದ ನಾಲ್ವರು ದುಷ್ಕರ್ಮಿಗಳು ಅವರ ಮೇಲೆ ಗುಂಡಿನ ದಾಳಿ ನಡೆಸಿದ್ದರು.

ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಸಮೀಪದ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಗಿತ್ತು. ಆದರೆ, ವೈದ್ಯರು ಅವರು ಮೃತಪಟ್ಟಿರುವುದಾಗಿ ಘೋಷಿಸಿದ್ದರು.

ಅಧಿಕಾರಿಗಳ ಪ್ರಕಾರ, ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ಬಾಲ್ಯನ್ ಅವರು ಗುಂಡೇಟಿನಿಂದಾದ ಗಾಯಗಳಿಂದ ಮೃತಪಟ್ಟಿದ್ದಾರೆಂದು ತಿಳಿದುಬಂದಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಲಾರಕ್ ದ್ವೀಪದ ಮೇಲಿನ ದಾಳಿಗೆ ಪ್ರತೀಕಾರ: ಜೋರ್ಡಾನ್‌ನ ಅಮೆರಿಕದ ಸೇನಾ ನೆಲೆಗಳ ಮೇಲೆ ಇರಾನ್ ಬ್ಯಾಲಿಸ್ಟಿಕ್ ಕ್ಷಿಪಣಿ ದಾಳಿ!

ನಾಗೇಂದ್ರ ರಾಜೀನಾಮೆಗೆ ರಾಜ್ಯಪಾಲರ ಅಂಗೀಕಾರ: ಸಂಪುಟದ ಎರಡು ಖಾಲಿ ಸ್ಥಾನ ಭರ್ತಿಗೆ ದೆಹಲಿಗೆ ತೆರಳಿದ ಸಿಎಂ ಡಿಕೆಶಿ!

ಸರ್ಕಾರಿ ಶಾಲೆಗಳಲ್ಲಿ ಶೂ, ಸಾಕ್ಸ್ ವಿತರಣೆ ವಿಳಂಬ; ಸರ್ಕಾರದ ವಿರುದ್ಧ AIDSO ಆಕ್ರೋಶ

ಹಗ್ಗ 16 ಮೊಳ ಇದ್ದರೂ ಕುಣಿಕೆ ನಮ್ಮ ಹತ್ತಿರ ಇದೆ: ಏನೋ ದಬಾಕಕ್ಕೆ ಹೋಗವನೆ, ದಬಾಕೊಂಡೇ ಬರ್ತಾನೆ ಅಂತ ಗೊತ್ತಿತ್ತು; ಯಶ್ ತಾಯಿ

ಅಲ್-ಹಿಂದ್ ಐಸಿಸ್ ಜೊತೆ ಸೇರಿ ಭಯೋತ್ಪಾದಕ ಕೃತ್ಯಕ್ಕೆ‌‌ ಸಂಚು: ಆರೋಪಿಗೆ ಏಳು ವರ್ಷಗಳ ಕಠಿಣ ಜೈಲು ಶಿಕ್ಷೆ!