ರಾಹುಲ್ ಗಾಂಧಿ 
ದೇಶ

ಲಡಾಖ್ ಗಡಿ ಸಂಘರ್ಷ: ಮಾಜಿ ಸೇನಾಧಿಕಾರಿ ನರವಾಣೆ ಪುಸ್ತಕ ಪ್ರಸ್ತಾಪಿಸಿದ ರಾಹುಲ್ ಗಾಂಧಿ; ಸಂಸತ್ ನಲ್ಲಿ ಕೋಲಾಹಲ; Video

ಸಂಸತ್‌ನಲ್ಲಿ ಸೋಮವಾರ ರಾಷ್ಟ್ರಪತಿಗಳ ಭಾಷಣಕ್ಕೆ ಸಂಬಂಧಿಸಿದಂತೆ ವಂದನಾ ನಿರ್ಣಯದ ಮೇಲಿನ ಚರ್ಚೆ ಕೈಗೆತ್ತಿಕೊಳ್ಳಲಾಯಿತು.

ನವದೆಹಲಿ: ಲಡಾಖ್ ಗಡಿ ಸಂಘರ್ಷಕ್ಕೆ ಸಂಬಂಧಿಸಿದಂತೆ ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ ನರವಾಣೆ ಅವರ ಅಪ್ರಕಟಿತ ಪುಸ್ತಕ ವಿಚಾರವನ್ನು ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಪ್ರಸ್ತಾಪಿಸಿದ್ದು, ಇದು ಲೋಕಸಭೆಯಲ್ಲಿ ಭಾರೀ ಗದ್ದಲವನ್ನು ಸೃಷ್ಟಿಸಿದೆ.

ಸಂಸತ್‌ನಲ್ಲಿ ಸೋಮವಾರ ರಾಷ್ಟ್ರಪತಿಗಳ ಭಾಷಣಕ್ಕೆ ಸಂಬಂಧಿಸಿದಂತೆ ವಂದನಾ ನಿರ್ಣಯದ ಮೇಲಿನ ಚರ್ಚೆ ಕೈಗೆತ್ತಿಕೊಳ್ಳಲಾಯಿತು.

ಈ ವೇಳೆ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಪುಸ್ತಕವನ್ನು ಉಲ್ಲೇಖಿಸುತ್ತಿದ್ದಂತೆ ಮಧ್ಯಪ್ರವೇಶಿಸಿದ ರಾಜನಾಥ್ ಸಿಂಗ್ ಅವರು, ಅಪ್ರಕಟಿತ ವಿಷಯವನ್ನು ಸದನದಲ್ಲಿ ಉಲ್ಲೇಖ ಸರಿಯಲ್ಲ ಎಂದು ಹೇಳಿದರು. ಅವರ ಮಾತು ಬೆಂಬಲಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಆಕ್ಷೇಪಿಸಿದರು. ಔಪಚಾರಿಕವಾಗಿ ಪ್ರಕಟಿತ ವಿಷಯವನ್ನು ಪ್ರಸ್ತಾಪಿಸುವಂತೆ ಒತ್ತಾಯಿಸಿದರು.

ಪತ್ರಿಕೆಗಳು ಮತ್ತು ಮ್ಯಾಗಜಿನ್‌ಗಳು ಏನು ಬೇಕಾದರೂ ಪ್ರಕಟಿಸಬಹುದು. ಅಧಿಕೃತವಾಗಿ ಪ್ರಕಟವಾಗದ ಮೂಲಗಳನ್ನು ಸಂಸತ್ತಿನ ದಾಖಲೆಯ ಭಾಗವಾಗಲು ಅವಕಾಶ ಕೊಡಬಾರದು ಎಂದು ಹೇಳಿದರು.

ಇದರಿಂದ ಸದನದಲ್ಲಿ ಗದ್ದಲ ಹೆಚ್ಚಾಯಿತು. ವಿರೋಧ ಪಕ್ಷದ ಸದಸ್ಯರು, ಆಡಳಿತ ಪಕ್ಷವು ಉದ್ದೇಶಪೂರ್ವಕವಾಗಿ ಚರ್ಚೆಯನ್ನು ನಿಲ್ಲಿಸಲು ಯತ್ನಿಸುತ್ತಿದೆ ಎಂದು ಆರೋಪಿಸಿ, ರಾಜನಾಥ್ ಸಿಂಗ್ ಮತ್ತು ಅಮಿತ್ ಶಾ ಅವರ ಮಧ್ಯಪ್ರವೇಶವನ್ನು ಖಂಡಿಸಿದರು.

ಸರ್ಕಾರದ ಆಕ್ಷೇಪಗಳಿಗೆ ಪ್ರತಿಕ್ರಿಯಿಸಿದ ರಾಹುಲ್ ಗಾಂಧಿ, ಜನರಲ್ ನರವಾಣೆ ಅವರ ಪುಸ್ತಕದ ಆಧಾರದ ಮೇಲೆ ಮ್ಯಾಗಜಿನ್‌ನಲ್ಲಿ ಪ್ರಕಟವಾದ ವರದಿಯನ್ನು ತಾವು ಉಲ್ಲೇಖಿಸಿದ್ದಾಗಿ ಸ್ಪಷ್ಟಪಡಿಸಿದರು.

ತಮ್ಮ ಉಲ್ಲೇಖವು ನಂಬಿಕಸ್ಥ ಮೂಲದ ಮೇರೆಗೆ ಇದ್ದು, ಆಡಳಿತ ಪಕ್ಷದ ಒಬ್ಬ ಸಂಸದರು ಕಾಂಗ್ರೆಸ್ ವಿರುದ್ಧ ಆರೋಪ ಮಾಡಿದ ಕಾರಣಕ್ಕೆ ಈ ವಿಷಯವನ್ನು ಪ್ರಸ್ತಾಪಿಸಬೇಕಾಯಿತು ಎಂದು ಸಮರ್ಥಿಸಿಕೊಂಡರು.

ಈ ವೇಳೆ ಸಮಾಜವಾದಿ ಪಕ್ಷದ ಸಂಸದ ಅಖಿಲೇಶ್ ಯಾದವ್ ಕೂಡ ರಾಹುಲ್ ಗಾಂಧಿಗೆ ಬೆಂಬಲ ವ್ಯಕ್ತಪಡಿಸಿದರು.

ಚೀನಾ ಸಂಬಂಧಿತ ವಿಷಯ ಅತ್ಯಂತ ಸೂಕ್ಷ್ಮವಾದದ್ದು. ರಾಷ್ಟ್ರೀಯ ಭದ್ರತೆ ಮತ್ತು ವಿದೇಶಾಂಗ ನೀತಿಗೆ ಸಂಬಂಧಿಸಿದ ವಿಷಯಗಳ ಮೇಲೆ ಪ್ರತಿಪಕ್ಷ ನಾಯಕನಿಗೆ ಸಂಪೂರ್ಣವಾಗಿ ಮಾತನಾಡಲು ಅವಕಾಶ ನೀಡಬೇಕು ಎಂದು ಆಗ್ರಹಿಸಿದರು.

ಬಳಿಕ ಆಡಳಿತ ಹಾಗೂ ವಿರೋಧ ಪಕ್ಷಗಳ ನಡುವಿನ ವಾಗ್ವಾದ ತೀವ್ರಗೊಂಡು, ಘೋಷಣೆಗಳು ಮತ್ತು ಅಡ್ಡಿಪಡಿಸುವಿಕೆಗಳಿಂದ ಸದನದಲ್ಲಿ ಕೆಲಕಾಲ ಗದ್ದಲವುಂಟಾಯಿತು. ಈ ಎಲ್ಲದರ ನಡುವೆಯೂ ರಾಹುಲ್ ಗಾಂಧಿ ತಮ್ಮ ಭಾಷಣವನ್ನು ಮುಂದುವರಿಸಿದರು.

ಕಲಾಪ ಮುಂದೂಡಿಕೆ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ್ದಕ್ಕಾಗಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಭಾಷಣಕ್ಕೆ ಪದೇ ಪದೇ ಅಡ್ಡಿಪಡಿಸಿದ ನಂತರ ಸೋಮವಾರ ಲೋಕಸಭೆ ಕಲಾಪವನ್ನು ಗದ್ದಲದ ನಡುವೆಯೇ ಮಧ್ಯಾಹ್ನ 3 ಗಂಟೆಯವರೆಗೆ ಮುಂದೂಡಲಾಯಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪಶ್ಚಿಮ ಏಷ್ಯಾ ಸಂಘರ್ಷ: ಭಾರತ ಸೇರಿ 5 ದೇಶಗಳಿಗೆ Hormuz ಮೂಲಕ ಸುರಕ್ಷಿತ ಸಂಚಾರಕ್ಕೆ Iran ಅನುಮತಿ!

Hormuz ಅಷ್ಟೇ ಅಲ್ಲ.. ಬಾಲ ಬಿಚ್ಚಿದ್ರೆ Bab al mandeb ಜಲಸಂಧಿಯನ್ನೂ ಮುಚುತ್ತೇವೆ: ಹೌತಿಗಳು ಬರ್ತಾರೆ ಎಂದು Iran ಎಚ್ಚರಿಕೆ

ಇರಾನಿಯನ್ನರು ಸಾಯುತ್ತಿದ್ದಾಗ ನೀವೆಲ್ಲಿದ್ರಿ..: 'ಶಾಂತಿ-ಸಂಧಾನ' ವ್ಯಂಗ್ಯ ಮಾಡಿದ ನಟ Boman Irani ಚಳಿಬಿಡಿಸಿದ ನಟಿ Mandana Karimi!

ಮತ್ತೊಂದು F-18 ಫೈಟರ್ ಜೆಟ್ ಹೊಡೆದುರುಳಿಸಿದ್ದೇವೆ ಎಂದ Iran, ಬೆಚ್ಚಿದ ಅಮೆರಿಕದಿಂದ Fact-Check

ಉಗ್ರರೊಂದಿಗೆ ನಂಟು ಆರೋಪ: ಬಳ್ಳಾರಿ ಯುವಕ ಸೇರಿ ದೇಶಾದ್ಯಂತ 12 ಮಂದಿ ಬಂಧನ

SCROLL FOR NEXT