ದೇಶ

ಪಂಚಾಯತ್ ಚುನಾವಣೆಯಲ್ಲಿ ಸ್ಪರ್ಧಿಸಲು 6 ವರ್ಷದ ಮಗಳನ್ನು ಕಾಲುವೆಗೆ ತಳ್ಳಿ ಕೊಂದ ಅಪ್ಪ!

ಕೊಲೆಯಾದ ಬಾಲಕಿಯನ್ನು ಪ್ರಾಚಿ (6), ಎಂದು ಹಾಗೂ ಹತ್ಯೆಗೈದ ಆರೋಪಿಯನ್ನು ಪಾಂಡುರಂಗ ಕೊಂಡ್ಮಂಗಳೆ (28) ಎಂದು ಗುರುತಿಸಲಾಗಿದೆ. ಈತ ನಾಂದೇಡ್ ಜಿಲ್ಲೆಯ ಮುಖೇಡ್ ತಾಲೂಕಿನ ಕೆರೂರ್ ಗ್ರಾಮದ ನಿವಾಸಿಯಾಗಿದ್ದಾನೆ.

ಮುಂಬೈ: ಎರಡಕ್ಕಿಂತ ಹೆಚ್ಚು ಮಕ್ಕಳಿದ್ರೆ ಚುನಾವಣೆಗೆ ಸ್ಪರ್ಧಿಸಲು ಅವಕಾಶ ಇಲ್ಲ ಎಂಬ ಕಾರಣಕ್ಕೆ ಮಹಾರಾಷ್ಟ್ರದ ವ್ಯಕ್ತಿಯೊಬ್ಬ ತನ್ನ 6 ವರ್ಷದ ಮಗಳನ್ನು ಕಾಲುವೆಗೆ ತಳ್ಳಿ ಕೊಲೆ ಮಾಡಿರುವ ಘಟನೆ ತೆಲಂಗಾಣದ ನಿಜಾಮಾಬಾದ್ ನಲ್ಲಿ ನಡೆದಿದೆ.

ಕೊಲೆಯಾದ ಬಾಲಕಿಯನ್ನು ಪ್ರಾಚಿ (6), ಎಂದು ಹಾಗೂ ಹತ್ಯೆಗೈದ ಆರೋಪಿಯನ್ನು ಪಾಂಡುರಂಗ ಕೊಂಡ್ಮಂಗಳೆ (28) ಎಂದು ಗುರುತಿಸಲಾಗಿದೆ. ಈತ ನಾಂದೇಡ್ ಜಿಲ್ಲೆಯ ಮುಖೇಡ್ ತಾಲೂಕಿನ ಕೆರೂರ್ ಗ್ರಾಮದ ನಿವಾಸಿಯಾಗಿದ್ದಾನೆ. ಆರೋಪಿ ಮುಂಬರುವ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಸ್ಪರ್ಧಿಸಲು ತಯಾರಿ ನಡೆಸುತ್ತಿದ್ದ ಎಂದು ತಿಳಿದು ಬಂದಿದೆ.

ನಿಜಾಮಾಬಾದ್ ಪೊಲೀಸರು ಪ್ರಕರಣದ ಆರೋಪಿ ಪಾಂಡುರಂಗ ಮತ್ತು ಗ್ರಾಮದ ಸರಪಂಚ್ ಗಣೇಶ್ ರಾಮಚಂದ್ರ ಶಿಂಧೆಯನ್ನು ಬಂಧಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ನಿಜಾಮಾಬಾದ್ ಪೊಲೀಸ್ ಆಯುಕ್ತ ಪಿ. ಸಾಯಿ ಚೈತನ್ಯ, ಕೆಲವು ದಿನಗಳ ಹಿಂದೆ ಯೆಡಪಲ್ಲಿಯ ನಿಜಾಮ ಸಾಗರ್ ಕಾಲುವೆಯಲ್ಲಿ ಬಾಲಕಿಯ ಶವ ಪತ್ತೆಯಾಗಿತ್ತು.

ಪೊಲೀಸರು ಆಕೆಯ ತಂದೆಯನ್ನು ವಿಚಾರಣೆ ನಡೆಸಿದ್ದರು. ಈ ವೇಳೆ ಆಕೆ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿರುವುದಾಗಿ ಹೇಳಿ ಪೊಲೀಸರನ್ನು ದಾರಿ ತಪ್ಪಿಸಲು ಪ್ರಯತ್ನಿಸಿದ್ದ. ತನಿಖಾಧಿಕಾರಿ ವಿಚಾರಣೆ ನಡೆಸಿದಾಗ, ಮಗಳನ್ನು ಕೊಂದಿರುವುದಾಗಿ ಒಪ್ಪಿಕೊಂಡಿದ್ದಾನೆ ಎಂದು ತಿಳಿಸಿದ್ದಾರೆ.ಹತ್

ಗ್ರಾಮದಲ್ಲಿ ಸೆಲೂನ್ ನಡೆಸುತ್ತಿದ್ದ ಪಾಂಡುರಂಗ ಮುಂಬರುವ ಪಂಚಾಯತ್ ಚುನಾವಣೆಯಲ್ಲಿ ಸ್ಪರ್ಧಿಸಲು ಯೋಜಿಸಿದ್ದ. ಅವನಿಗೆ ಮೂರು ವರ್ಷದ ಗಂಡು ಮಗು ಮತ್ತು ಆರು ವರ್ಷದ ಅವಳಿ ಹೆಣ್ಣು ಮಕ್ಕಳಿದ್ದರು. ಇದರಿಂದ ಮಹಾರಾಷ್ಟ್ರದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳಿಗೆ ಎರಡು ಮಕ್ಕಳ ನಿಯಮ ಇರುವುದರಿಂದ ಸ್ಪರ್ಧಿಸಲು ಅನರ್ಹನಾಗಿದ್ದ.

ಈ ವಿಚಾರವನ್ನು ಸ್ನೇಹಿತ ಮತ್ತು ಗ್ರಾಮದ ಪ್ರಸ್ತುತ ಸರಪಂಚ್ ಗಣೇಶ್ ಶಿಂಧೆ ಜೊತೆ ಚರ್ಚಿಸಿ ಅವಳಿ ಮಕ್ಕಳಲ್ಲಿ ಹಿರಿಯಳಾದ ಪ್ರಾಚಿಯನ್ನು ಎಲ್ಲಾದರೂ ಬಿಟ್ಟು ಬರಲು ಯೋಚಿಸಿದ್ದ. ಬಳಿಕ ಅವಳು ವಾಪಸ್‌ ಬಂದರೆ ತೊಂದರೆ ಆಗುತ್ತದೆ ಎಂದು ಕಾಲುವೆಗೆ ತಳ್ಳಿ ಆಕಸ್ಮಿಕ ಸಾವು ಎಂದು ಬಿಂಬಿಸಲು ಯತ್ನಿಸಿದ್ದ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಚೀನಾಗೆ ಕೌಂಟರ್: ಇಂಡೋ-ಪೆಸಿಫಿಕ್‌ನಲ್ಲಿ ಭದ್ರತಾ ಸಹಕಾರ ಹೆಚ್ಚಿಸಲು 'Quad' ಮಹತ್ವದ ತೀರ್ಮಾನ, ಹೊಸ ಕಾರ್ಯಯೋಜನೆ ಘೋಷಿಸಿದ ಮಾರ್ಕೊ ರುಬಿಯೋ..!

ದೆಹಲಿಯಲ್ಲಿ ಸಿದ್ದರಾಮಯ್ಯ-ಡಿಕೆ.ಶಿವಕುಮಾರ್; ನಾಯಕತ್ವ ಬದಲಾವಣೆ ಊಹಾಪೋಹಗಳಿಗೆ ಬೀಳುತ್ತಾ ತೆರೆ? ಕುತೂಹಲ ಮೂಡಿಸಿದ ಕಾಂಗ್ರೆಸ್ ಸಭೆ..!

ಪ್ಯಾಲೆಸ್ಟೀನ್ ರಾಷ್ಟ್ರ ಸ್ಥಾಪನೆವರೆಗೆ ಇಸ್ರೇಲ್‌ಗೆ ಮಾನ್ಯತೆ ಇಲ್ಲ: ಅಬ್ರಹಾಂ ಒಪ್ಪಂದಕ್ಕೆ 'NO' ಎಂದ ಪಾಕಿಸ್ತಾನ, ಟ್ರಂಪ್ ರಾಜತಾಂತ್ರಿಕ ಯತ್ನಕ್ಕೆ ಹಿನ್ನೆಡೆ..!

‘ಸ್ವಯಂ ರಕ್ಷಣೆ’ ಹೆಸರಿನಲ್ಲಿ ಇರಾನ್ ಕ್ಷಿಪಣಿ ಉಡಾವಣೆ ತಾಣಗಳ ಮೇಲೆ ಅಮೆರಿಕಾ ವಾಯುದಾಳಿ: ಟ್ರಂಪ್ ದ್ವಿಮುಖ ನಡೆ ವಿರುದ್ಧ ಟೀಕೆ, ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಮತ್ತೆ ಉದ್ವಿಗ್ನ..!

ನನಗೆ 'CM ವಿಜಯ್' ಕಂಡ್ರೆ ಅಸೂಯೆ: ಸಾರ್ವಜನಿಕವಾಗಿ ಸತ್ಯ ಒಪ್ಪಿಕೊಂಡ ಆಂಧ್ರ DCM ಪವನ್ ಕಲ್ಯಾಣ್!

SCROLL FOR NEXT