ಒಬೆರಾಯ್ ಅವರಿದ್ದ ಜೀಪ್  
ದೇಶ

ಪಂಜಾಬ್‌: ಜಲಂಧರ್‌ ಗುರುದ್ವಾರ ಹೊರಗೆ AAP ನಾಯಕ ಲಕ್ಕಿ ಒಬೆರಾಯ್ ಗುಂಡಿಕ್ಕಿ ಹತ್ಯೆ

ಪ್ರಾಥಮಿಕ ವರದಿಗಳ ಪ್ರಕಾರ, ದಾಳಿಕೋರರು ದ್ವಿಚಕ್ರ ವಾಹನದಲ್ಲಿ ಬಂದು ಗುರುದ್ವಾರದ ಹೊರಗೆ ತಮ್ಮ ಜೀಪಿನೊಳಗೆ ಇದ್ದಾಗ ಒಬೆರಾಯ್ ಮೇಲೆ ಹಲವು ಸುತ್ತು ಗುಂಡು ಹಾರಿಸಿದರು.

ಪಂಜಾಬ್‌ನ ಜಲಂಧರ್‌ನಲ್ಲಿ ಇಂದು ಶುಕ್ರವಾರ ಹಾಡಹಗಲೇ ಆಮ್ ಆದ್ಮಿ ಪಕ್ಷದ ನಾಯಕ ಲಕ್ಕಿ ಒಬೆರಾಯ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಮಾಡೆಲ್ ಟೌನ್ ಪ್ರದೇಶದ ಗುರುದ್ವಾರದ ಬಳಿ ಅಪರಿಚಿತ ದುಷ್ಕರ್ಮಿಗಳು ಅವರ ಮೇಲೆ ಗುಂಡಿನ ದಾಳಿ ನಡೆಸಿದರು ಎಂದು ತಿಳಿದುಬಂದಿದೆ.

ಪ್ರಾಥಮಿಕ ವರದಿಗಳ ಪ್ರಕಾರ, ದಾಳಿಕೋರರು ದ್ವಿಚಕ್ರ ವಾಹನದಲ್ಲಿ ಬಂದು ಗುರುದ್ವಾರದ ಹೊರಗೆ ತಮ್ಮ ಕಾರಿನೊಳಗೆ ಇದ್ದಾಗ ಒಬೆರಾಯ್ ಮೇಲೆ ಹಲವು ಸುತ್ತು ಗುಂಡು ಹಾರಿಸಿದರು.

ಹಲವು ಗುಂಡುಗಳು ಅವರಿಗೆ ತಗುಲಿ ರಕ್ತದ ಮಡುವಿನಲ್ಲಿ ಬಿದ್ದರು. ಅವರನ್ನು ಹತ್ತಿರದ ಖಾಸಗಿ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಮಾರ್ಗ ಮಧ್ಯೆಯೇ ಅಸುನೀಗಿದ್ದಾರೆ ಎಂದು ವೈದ್ಯರು ತಿಳಿಸಿದರು.

ಜಲಂಧರ್ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್

Cricket: ಶುಭ್ ಮನ್ ಗಿಲ್ ದಾಖಲೆಯನ್ನೇ ಹಿಂದಿಕ್ಕಿದ Rishabh Pant, ಡಬ್ಲ್ಯೂಟಿಸಿಯಲ್ಲಿ ಅತ್ಯಧಿಕ ರನ್, ಅಗ್ರಸ್ಥಾನ