ರಿತು ತಾವಡೆ 
ದೇಶ

ಮುಂಬಯಿ ಮಹಾನಗರ ಪಾಲಿಕೆ ಮೇಯರ್‌ ಚುನಾವಣೆ: ಬಿಜೆಪಿ ಅಭ್ಯರ್ಥಿಯಾಗಿ ರಿತು ತಾವಡೆ ಆಯ್ಕೆ

ರಿತು ತಾವಡೆ ವಾರ್ಡ್‌ ಸಂಖ್ಯೆ 132ರ ಕಾರ್ಪೊರೇಟರ್ ಆಗಿದ್ದಾರೆ. ಸಂಜಯ್ ಘಾಡಿ ವಾರ್ಡ್‌ ಸಂಖ್ಯೆ 5ರಿಂದ ಆಯ್ಕೆಯಾಗಿದ್ದಾರೆ. ಸಂಜಯ್‌ ಈ ಹಿಂದೆ 15 ತಿಂಗಳ ಕಾಲ ಉಪಮೇಯರ್ ಆಗಿ ಕೆಲಸ ಮಾಡಿದ್ದರು.

ಮುಂಬೈ: ಮುಂಬೈ ಮಹಾನಗರಪಾಲಿಕೆಯ (ಬಿಎಂಸಿ) ಮೇಯರ್ ಚುನಾವಣೆಗೆ ರಿತು ತಾವಡೆ ಅವರನ್ನು ಭಾರತೀಯ ಜನತಾ ಪಕ್ಷ (ಬಿಜೆಪಿ) ಅಭ್ಯರ್ಥಿಯಾಗಿ ಶನಿವಾರ ಆಯ್ಕೆ ಮಾಡಿದೆ. ಅದರ ಮಿತ್ರ ಪಕ್ಷ ಶಿವಸೇನೆ ಸಂಜಯ್ ಘಾಡಿ ಅವರನ್ನು ಉಪ ಮೇಯರ್ ಹುದ್ದೆಗೆ ತನ್ನ ಅಭ್ಯರ್ಥಿಯಾಗಿ ಘೋಷಿಸಿದೆ.

ರಿತು ತಾವಡೆ ವಾರ್ಡ್‌ ಸಂಖ್ಯೆ 132ರ ಕಾರ್ಪೊರೇಟರ್ ಆಗಿದ್ದಾರೆ. ಸಂಜಯ್ ಘಾಡಿ ವಾರ್ಡ್‌ ಸಂಖ್ಯೆ 5ರಿಂದ ಆಯ್ಕೆಯಾಗಿದ್ದಾರೆ. ಸಂಜಯ್‌ ಈ ಹಿಂದೆ 15 ತಿಂಗಳ ಕಾಲ ಉಪಮೇಯರ್ ಆಗಿ ಕೆಲಸ ಮಾಡಿದ್ದರು.

227 ಸದಸ್ಯ ಬಲದ ಪಾಲಿಕೆ ಚುನಾವಣೆ ಇತ್ತೀಚೆಗೆ ನಡೆದಿತ್ತು. ಬಿಜೆಪಿ 89 ಸ್ಥಾನಗಳೊಂದಿಗೆ ಏಕೈಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಶಿವಸೇನೆ 29 ಸ್ಥಾನಗಳನ್ನು ಗೆದ್ದುಕೊಂಡಿದೆ. ಒಟ್ಟಾರೆ 118 ಸದಸ್ಯ ಬಲ ಹೊಂದಿರುವ ಈ ಮೈತ್ರಿಕೂಟ ಸರಳ ಬಹುಮತ ಪಡೆದುಕೊಂಡಿದೆ.

25 ವರ್ಷಗಳ ಕಾಲ ಪಾಲಿಕೆ ಆಡಳಿತ ನಡೆಸಿದ್ದ ಶಿವಸೇನೆ (ಯುಬಿಟಿ) ಈ ಬಾರಿ 65 ಸ್ಥಾನಗಳನ್ನು ಗೆದ್ದು ಅಧಿಕಾರದಿಂದ ಕೆಳಗಿಳಿದಿದೆ. ಅದರ ಮೈತ್ರಿ ಪಕ್ಷಗಳಾದ ಮಹಾರಾಷ್ಟ್ರ ನವನಿರ್ಮಾಣ ಸೇನೆ (ಎಂಎನ್‌ಎಸ್) 6, ಎನ್‌ಸಿಪಿ (ಶರದ್) 1 ಸ್ಥಾನ ಪಡೆದಿತ್ತು. ಇತರೆ ಪಕ್ಷಗಳಾದ ಕಾಂಗ್ರೆಸ್ 24, ಎಐಎಂಐಎಂ 8, ಎನ್‌ಸಿಪಿ (ಅಜಿತ್) 3, ಸಮಾಜವಾದಿ ಪಕ್ಷ 2 ಹಾಗೂ ಇಬ್ಬರು ಪಕ್ಷೇತರ ಅಭ್ಯರ್ಥಿಗಳು ಗೆಲುವು ದಾಖಲಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

"ಒಂದೇ ಶಾಟ್‌ನಲ್ಲಿ ಇರಾನ್‌ನ ಎಲ್ಲಾ ನಾಯಕರು ಖತಂ ಆಗುತ್ತಿದ್ದರು"... ಆದರೆ, ಅಮೆರಿಕಾ ಸುಮ್ಮನಿರುವುದೇಕೆ? ಅಸಲಿ ಕಾರಣ ಬಿಚ್ಚಿಟ್ಟ ಟ್ರಂಪ್..!

Venezuelaದಲ್ಲಿ ಮರಣ ಮೃದಂಗ: ಅವಳಿ ಭೂಕಂಪಕ್ಕೆ 2,954 ಮಂದಿ ಬಲಿ, ಸಾವಿರಾರು ಕುಟುಂಬಗಳು ಬೀದಿಗೆ..!

'Boss ಯಾರು ಬಾಸ್ ಅಂತ ನೆತನ್ಯಾಹುಗೆ ಚೆನ್ನಾಗಿ ಗೊತ್ತಿದೆ'; ಇಸ್ರೇಲ್ ಪ್ರಧಾನಿಗೆ ಟ್ರಂಪ್ ಖಡಕ್ ಸಂದೇಶ, ಆಪ್ತರಿಂದಲೂ 'ಬಿಬಿ' ವಿರುದ್ಧ ಅಸಮಾಧಾನ..!

ಅನ್ಯ ಉದ್ದೇಶಕ್ಕೆ ಕುಡಿಯುವ ನೀರು ಬಳಕೆ ನಿಷೇಧ; ಬೇಸಿಗೆಯಲ್ಲಿ ತೆಗೆದುಕೊಳ್ಳುವ ಕ್ರಮಗಳನ್ನು ಮಳೆಗಾಲದಲ್ಲೇ ಜಾರಿಗೊಳಿಸಿದ BWSSB!

1 ಓವರ್‌ನಲ್ಲಿ 29 ರನ್ ಹೊಡೆಸಿಕೊಂಡ ಬಿಷ್ಣೋಯ್: ಇಂಗ್ಲೆಂಡ್ ವಿರುದ್ಧದ 2ನೇ ಟಿ20 ಪಂದ್ಯ ಕೈಚೆಲ್ಲಿದ ಭಾರತ