ಎನ್ ಚಂದ್ರಬಾಬು ನಾಯ್ಡು  
ದೇಶ

ತಿರುಪತಿ ಲಡ್ಡು ತಯಾರಿಕೆ ತುಪ್ಪದಲ್ಲಿ ‘ಬಾತ್‌ರೂಮ್ ಕ್ಲೀನಿಂಗ್ ಕೆಮಿಕಲ್ಸ್’ ಬಳಕೆ: ಚಂದ್ರಬಾಬು ನಾಯ್ಡು

ಕಲಬೆರಕೆ ತುಪ್ಪವನ್ನು ಶ್ರೀಶೈಲಂ ದೇವಸ್ಥಾನಕ್ಕೂ ಪೂರೈಸಲಾಗುತ್ತಿತ್ತು. ಇದಲ್ಲದೆ ಪ್ರಾಣಿಗಳ ಕೊಬ್ಬನ್ನೂ ಬಳಕೆ ಮಾಡಲಾಗುತ್ತಿತ್ತು ಎಂದು ರಾಷ್ಟ್ರೀಯ ಡೇರಿ ಅಭಿವೃದ್ಧಿ ಮಂಡಳಿ ವರದಿ ತಿಳಿಸಿರುವುದಾಗಿಯೂ ನಾಯ್ಡು ಹೇಳಿದರು.

ಅಮರಾವತಿ: ತಿರುಪತಿ ಲಡ್ಡು ಪ್ರಸಾದ ಕಲಬೆರಕೆ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಹಿಂದಿನ ವೈಎಸ್​ಆರ್​ಸಿಪಿ ಸರ್ಕಾರದ ಅವಧಿಯಲ್ಲಿ ಲಡ್ಡುಗಳನ್ನು ತಯಾರಿಸಲು ಐದು ವರ್ಷ ಬಾತ್​ರೂಮ್ ಸ್ವಚ್ಛಗೊಳಿಸಲು ಬಳಸುವ ರಾಸಾಯನಿಕ ಬೆರೆತಿದ್ದ ಕಲಬೆರಕೆ ತುಪ್ಪ ಬಳಕೆ ಮಾಡಲಾಗಿತ್ತು ಎಂದು ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಆರೋಪಿಸಿದ್ದಾರೆ.

ಆಂಧ್ರದ ಕರ್ನೂಲು ಜಿಲ್ಲೆಯ ಕಲುಗೋಟಲ ಗ್ರಾಮದಲ್ಲಿ ನಡೆದ ಕಾರ್ಯ ಕ್ರಮದಲ್ಲಿ ಮಾತನಾಡಿದ ಚಂದ್ರಬಾಬು ನಾಯ್ಡು ಕಲಬೆರಕೆ ತುಪ್ಪವನ್ನು ಶ್ರೀಶೈಲಂ ದೇವಸ್ಥಾನಕ್ಕೂ ಪೂರೈಸಲಾಗುತ್ತಿತ್ತು. ಇದಲ್ಲದೆ ಪ್ರಾಣಿಗಳ ಕೊಬ್ಬನ್ನೂ ಬಳಕೆ ಮಾಡಲಾಗುತ್ತಿತ್ತು ಎಂದು ರಾಷ್ಟ್ರೀಯ ಡೇರಿ ಅಭಿವೃದ್ಧಿ ಮಂಡಳಿ ವರದಿ ತಿಳಿಸಿರುವುದಾಗಿಯೂ ನಾಯ್ಡು ಹೇಳಿದರು.

ಹಿಂದಿನ ವೈಎಸ್​ಆರ್​ಸಿಪಿ ಸರ್ಕಾರದ ಅವಧಿಯಲ್ಲಿ ತಿರುಪತಿಯಲ್ಲಿ ಲಡ್ಡು ತಯಾರಿಸಲು ಬಾತ್​ರೂಮ್ ಸ್ವಚ್ಛಗೊಳಿಸಲು ಬಳಸುವ ರಾಸಾಯನಿಕಗಳು ಬೆರೆತಿದ್ದ ಕಲಬೆರಕೆ ತುಪ್ಪ ಬಳಕೆ ಮಾಡಲಾಗಿತ್ತು ಎಂದು ಚಂದ್ರಬಾಬು ನಾಯ್ಡು ಆರೋಪಿಸಿದ್ದಾರೆ.

ಹಿಂದಿನ ಸರ್ಕಾರ ಕಲಬೆರಕೆ ಲಡ್ಡು ಪ್ರಸಾದ ವನ್ನು ವಿತರಿಸುವ ಮೂಲಕ ವೆಂಕಟೇಶ್ವರ ಸ್ವಾಮಿಯ ಘನತೆ ಯನ್ನು ಕುಗ್ಗಿಸಲು ಪ್ರಯತ್ನಿಸಿದೆ. ವೈಎಸ್​ಆರ್​ಸಿಪಿ ಆಡಳಿತದ ಅವಧಿಯಲ್ಲಿ ಶ್ರೀಶೈಲ ದೇವಾಲಯಕ್ಕೂ ಕಲಬೆರಕೆ ತುಪ್ಪ ಪೂರೈಸಲಾಗಿತ್ತು. ಬಾತ್ ರೂಂ ಸ್ವಚ್ಛಗೊಳಿಸುವ ರಾಸಾಯನಿಕಗಳಿಂದ ತಯಾರಿಸಿದ ಕಲಬೆರಕೆ ತುಪ್ಪವನ್ನು ಲಡ್ಡು ತಯಾರಿಕೆಗೆ ಬಳಸಲಾಗಿತ್ತು. ಹಿಂದಿನ ಸರ್ಕಾರದ 5 ವರ್ಷದ ಅವಧಿಯಲ್ಲೂ ರಾಸಾಯನಿಕ ಬೆರೆತಿದ್ದ ತುಪ್ಪವನ್ನು ಬಳಸಲಾಗಿತ್ತು ಎಂದಿದ್ದಾರೆ.

ಸಸ್ಯ ಜನ್ಯ ರಾಸಾಯನಿಕಗಳು ದುಬಾರಿ, ಆದರೆ ಪ್ರಾಣಿಗಳ ಕೊಬ್ಬಿನ ಬೆಲೆ ಕಡಿಮೆ. ಪ್ರಾಣಿಗಳ ಕೊಬ್ಬನ್ನು ತುಪ್ಪದಲ್ಲಿ ಬಳಸಲಾಗಿತ್ತು ಎಂದು ರಾಷ್ಟ್ರೀಯ ಡೈರಿ ಅಭಿವೃದ್ಧಿ ಮಂಡಳಿ ವರದಿ ನೀಡಿತ್ತು. ವೆಂಕಟೇಶ್ವರ ಸ್ವಾಮಿಯ ಪಾವಿತ್ರತೆಯನ್ನು ಗಮನದಲ್ಲಿ ಇಟ್ಟುಕೊಂಡು ನಾವು ಈ ವಿಚಾರವಾಗಿ ಹೆಚ್ಚು ಮಾತನಾಡಬಾರದು ಎಂದು ಚಂದ್ರಬಾಬು ನಾಯ್ಡು ತಿಳಿಸಿದರು.

ಪ್ರಾಣಿಜನ್ಯ ಕೊಬ್ಬಿನ ಕಲಬೆರಕೆ ನಡೆದಿಲ್ಲ ಎಂದು ಸಿಬಿಐ ನೇತೃತ್ವದ ಎಸ್​ಐಟಿ ಕ್ಲೀನ್ ಚಿಟ್ ನೀಡಿರುವುದಾಗಿ ವೈಎಸ್​ಆರ್​ಸಿಪಿ ನಾಯಕರು ವಾದಿಸುತ್ತಿದ್ದಾರೆ. ಆದರೆ ಕಲಬೆರಕೆ ನಡೆದಿದೆ ಎಂದು ವೈ.ಎಸ್. ಜಗನ್ ಮೋಹನ್ ರೆಡ್ಡಿ ಅವರ ಚಿಕ್ಕಪ್ಪ ವೈ.ವಿ. ಸುಬ್ಬಾರೆಡ್ಡಿ ಅವರೆ ಹೇಳಿದ್ದಾರೆ.

ಕಲಬೆರಕೆ ತುಪ್ಪ ಬಳಕೆ ಮಾಡಿದ ಪ್ರಸಾದದಿಂದ ತಿರುಪತಿಯ ದೇವಾಲಯದ ಪಾವಿತ್ರ್ಯತೆಗೆ ಧಕ್ಕೆ ಉಂಟಾಗಿದೆ. ಇದನ್ನು ಸರಿಪಡಿಸಲು ನಾವು ಪ್ರಯತ್ನಿಸುತ್ತಿದ್ದೇವೆ" ಎಂದು ನಾಯ್ಡು ತಿಳಿಸಿದರು.

ಈ ಮಧ್ಯೆ, ವೈಎಸ್‌ಆರ್‌ಸಿಪಿ, ಟಿಡಿಪಿ ಮತ್ತು ಅದರ ಮುಖ್ಯಸ್ಥ ಸಿಎಂ ನಾಯ್ಡು ರಾಜಕೀಯ ಲಾಭಕ್ಕಾಗಿ ಕೋಮು ಭಾವನೆಗಳನ್ನು ಕೆರಳಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಪ್ರತಿಕ್ರಿಯಿಸಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Iran War: Hormuz ಕುರಿತು ಬಹ್ರೇನ್ ನೇತೃತ್ವದಲ್ಲಿ ಕರಡು ನಿರ್ಣಯ; ಇಂದು UNSC ಮತದಾನ!

ಸೋಲಿನಲ್ಲೂ RCB ದಾಖಲೆ ಮುರಿದ CSK: 210 ರನ್ ಬಾರಿಸಿ ಚೆನ್ನೈ ವಿರುದ್ಧ 5 ವಿಕೆಟ್ ಗಳಿಂದ ಗೆದ್ದ ಪಂಜಾಬ್‌!

ಹುಬ್ಬಳ್ಳಿ Love Jihad ಕೇಸ್‌ಗೆ ಟ್ವಿಸ್ಟ್: Gym ಟ್ರೈನರ್ Sameer Mulla ಮೊಬೈಲ್‌ನಲ್ಲಿ ಯುವತಿಯರ ಫೋಟೋಗಳು ಪತ್ತೆ!

'ನಿಮ್ದೊಂದೆರಡು ಕಿತ್ತೋದ ವಿಮಾನವಾಹಕ ನೌಕೆಗಳು ಇದ್ಯಲ್ಲಾ ಯುದ್ಧಕ್ಕೆ ಕಳಿಸ್ತೀರಾ?' ಅಂತ ಕೇಳಿದ್ದೆ, ಮ್ಯಾಕ್ರಾನ್ ಗೆ ಹೆಂಡ್ತಿ ಕಾಟ: ಬ್ರಿಟನ್, ಫ್ರಾನ್ಸ್ ಬಗ್ಗೆ ಟ್ರಂಪ್ ವ್ಯಂಗ್ಯ

Bengal polls: ಕ್ರಿಮಿನಲ್ ಪ್ರಕರಣಗಳನ್ನು ಹೊಂದಿರುವ ರಾಜಕಾರಣಿಗಳಿಗೆ ಸೆಕ್ಯೂರಿಟಿ ವಾಪಸ್, ಚುನಾವಣಾ ಆಯೋಗ ನಿರ್ದೇಶನ!

SCROLL FOR NEXT