ಮೋಹನ್ ಭಾಗವತ್ 
ದೇಶ

ಬಿಜೆಪಿಯಿಂದ ನಮಗೆ ಅಚ್ಛೇ ದಿನ್ ಬರಲೇ ಇಲ್ಲ! ಮೋಹನ್ ಭಾಗವತ್ ಅಚ್ಚರಿಯ ಹೇಳಿಕೆ

ಬಿಜೆಪಿಯಿಂದ ನಮಗೆ ಅಚ್ಛೇ ದಿನ್ ಬಂದಿಲ್ಲ. ಅದು ಬೇರೆ ದಾರಿ, ನಾವು ರಾಮಮಂದಿರ ನಿರ್ಮಾಣಕ್ಕೆ ಬದ್ಧರಾಗಿದ್ದೇವು. ನಮ್ಮನ್ನು ಬೆಂಬಲಿಸಿದವರಿಗೆ ಲಾಭವಾಗಿದೆ ಎಂದರು.

ನವದೆಹಲಿ: ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಏಕರೂಪ ನಾಗರಿಕ ಸಂಹಿತೆಯನ್ನು (UCC) ರೂಪಿಸಬೇಕು ಮತ್ತು ಅದು ವಿಭಜನೆಗೆ ಕಾರಣವಾಗಬಾರದು ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಭಾನುವಾರ ಹೇಳಿದ್ದಾರೆ.

ಬಿಜೆಪಿ ಅಧಿಕಾರಕ್ಕೆ ಬಂದ ನಂತರ RSSಗೆ ಅಚ್ಛೇ ದಿನ್’ (ಒಳ್ಳೆಯ ದಿನಗಳು) ಬಂದಿವೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಭಾಗವತ್, “ಬಿಜೆಪಿಯಿಂದ ನಮಗೆ ಅಚ್ಛೇ ದಿನ್ ಬಂದಿಲ್ಲ. ಅದು ಬೇರೆ ದಾರಿ, ನಾವು ರಾಮಮಂದಿರ ನಿರ್ಮಾಣಕ್ಕೆ ಬದ್ಧರಾಗಿದ್ದೇವು. ನಮ್ಮನ್ನು ಬೆಂಬಲಿಸಿದವರಿಗೆ ಲಾಭವಾಗಿದೆ ಎಂದರು.

ಸ್ವಯಂಸೇವಕರ ಕಠಿಣ ಪರಿಶ್ರಮ ಮತ್ತು ಸೈದ್ಧಾಂತಿಕ ನೀತಿಗಳ ಬದ್ಧತೆಯಿಂದ ಆರ್‌ಎಸ್‌ಎಸ್‌ಗೆ 'ಅಚ್ಛೇ ದಿನ್' ಬಂದಿದೆ. ಅಗತ್ಯವಿದ್ದಾಗ ಆರ್‌ಎಸ್‌ಎಸ್ ಸಲಹೆ ನೀಡುತ್ತದೆ. ಅವರು ನಮ್ಮೊಳಗಿಂದ ಬಂದವರಾಗಿರುವುದರಿಂದ ಅವರ ಪಾಪಗಳು ನಮ್ಮ ಮೇಲೆ ಹೊರಿಸಲ್ಪಡುತ್ತವೆ. ರಾಜಕೀಯ ಒತ್ತಡವು ಮತದಾರರಿಂದ ಬರುತ್ತದೆಯೇ ಹೊರತು ಆರ್‌ಎಸ್‌ಎಸ್‌ನಿಂದಲ್ಲ ಎಂದು ಹೇಳಿದರು.

100 ವರ್ಷಗಳಲ್ಲಿ ಕಮ್ಯುನಿಸ್ಟರ ನೆಲೆ ಏಕೆ ಬೆಳೆದಿಲ್ಲ ಎಂಬ ಪ್ರಶ್ನೆಗೆ ಉತ್ತರಿಸಿದ ಭಾಗವತ್, ಒಂದು ವೇಳೆ ಕೇಳಿದರೆ ಅವರಿಗೆ ಆರ್ ಎಸ್ ಎಸ್ ಮಾರ್ಗದರ್ಶನ ನೀಡಬಹುದು. ಆರ್‌ಎಸ್‌ಎಸ್ ಯುವ ಸಂಘಟನೆಯಾಗಿದ್ದು, ಸರಾಸರಿ ವಯಸ್ಸು 28. ಅದನ್ನು 25ಕ್ಕೆ ಇಳಿಸಲು ಬಯಸಿರುವುದಾಗಿ ಎಂದು ಅವರು ಹೇಳಿದರು.

ಹಿಂದುತ್ವ ಸಿದ್ಧಾಂತವಾದಿ ವಿ ಡಿ ಸಾವರ್ಕರ್‌ಗೆ ಭಾರತ ರತ್ನ ನೀಡಬೇಕೆಂಬ ಬಹುದಿನಗಳ ಬೇಡಿಕೆಯ ಕುರಿತು ಪ್ರತಿಕ್ರಿಯಿಸಿದ ಭಾಗವತ್, ಅವರಿಗೆ ಪ್ರಶಸ್ತಿ ನೀಡಿದರೆ ಅದರ ಘನತೆ ಮತ್ತಷ್ಟು ಹೆಚ್ಚಾಗುತ್ತದೆ ಎಂದು ಹೇಳಿದರು.

ಆರ್‌ಎಸ್‌ಎಸ್‌ನ ಶತಮಾನೋತ್ಸವದ ಅಂಗವಾಗಿ ನಡೆದ ಸಂವಾದ ಕಾರ್ಯಕ್ರಮದಲ್ಲಿ ಮೋಹನ್ ಭಾಗವತ್ ಮಾತನಾಡಿದರು. ನಟಿಯರಾದ ರವೀನಾ ಟಂಡನ್, ಅನನ್ಯ ಪಾಂಡೆ, ನಟ ನಟ ವಿಕ್ಕಿ ಕೌಶಲ್, ಚಲನಚಿತ್ರ ನಿರ್ಮಾಪಕರಾದ ಕರಣ್ ಜೋಹರ್, ಮಧುರ್ ಭಂಡಾರ್ಕರ್, ರಮೇಶ್ ತೌರಾನಿ ಮತ್ತು ಸಂಗೀತಗಾರ ಪಂಡಿತ್ ಹೃದಯನಾಥ್ ಮಂಗೇಶ್ಕರ್ ಸೇರಿದಂತೆ ಹಲವಾರು ಪ್ರಮುಖರು ಸಂವಾದದಲ್ಲಿ ಉಪಸ್ಥಿತರಿದ್ದರು.

ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಏಕರೂಪ ನಾಗರಿಕ ಸಂಹಿತೆ ರೂಪಿಸಬೇಕು. ಅದು ವಿಭಜನೆಗಳನ್ನು ಸೃಷ್ಟಿಸಬಾರದು. ಉತ್ತರಾಖಂಡದಲ್ಲಿ ಮೂರು ಲಕ್ಷ ಸಲಹೆಗಳನ್ನು ನೀಡಲಾಯಿತು. ಸಂಬಂದಪಟ್ಟ ಎಲ್ಲರೊಂದಿಗೆ ಮಾತನಾಡಿ, ಕಾಯ್ದೆ ಅಂಗೀಕರಿಸಲಾಯಿತು ಎಂದು ಅವರು ಹೇಳಿದರು.

ಮತ್ತೊಂದು ಪ್ರಶ್ನೆಗೆ ಉತ್ತರಿಸಿದ ಮೋಹನ್ ಭಾಗವತ್, ಬಹುಸಂಖ್ಯಾತ ಅಥವಾ ಅಲ್ಪಸಂಖ್ಯಾತ (ಸಮುದಾಯ) ಇಲ್ಲ. 'ನಾವೆಲ್ಲರೂ ಒಂದೇ ಸಮಾಜ. ಮುಸ್ಲಿಂ ಮತ್ತು ಕ್ರಿಶ್ಚಿಯನ್ ಸಮುದಾಯಗಳೊಂದಿಗೆ ವಿಶ್ವಾಸ, ಸ್ನೇಹ ಮತ್ತು ಸಂವಾದದ ಅಗತ್ಯವನ್ನು ಅವರು ಒತ್ತಿ ಹೇಳಿದರು.

ಇಸ್ಲಾಂ ಅನ್ನು ಶಾಂತಿಯ ಧರ್ಮ ಎಂದು ಕರೆಯುತ್ತಾರೆ, ಆದರೆ ಶಾಂತಿ ಕಾಣುತ್ತಿಲ್ಲ. ಧರ್ಮದಲ್ಲಿ ಆಧ್ಯಾತ್ಮಿಕತೆ ಇಲ್ಲದಿದ್ದರೆ, ಅದು ಪ್ರಬಲ ಮತ್ತು ಆಕ್ರಮಣಕಾರಿಯಾಗುತ್ತದೆ. ಇಂದು ಇಸ್ಲಾಂ ಮತ್ತು ಕ್ರಿಶ್ಚಿಯನ್ ಧರ್ಮದಲ್ಲಿ ಕಾಣುತ್ತಿರುವುದು ಯೇಸುಕ್ರಿಸ್ತ ಮತ್ತು ಪ್ರವಾದಿ ಮುಹಮ್ಮದ್ ಅವರ ಬೋಧನೆಗಳಲ್ಲ, ನಮಗೆ ನಿಜವಾದ ಇಸ್ಲಾಂ ಮತ್ತು ಕ್ರಿಶ್ಚಿಯನ್ ಧರ್ಮದ ಆಚರಣೆ ಅಗತ್ಯವಿದೆ ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Hormuz closure: ಹಾರ್ಮುಜ್ ಜಲಸಂಧಿ ಬಂದ್, ಏಷ್ಯಾದ ಬಂದರುಗಳಲ್ಲಿ ಕ್ಯೂನಲ್ಲಿ ನಿಂತ ಹಡಗುಗಳು!

ಪದೇ ಪದೇ ಇರಾನ್ ದಾಳಿ: ಅಬುದಾಬಿಯಲ್ಲಿ ಕ್ಷಿಪಣಿ ಅವಶೇಷಗಳು ಬಿದ್ದು, ಭಾರತೀಯ ಪ್ರಜೆ ಸೇರಿದಂತೆ ಇಬ್ಬರು ಸಾವು!

ರಾಜ್ಯ ಸರ್ಕಾರ ನಿಯಮದ ಮಿತಿಯೊಳಗೆ ಸಾಲ ಮಾಡಿದೆ: ಸಿಎಂ ಸಿದ್ದರಾಮಯ್ಯ ಸಮರ್ಥನೆ

ಬಾಗಲಕೋಟೆ, ದಾವಣಗೆರೆ ಉಪಚುನಾವಣೆ: ಕಣದಲ್ಲಿ 34 ಅಭ್ಯರ್ಥಿಗಳು, 80 ಲಕ್ಷ ನಗದು, 1.74 ಲಕ್ಷ ರೂ. ಮೌಲ್ಯದ ಮದ್ಯ ವಶಕ್ಕೆ

ಹೆಚ್ಚುತ್ತಿರುವ ಸಬ್ಸಿಡಿ: ಗ್ರಾಮ ಪಂಚಾಯಿತಿ ಅನುದಾನಕ್ಕೆ ರಾಜ್ಯ ಸರ್ಕಾರ ಕೊಕ್- CAG ವರದಿ

SCROLL FOR NEXT