ಪ್ರತಾಪಗಢ(ಉತ್ತರ ಪ್ರದೇಶ): ಉತ್ತರಪ್ರದೇಶದ ರಾಣಿಗಂಜ್ನಲ್ಲಿ ನಿರ್ಮಾಣ ಹಂತದಲ್ಲಿದ್ದ ಹಿದೂ ದೇವಾಲಯದ ಗೋಡೆಯನ್ನು ಮುಸ್ಲಿಂ ಮಹಿಳೆಯರು ಕೆಡವಿದ ವಿಡಿಯೋ ವೈರಲ್ ಆಗಿದೆ. ಮುಸ್ಲಿಂ ಮಹಿಳೆಯ ಗುಂಪು ಹಿಂದೂ ದೇವಾಲಯದ ಗೋಡೆಯನ್ನು ಕೆಡವಿದ್ದ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಹಿಂದೂ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಘಟನೆ ಸಂಬಂಧ ಕೋಹಾಂಡೋರ್ ಪೊಲೀಸರು ಮೂವರು ಮಹಿಳೆಯರು ಹಾಗೂ ಓರ್ವ ವ್ಯಕ್ತಿಯನ್ನು ಬಂಧಿಸಿದ್ದಾರೆ.