ದೇವಿ ಅಹಲ್ಯಾ ವಿಶ್ವವಿದ್ಯಾಲಯ 
ದೇಶ

ಕ್ಯಾಂಪಸ್‌ನಲ್ಲಿ ಮರ-ಗಿಡಗಳ ಕೊರತೆ ಇರುವ ಕಾಲೇಜುಗಳಿಗೆ ದಂಡ! ಎಲ್ಲಿ..? ಹೇಗೆ?

ಮಧ್ಯಪ್ರದೇಶ ಸರ್ಕಾರದ ಉನ್ನತ ಶಿಕ್ಷಣ ಇಲಾಖೆ ಯಾವಾಗಲೂ ಹಸಿರು ಕ್ಯಾಂಪಸ್‌ಗಳನ್ನು ಕಾಪಾಡಿಕೊಳ್ಳಲು ಒತ್ತು ನೀಡಿದೆ ಮತ್ತು ಮರ ನೆಡುವ ಬಗ್ಗೆ ನಿರಂತರ ನಿರ್ದೇಶನಗಳನ್ನು ನೀಡಿದೆ..

ಇಂದೋರ್: ಪರಿಸರ ಸಂರಕ್ಷಣೆಗಾಗಿ ಕ್ಯಾಂಪಸ್‌ನಲ್ಲಿ ಮರ-ಗಿಡಗಳ ಕೊರತೆ ಇರುವ ಕಾಲೇಜುಗಳಿಗೆ ದಂಡ ವಿಧಿಸಲು ಇಂದೋರ್‌ ನ ದೇವಿ ಅಹಲ್ಯಾ ವಿಶ್ವವಿದ್ಯಾಲಯ ಗಂಭೀರ ಚಿಂತನೆಯಲ್ಲಿ ತೊಡಗಿದೆ.

ಈ ಬಗ್ಗೆ ವಿಶ್ವವಿದ್ಯಾಲಯದ ಕಾಲೇಜು ಅಭಿವೃದ್ಧಿ ಮಂಡಳಿಯ ನಿರ್ದೇಶಕ ಸಚಿನ್ ಶರ್ಮಾ ಮಾಹಿತಿ ನೀಡಿದ್ದು, 'ಮಧ್ಯಪ್ರದೇಶ ಸರ್ಕಾರದ ಉನ್ನತ ಶಿಕ್ಷಣ ಇಲಾಖೆ ಯಾವಾಗಲೂ ಹಸಿರು ಕ್ಯಾಂಪಸ್‌ಗಳನ್ನು ಕಾಪಾಡಿಕೊಳ್ಳಲು ಒತ್ತು ನೀಡಿದೆ ಮತ್ತು ಮರ ನೆಡುವ ಬಗ್ಗೆ ನಿರಂತರ ನಿರ್ದೇಶನಗಳನ್ನು ನೀಡಿದೆ ಎಂದು ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.

"ಈ ನಿರ್ದೇಶನಗಳನ್ನು ಪರಿಣಾಮಕಾರಿಯಾಗಿ ಪಾಲಿಸಬೇಕೆಂದು ನಾವು ಬಯಸುತ್ತೇವೆ. ಆದ್ದರಿಂದ, ಸಂಸ್ಥೆಗಳ ಕ್ಯಾಂಪಸ್‌ಗಳಲ್ಲಿ ಸಾಕಷ್ಟು ಹಸಿರು ಇಲ್ಲದಿದ್ದರೆ ಅವುಗಳ ಮೇಲೆ ದಂಡ ವಿಧಿಸುವ ಪ್ರಸ್ತಾಪವನ್ನು ನಾವು ಪರಿಗಣಿಸುತ್ತಿದ್ದೇವೆ ಎಂದರು.

'ಕಾಲೇಜುಗಳು ವಿಶ್ವವಿದ್ಯಾಲಯದೊಂದಿಗೆ ಸಂಯೋಜಿತವಾಗಿರಲು ಕ್ಯಾಂಪಸ್‌ಗಳಲ್ಲಿ ಹಸಿರು ಹೊದಿಕೆಯನ್ನು ಕಡ್ಡಾಯಗೊಳಿಸುವುದನ್ನು ಸಹ ನಾವು ಪರಿಗಣಿಸುತ್ತಿದ್ದೇವೆ" ಎಂದರು.

ಈ ಪ್ರಸ್ತಾವನೆಗಳನ್ನು ವಿಶ್ವವಿದ್ಯಾಲಯದ ಕಾರ್ಯಕಾರಿ ಮಂಡಳಿಯ ಮುಂದೆ ಮಂಡಿಸಲಾಗುವುದು ಮತ್ತು ಅನುಮೋದನೆಯ ನಂತರ ಜಾರಿಗೆ ತರಲಾಗುವುದು ಎಂದು ಶರ್ಮಾ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿಯಿಂದ ಸಿಟಿ ರೌಂಡ್ಸ್

ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಮುಹೂರ್ತ ಫಿಕ್ಸ್; ಹೀಗಿದೆ ನಾಡಹಬ್ಬದ ವೇಳಾಪಟ್ಟಿ...

ಆರ್ ಎಸ್ಎಸ್ ಸಭೆ ನಡೆದಾಗಲೆಲ್ಲಾ ಅನೇಕ ಅನಾಹುತಗಳಾಗಿವೆ- ಬಿಕೆ ಹರಿಪ್ರಸಾದ್

ದೀದಿಗೆ ಮತ್ತೊಂದು ಶಾಕ್; ಮಮತಾ ನೇತೃತ್ವದ TMC ಬಣದ 12 ಬ್ಯಾಂಕ್ ಖಾತೆ ಫ್ರೀಜ್ ಮಾಡಿದ ಪೋಲೀಸರು!

2029ರ ಲೋಕಸಭೆ ಚುನಾವಣೆಯಿಂದಲೇ 'ಒಂದು ರಾಷ್ಟ್ರ–ಒಂದು ಚುನಾವಣೆ' ಜಾರಿ ಸಾಧ್ಯತೆ: JPC ಮುಖ್ಯಸ್ಥ ಪಿ.ಪಿ ಚೌಧರಿ