ಕ್ಲಾಸ್ ರೂಮ್ ಪರಿಶೀಲಿಸುತ್ತಿರುವ ಪೊಲೀಸ್ ಅಧಿಕಾರಿಗಳು 
ದೇಶ

ಪಂಜಾಬ್: ತರಗತಿಯಲ್ಲೇ ಗೆಳತಿಗೆ ಗುಂಡಿಕ್ಕಿ ಕೊಂದು, ತಾನೂ ಶೂಟ್ ಮಾಡಿಕೊಂಡ ಕಾನೂನು ವಿದ್ಯಾರ್ಥಿ!

ಪ್ರಿನ್ಸ್ ರಾಜ್ ಎಂಬ ಕಾನೂನು ವಿದ್ಯಾರ್ಥಿ ತರಗತಿಯಲ್ಲೇ ಸಂದೀಪ್ ಕೌರ್ ಮೇಲೆ ಗುಂಡು ಹಾರಿಸಿದ್ದಾನೆ. ಬಳಿಕ ತಾನೂ ಗುಂಡು ಹಾರಿಸಿಕೊಂಡಿದ್ದಾನೆ ಎಂದು ಉಪ ಪೊಲೀಸ್ ವರಿಷ್ಠಾಧಿಕಾರಿ ಜಗ್ಬೀರ್ ಸಿಂಗ್ ಅವರು ತಿಳಿಸಿದ್ದಾರೆ.

ತರಣ್ ತರಣ್: ಪಂಜಾಬ್‌ನ ತರಣ್ ತರಣ್ ಜಿಲ್ಲೆಯಲ್ಲಿ ಕಾನೂನು ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿಯೊಬ್ಬ ಸೋಮವಾರ ತನ್ನ ಗೆಳತಿ, ಕ್ಲಾಸ್ ಮೇಟ್ ಗೆ ಗುಂಡಿಕ್ಕಿ ಹತ್ಯೆ ಮಾಡಿ, ಬಳಿಕ ಅದೇ ಗನ್ ನಿಂದ ತಾನೂ ಗುಂಡು ಹಾರಿಸಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಿನ್ಸ್ ರಾಜ್ ಎಂಬ ಕಾನೂನು ವಿದ್ಯಾರ್ಥಿ ತರಗತಿಯಲ್ಲೇ ಸಂದೀಪ್ ಕೌರ್ ಮೇಲೆ ಗುಂಡು ಹಾರಿಸಿದ್ದಾನೆ. ಬಳಿಕ ತಾನೂ ಗುಂಡು ಹಾರಿಸಿಕೊಂಡಿದ್ದಾನೆ ಎಂದು ಉಪ ಪೊಲೀಸ್ ವರಿಷ್ಠಾಧಿಕಾರಿ ಜಗ್ಬೀರ್ ಸಿಂಗ್ ಅವರು ಪಿಟಿಐಗೆ ದೂರವಾಣಿ ಮೂಲಕ ತಿಳಿಸಿದ್ದಾರೆ.

ಆದಾಗ್ಯೂ, ಪ್ರಿನ್ಸ್ ರಾಜ್, ಕೌರ್ ಅವರನ್ನು ಏಕೆ ಕೊಂದರು ಎಂಬುದು ಇನ್ನೂ ತಿಳಿದುಬಂದಿಲ್ಲ. ಪ್ರಕರಣದ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇಬ್ಬರೂ ತರಣ್ ತರಣ್‌ನ ಉಸ್ಮಾ ಗ್ರಾಮದಲ್ಲಿರುವ ಕಾನೂನು ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿಗಳಾಗಿದ್ದರು ಎಂದು ಪೊಲೀಸರು ಹೇಳಿದ್ದಾರೆ.

ತರಗತಿ ಪ್ರಾರಂಭವಾಗುವ ಮೊದಲೇ ರಾಜ್ ತರಗತಿಗೆ ಬಂದು ಕೌರ್ ತಲೆಗೆ ಪಿಸ್ತೂಲಿನಿಂದ ಗುಂಡು ಹಾರಿಸಿದ್ದಾನೆ. ನಂತರ ತರಗತಿಯಲ್ಲೇ ಅದೇ ಪಿಸ್ತೂಲಿನಿಂದ ತಾನು ಗುಂಡು ಹಾರಿಸಿಕೊಂಡಿದ್ದಾನೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಕೌರ್ ಸ್ಥಳದಲ್ಲೇ ಸಾವನ್ನಪ್ಪಿದ್ದು, ಗಂಭೀರ ಸ್ಥಿತಿಯಲ್ಲಿದ್ದ ರಾಜ್‌ನನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್