ನಿಶಿಕಾಂತ್ ದುಬೆ - ರಾಹುಲ್ ಗಾಂಧಿ 
ದೇಶ

ರಾಹುಲ್ ಗಾಂಧಿ ಲೋಕಸಭಾ ಸದಸ್ಯತ್ವ ರದ್ದುಗೊಳಿಸಲು ಬಿಜೆಪಿ ಸಂಸದ ನೋಟಿಸ್; ಕಾರಣ ಏನು ಗೊತ್ತಾ?

ರಾಹುಲ್ ಗಾಂಧಿ ಅವರ ಸದಸ್ಯತ್ವವನ್ನು ರದ್ದುಗೊಳಿಸುವಂತೆ ನಾನು 'ನಿಲುವಳಿ ಪ್ರಸ್ತಾವನೆ' ಸಲ್ಲಿಸಿದ್ದೇನೆ ಎಂದು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಅವರು ಗುರುವಾರ ಹೇಳಿದ್ದಾರೆ.

ನವದೆಹಲಿ: ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸುತ್ತಿರುವ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಮುಗಿಬಿದ್ದಿರುವ ಆಡಳಿತರೂಢ ಬಿಜೆಪಿ, ಇದೀಗ ಅವರ ಲೋಕಸಭಾ ಸದಸ್ಯತ್ವವನ್ನು ರದ್ದುಗೊಳಿಸಲು ನೋಟಿಸ್ ಸಲ್ಲಿಸಿದೆ.

ರಾಹುಲ್ ಗಾಂಧಿ ಅವರ ಸದಸ್ಯತ್ವವನ್ನು ರದ್ದುಗೊಳಿಸುವಂತೆ ನಾನು 'ನಿಲುವಳಿ ಪ್ರಸ್ತಾವನೆ' ಸಲ್ಲಿಸಿದ್ದೇನೆ ಎಂದು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಅವರು ಗುರುವಾರ ಹೇಳಿದ್ದಾರೆ.

ಬುಧವಾರ ಭಾರತ-ಅಮೆರಿಕ ವ್ಯಾಪಾರ ಒಪ್ಪಂದ, ಕೇಂದ್ರ ಬಜೆಟ್ ಅನ್ನು ಟೀಕಿಸಿ ರಾಹುಲ್ ಗಾಂಧಿ ಸಂಸತ್ತಿನಲ್ಲಿ ಭಾಷಣ ಮಾಡಿದ್ದರು. ಇದಾದ ಒಂದು ದಿನದ ನಂತರ ಈ ಬೆಳವಣಿಗೆ ನಡೆದಿದೆ.

ಸಂಸತ್ ಭವನದ ಸಂಕೀರ್ಣದಲ್ಲಿ ಪಿಟಿಐ ಜತೆ ಮಾತನಾಡಿದ ದುಬೆ, ತಮ್ಮ ನೋಟಿಸ್‌ನಲ್ಲಿ ರಾಹುಲ್ ಗಾಂಧಿಯವರು ಸೊರೊಸ್ ಫೌಂಡೇಶನ್, ಯುಎಸ್‌ಐಐಡಿ, ಫೋರ್ಡ್ ಫೌಂಡೇಶನ್‌ನೊಂದಿಗೆ ಕೈಜೋಡಿಸಿ ವಿದೇಶಗಳಿಗೆ ಹೇಗೆ ಭೇಟಿ ನೀಡುತ್ತಾರೆ ಮತ್ತು ಭಾರತ ವಿರೋಧಿ ಹೇಳಿಕೆಗಳನ್ನು ಉಲ್ಲೇಖಿಸಿರುವುದಾಗಿ ತಿಳಿಸಿದ್ದಾರೆ.

ಇದು ವಿಶೇಷ ಹಕ್ಕುಚ್ಯುತಿ ನೋಟಿಸ್ ಅಲ್ಲ. ಬದಲಾಗಿ ಒಂದು ಪ್ರಮುಖ ಪ್ರಸ್ತಾವನೆ ಸಲ್ಲಿಸಿದ್ದೇನೆ. ಅದರಲ್ಲಿ ನಾನು ರಾಹುಲ್ ಗಾಂಧಿ, ಸೊರೊಸ್ ಫೌಂಡೇಶನ್, ಫೋರ್ಡ್ ಫೌಂಡೇಶನ್ ಮತ್ತು ಯುಎಸ್‌ಐಐಡಿಯೊಂದಿಗೆ ಥೈಲ್ಯಾಂಡ್, ವಿಯೆಟ್ನಾಂ, ಕಾಂಬೋಡಿಯಾಗೆ ಹೇಗೆ ಭೇಟಿ ನೀಡುತ್ತಾರೆ ಮತ್ತು ಭಾರತ ವಿರೋಧಿ ಪಡೆಗಳೊಂದಿಗೆ ಹೇಗೆ ಒಪ್ಪಂದ ಮಾಡಿಕೊಳ್ಳುತ್ತಾರೆ ಎಂಬುದನ್ನು ಉಲ್ಲೇಖಿಸಿರುವ ಸಬ್ಸ್ಟಾಂಟಿವ್ ಮೊಷನ್ ನೋಟಿಸ್ ನೀಡಿದ್ದೇನೆ" ಎಂದು ದುಬೆ ತಿಳಿಸಿದ್ದಾರೆ.

ರಾಹುಲ್ ಗಾಂಧಿ ಅವರ ಸಂಸದೀಯ ಸದಸ್ಯತ್ವವನ್ನು ರದ್ದುಗೊಳಿಸಬೇಕು ಹಾಗೂ ಜೀವಿತಾವಧಿಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡಬಾರದು ಎಂದು ನಾನು ಆಗ್ರಹಿಸಿದ್ದೇನೆ ಎಂದು ಬಿಜೆಪಿ ಸಂಸದ ಹೇಳಿದ್ದಾರೆ.

ಸಬ್ಸ್ಟಾಂಟಿವ್ ಮೊಷನ್ ಎನ್ನುವುದು ಲೋಕಸಭೆ ಅಥವಾ ವಿಧಾನಸಭೆಯ ಅನುಮೋದನೆಗಾಗಿ ಸಲ್ಲಿಸಲಾದ ಸ್ವತಂತ್ರ, ಪ್ರಸ್ತಾವನೆಯಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್