ಪ್ರಧಾನಿ ನರೇಂದ್ರ ಮೋದಿ 
ದೇಶ

ಪ್ರಧಾನಿಯ ಹೊಸ ಕಚೇರಿ 'ಸೇವಾ ತೀರ್ಥ' ಹಾಗೂ ಕರ್ತವ್ಯ ಭವನ ನಾಳೆ ಉದ್ಘಾಟನೆ!

ಹಲವು ದಶಕಗಳಿಂದ, ಹಲವಾರು ಪ್ರಮುಖ ಸರ್ಕಾರಿ ಕಚೇರಿಗಳು ಮತ್ತು ಸಚಿವಾಲಯಗಳು ʻಸೆಂಟ್ರಲ್ ವಿಸ್ಟಾʼ ಪ್ರದೇಶದ ಅನೇಕ ಸ್ಥಳಗಳಲ್ಲಿ ಚದುರಿಹೋಗಿದ್ದವು. ಅಲ್ಲದೇ ಹಳೆಯ ಮೂಲಸೌಕರ್ಯಗಳನ್ನು ಬಳಸಿಕೊಂಡು ಕಾರ್ಯನಿರ್ವಹಿಸುತ್ತಿದ್ದವು.

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಇದೇ 13 ರಂದು ಪ್ರಧಾನ ಮಂತ್ರಿ ಕಚೇರಿಯ ಹೊಸ ಕಟ್ಟಡ ಸೇವಾ ತೀರ್ಥ, ಕರ್ತವ್ಯ ಭವನ 1 ಮತ್ತು 2 ಅನ್ನು ಉದ್ಘಾಟಿಸಲಿದ್ದಾರೆ. ಸಂಜೆ 6 ಗಂಟೆಗೆ ʻಸೇವಾ ತೀರ್ಥʼದಲ್ಲಿ ಸಾರ್ವಜನಿಕ ಕಾರ್ಯಕ್ರಮವನ್ನುದ್ದೇಶಿಸಿ ಅವರು ಮಾತನಾಡಲಿದ್ದಾರೆ.

ಈ ಕುರಿತು ಪ್ರಧಾನ ಮಂತ್ರಿ ಕಚೇರಿ ಗುರುವಾರ ಮಾಹಿತಿ ಹಂಚಿಕೊಂಡಿದ್ದು, ಭಾರತದ ಆಡಳಿತ ವಾಸ್ತುಶಿಲ್ಪದಲ್ಲಿ ಇದು ಪರಿವರ್ತನೆಯ ಮೈಲಿಗಲ್ಲಾಗಿದೆ. ಆಧುನಿಕ, ದಕ್ಷ, ಜನ-ಕೇಂದ್ರಿತ ಹಾಗೂ ಎಲ್ಲರಿಗೂ ಪ್ರವೇಶ ಸಾಧ್ಯವಾದ ಪರಿಸರ ವ್ಯವಸ್ಥೆಯನ್ನು ನಿರ್ಮಿಸುವ ಪ್ರಧಾನಮಂತ್ರಿಯವರ ಬದ್ಧತೆಯನ್ನು ಇದು ಪ್ರತಿಬಿಂಬಿಸುತ್ತದೆ ಎಂದು ಹೇಳಿದೆ.

ಹಲವು ದಶಕಗಳಿಂದ, ಹಲವಾರು ಪ್ರಮುಖ ಸರ್ಕಾರಿ ಕಚೇರಿಗಳು ಮತ್ತು ಸಚಿವಾಲಯಗಳು ʻಸೆಂಟ್ರಲ್ ವಿಸ್ಟಾʼ ಪ್ರದೇಶದ ಅನೇಕ ಸ್ಥಳಗಳಲ್ಲಿ ಚದುರಿಹೋಗಿದ್ದವು. ಅಲ್ಲದೇ ಹಳೆಯ ಮೂಲಸೌಕರ್ಯಗಳನ್ನು ಬಳಸಿಕೊಂಡು ಕಾರ್ಯನಿರ್ವಹಿಸುತ್ತಿದ್ದವು. ಇದರಿಂದ ಅಸಮರ್ಪಕ ಕಾರ್ಯ ನಿರ್ವಹಣೆ, ಸಮನ್ವಯತೆಯ ಸವಾಲ್ ಮತ್ತಿತರ ಸಮಸ್ಯೆಯಾಗುತಿತ್ತು. ಈಗ ಹೊಸ ಕಟ್ಟಡ ಸಂಕೀರ್ಣಗಳು ಈ ಸಮಸ್ಯೆಗಳನ್ನು ಪರಿಹರಿಸುತ್ತವೆ ಎಂದು ತಿಳಿಸಿದೆ.

ʻಸೇವಾ ತೀರ್ಥʼ ಪ್ರಧಾನ ಮಂತ್ರಿಗಳ ಕಚೇರಿಯಾಗಿದ್ದು, ಇದರಲ್ಲಿ ರಾಷ್ಟ್ರೀಯ ಭದ್ರತಾ ಮಂಡಳಿ ಸಚಿವಾಲಯ, ಸಂಪುಟ ಸಚಿವಾಲಯ ಇರಲಿದೆ. ಇವೆಲ್ಲವೂ ಈ ಹಿಂದೆ ಬೇರೆ ಬೇರೆ ಸ್ಥಳಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದವು.

ಕರ್ತವ್ಯ ಭವನ-1 & 2ನೇ ಕಟ್ಟಡದಲ್ಲಿ ಹಣಕಾಸು ಸಚಿವಾಲಯ, ರಕ್ಷಣಾ ಸಚಿವಾಲಯ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ, ಕಾರ್ಪೊರೇಟ್ ವ್ಯವಹಾರಗಳ ಸಚಿವಾಲಯ, ಶಿಕ್ಷಣ ಸಚಿವಾಲಯ, ಸಂಸ್ಕೃತಿ ಸಚಿವಾಲಯ, ಕಾನೂನು ಮತ್ತು ನ್ಯಾಯ ಸಚಿವಾಲಯ, ಮಾಹಿತಿ ಮತ್ತು ಪ್ರಸಾರ ಸಚಿವಾಲಯ, ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯ, ರಾಸಾಯನಿಕ ಮತ್ತು ರಸಗೊಬ್ಬರ ಸಚಿವಾಲಯ ಹಾಗೂ ಬುಡಕಟ್ಟು ವ್ಯವಹಾರಗಳ ಸಚಿವಾಲಯ ಸೇರಿದಂತೆ ಹಲವಾರು ಪ್ರಮುಖ ಸಚಿವಾಲಯಗಳು ಇರಲಿವೆ.

ಎರಡೂ ಕಟ್ಟಡ ಸಂಕೀರ್ಣಗಳು ಡಿಜಿಟಲ್ ಸಂಯೋಜಿತ ಕಚೇರಿಗಳು, ರಚನಾತ್ಮಕ ಸಾರ್ವಜನಿಕ ಒಡನಾಟ ವಲಯಗಳು ಮತ್ತು ಕೇಂದ್ರೀಕೃತ ಸ್ವಾಗತ ಕೇಂದ್ರ ಸೌಲಭ್ಯಗಳನ್ನು ಹೊಂದಿವೆ. 4-ಸ್ಟಾರ್ ʻಗೃಹʼ ಮಾನದಂಡಗಳಿಗೆ ಅನುಗುಣವಾಗಿ ವಿನ್ಯಾಸಗೊಳಿಸಲಾದ ಈ ಕಟ್ಟಡ ಸಂಕೀರ್ಣ, ನವೀಕರಿಸಬಹುದಾದ ಇಂಧನ ವ್ಯವಸ್ಥೆಗಳು, ಜಲ ಸಂರಕ್ಷಣಾ ಕ್ರಮಗಳು, ತ್ಯಾಜ್ಯ ನಿರ್ವಹಣಾ ಪರಿಹಾರಗಳು ಮತ್ತು ಉನ್ನತ ಕಾರ್ಯಕ್ಷಮತೆಯ ಕಟ್ಟಡ ಪರಿಸರವನ್ನು ಒಳಗೊಂಡಿವೆ.

ಈ ಕ್ರಮಗಳು ಕಾರ್ಯಾಚರಣೆಯ ದಕ್ಷತೆಯನ್ನು ಹೆಚ್ಚಿಸುವುದರ ಜೊತೆಗೆ ಪರಿಸರದ ಮೇಲೆ ಪರಿಣಾಮವನ್ನು ಗಮನಾರ್ಹವಾಗಿ ಕಡಿಮೆ ಮಾಡುತ್ತವೆ. ಕಟ್ಟಡ ಸಂಕೀರ್ಣಗಳು ʻಸ್ಮಾರ್ಟ್ ಪ್ರವೇಶʼ ನಿಯಂತ್ರಣ ವ್ಯವಸ್ಥೆಗಳು, ಕಣ್ಗಾವಲು ಜಾಲಗಳು ಮತ್ತು ಸುಧಾರಿತ ತುರ್ತು ಪ್ರತಿಕ್ರಿಯೆ ಮೂಲಸೌಕರ್ಯಗಳಂತಹ ಸಮಗ್ರ ಸುರಕ್ಷತೆ ಮತ್ತು ಭದ್ರತಾ ವ್ಯವಸ್ಥೆಗಳನ್ನು ಸಹ ಒಳಗೊಂಡಿದ್ದು, ಅಧಿಕಾರಿಗಳು ಮತ್ತು ಸಂದರ್ಶಕರಿಗೆ ಸುರಕ್ಷಿತ ಮತ್ತು ಸುಗಮ ಪ್ರವೇಶದ ವಾತಾವರಣವನ್ನು ಖಾತ್ರಿಪಡಿಸುತ್ತದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಹುಲ್ ಗಾಂಧಿ ಲೋಕಸಭಾ ಸದಸ್ಯತ್ವ ರದ್ದುಗೊಳಿಸಲು ಬಿಜೆಪಿ ಸಂಸದ ನೋಟಿಸ್; ಕಾರಣ ಏನು ಗೊತ್ತಾ?

'ವಂದೇ ಮಾತರಂ' ಹಾಡುವುದು ಕಡ್ಡಾಯ: ಮತೀಯ ಅಜೆಂಡಾ, ಮುಸ್ಲಿಂ ಸಂಘಟನೆ ಜಮಿಯತ್ ತೀವ್ರ ವಿರೋಧ!

ಕೂಡಲೇ ಭಾರತಕ್ಕೆ ವಾಪಸ್ಸಾಗಿ: ಇಲ್ಲವಾದ್ರೆ! ವಿಜಯ್ ಮಲ್ಯಗೆ ಕೊನೆಯ ಅವಕಾಶ ನೀಡಿದ ನ್ಯಾಯಾಲಯ

ಹೆಬ್ಬಾಳ–ಸರ್ಜಾಪುರ ಮೆಟ್ರೋ ಯೋಜನೆಗೆ ಕೇಂದ್ರ ಸರ್ಕಾರದ ಬ್ರೇಕ್!

ದೂರದರ್ಶನದ ಖ್ಯಾತ 'ನ್ಯೂಸ್ ಆಂಕರ್' ಸರಳ ಮಹೇಶ್ವರಿ ನಿಧನ!

SCROLL FOR NEXT