ಪ್ರತಿಪಕ್ಷಗಳ ಪ್ರತಿಭಟನೆ 
ದೇಶ

ಭಾರತ-ಅಮೆರಿಕ ವ್ಯಾಪಾರ ಒಪ್ಪಂದದ ವಿರುದ್ಧ ಪ್ರತಿಪಕ್ಷಗಳ ಪ್ರತಿಭಟನೆ; 'ಟ್ರ್ಯಾಪ್ ಡೀಲ್' ಎಂದು ಟೀಕೆ

ಇಂದು ಲೋಕಸಭೆ ಕಲಾಪ ಆರಂಭವಾಗುತ್ತಿದ್ದಂತೆ, ಸ್ಪೀಕರ್ ಸ್ಥಾನದಲ್ಲಿದ್ದ ಕೃಷ್ಣ ಪ್ರಸಾದ್ ಟೆನ್ನೇಟಿ, ವಿರೋಧ ಪಕ್ಷದ ಸಂಸದರ ಘೋಷಣೆಗಳ ನಡುವೆಯೇ ಪ್ರಶ್ನೋತ್ತರ ಅವಧಿಯನ್ನು ಪ್ರಾರಂಭಿಸಲು ಅವಕಾಶ ನೀಡಿದರು.

ನವದೆಹಲಿ: ಭಾರತ-ಅಮೆರಿಕ ಮಧ್ಯಂತರ ವ್ಯಾಪಾರ ಒಪ್ಪಂದ ಮತ್ತು ಇತರ ವಿಷಯಗಳಿಗೆ ಸಂಬಂಧಿಸಿದಂತೆ ವಿರೋಧ ಪಕ್ಷಗಳ ಸದಸ್ಯರು ಗುರುವಾರ ಸಂಸತ್ ಭವನದ ಹೊರಗೆ ಪ್ರತಿಭಟನೆ ನಡೆಸಿದರು.

ಇಂದು ಲೋಕಸಭೆ ಕಲಾಪ ಆರಂಭವಾಗುತ್ತಿದ್ದಂತೆ, ಸ್ಪೀಕರ್ ಸ್ಥಾನದಲ್ಲಿದ್ದ ಕೃಷ್ಣ ಪ್ರಸಾದ್ ಟೆನ್ನೇಟಿ, ವಿರೋಧ ಪಕ್ಷದ ಸಂಸದರ ಘೋಷಣೆಗಳ ನಡುವೆಯೇ ಪ್ರಶ್ನೋತ್ತರ ಅವಧಿಯನ್ನು ಪ್ರಾರಂಭಿಸಲು ಅವಕಾಶ ನೀಡಿದರು. ಸ್ವಲ್ಪ ಸಮಯದ ನಂತರ, ಸದಸ್ಯರು ಸದನದ ಬಾವಿಗೆ ನುಗ್ಗಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರು. ಹೀಗಾಗಿ ಸ್ಪೀಕರ್ ಮಧ್ಯಾಹ್ನದವರೆಗೆ ಕಲಾಪವನ್ನು ಮುಂದೂಡಬೇಕಾಯಿತು.

ಭಾರತ-ಅಮೆರಿಕ ಮಧ್ಯಂತರ ವ್ಯಾಪಾರ ಒಪ್ಪಂದವನ್ನು ವಿರೋಧಿಸಿ, ವಿರೋಧ ಪಕ್ಷದ ಸಂಸದರು, ಸಂಸತ್ ಭವನದ ಮಕರ ದ್ವಾರದಲ್ಲಿ ಪ್ರತಿಭಟನೆ ನಡೆಸಿದರು ಮತ್ತು ಭಾರತ-ಅಮೆರಿಕ ಒಪ್ಪಂದ ಒಂದು "ಟ್ರ್ಯಾಪ್ ಡೀಲ್" ಎಂದು ಟೀಕಿಸಿದರು.

ಭಾರತ-ಅಮೆರಿಕ ಮಧ್ಯಂತರ ವ್ಯಾಪಾರ ಒಪ್ಪಂದ ಮತ್ತು ಜಂಟಿ ಹೇಳಿಕೆಯಿಂದ ಉದ್ಭವಿಸಿರುವ "ಗಂಭೀರ ಕಳವಳಗಳ" ಬಗ್ಗೆ ಚರ್ಚೆಗೆ ಅವಕಾಶ ಕೋರಿ ಕಾಂಗ್ರೆಸ್ ಸಂಸದ ಮನೀಶ್ ತಿವಾರಿ ಲೋಕಸಭೆಯಲ್ಲಿ ನಿಲುವಳಿ ಸೂಚನೆ ಮಂಡಿಸಿದರು.

ಜಂಟಿ ಹೇಳಿಕೆಯಲ್ಲಿ ರಷ್ಯಾದ ತೈಲ ಖರೀದಿ ಮತ್ತು ಕೃಷಿ ಸಂಬಂಧಿತ ರಿಯಾಯಿತಿಗಳಿಗೆ ಸಂಬಂಧಿಸಿದ ಬದ್ಧತೆಗಳಿವೆ. ಸರ್ಕಾರ ಈ ಬಗ್ಗೆ ತಕ್ಷಣ ಹೇಳಿಕೆಯನ್ನು ನೀಡಬೇಕೆಂದು ತಿವಾರಿ ತಮ್ಮ ನೋಟಿಸ್‌ನಲ್ಲಿ ಒತ್ತಾಯಿಸಿದರು. ಅಂತಹ ಕ್ರಮಗಳು ಭಾರತದ ಇಂಧನ ಭದ್ರತೆ, ರೈತರ ಹಿತಾಸಕ್ತಿ ಮತ್ತು ಕಾರ್ಯತಂತ್ರದ ಸ್ವಾಯತ್ತತೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಬಹುದು ಎಂದು ಅವರು ಹೇಳಿದರು.

ಕಾರ್ಮಿಕರ ಮುಷ್ಕರಕ್ಕೆ ಬೆಂಬಲ

ಇಂದು ವಿವಿಧ ಸರ್ಕಾರಿ ನೀತಿಗಳ ವಿರುದ್ಧ ಕೇಂದ್ರ ಕಾರ್ಮಿಕ ಸಂಘಗಳು ಕರೆ ನೀಡಿದ್ದ ಭಾರತ್ ಬಂದ್‌ಗೂ ಬೆಂಬಲ ವ್ಯಕ್ತಪಡಿಸಿದರು.

ಕೇಂದ್ರ ಸರ್ಕಾರದ ‘ಕಾರ್ಮಿಕ ವಿರೋಧಿ, ರೈತ ವಿರೋಧಿ ಮತ್ತು ದೇಶವಿರೋಧಿ’ ನೀತಿಗಳನ್ನು ಖಂಡಿಸಿ ಹಾಗೂ 4 ಹೊಸ ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ವೇದಿಕೆ ಇಂದು ದೇಶವ್ಯಾಪಿ ಮುಷ್ಕರಕ್ಕೆ(ಭಾರತ ಬಂದ್) ಕರೆ ನೀಡಿದ್ದು, ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್