ವಿಜಯ್ ಮಲ್ಯ 
ದೇಶ

ಕೂಡಲೇ ಭಾರತಕ್ಕೆ ವಾಪಸ್ಸಾಗಿ: ಇಲ್ಲವಾದ್ರೆ..! ವಿಜಯ್ ಮಲ್ಯಗೆ ಕೊನೆಯ ಅವಕಾಶ ನೀಡಿದ ನ್ಯಾಯಾಲಯ

ಕೇಂದ್ರ ಸರ್ಕಾರದ ದೇಶ ಭ್ರಷ್ಟ ಆರ್ಥಿಕ ಅಪರಾಧಿಗಳ ಕಾಯ್ದೆ (FEOA) ಮತ್ತು ಅದರ ಅಡಿಯಲ್ಲಿ ತಮ್ಮನ್ನು ದೇಶಭ್ರಷ್ಟ ಎಂದು ಘೋಷಿಸಿರುವುದನ್ನು ಪ್ರಶ್ನಿಸಿ ವಿಜಯ್ ಮಲ್ಯ ಅರ್ಜಿ ಸಲ್ಲಿಸಿದ್ದಾರೆ.

ಮುಂಬೈ: ಉದ್ದೇಶಪೂರ್ವಕವಾಗಿ ನ್ಯಾಯಾಲಯದ ವಿಚಾರಣೆಯಿಂದ ತಪ್ಪಿಸಿಕೊಳ್ಳುವಾಗ ನ್ಯಾಯಯುತ ಪರಿಹಾರ ಪಡೆಯಲು ಸಾಧ್ಯವಿಲ್ಲ ಎಂದು ದೇಶಭ್ರಷ್ಟ ಆರ್ಥಿಕ ಅಪರಾಧಿ ವಿಜಯ್ ಮಲ್ಯ ಅವರಿಗೆ ಬಾಂಬೆ ಹೈಕೋರ್ಟ್ ಗುರುವಾರ ಛೀಮಾರಿ ಹಾಕಿದೆ. ಭಾರತಕ್ಕೆ ಮರಳಲು ಕೊನೆ ಅವಕಾಶ ನೀಡಿದೆ.

ಕೇಂದ್ರ ಸರ್ಕಾರದ ದೇಶ ಭ್ರಷ್ಟ ಆರ್ಥಿಕ ಅಪರಾಧಿಗಳ ಕಾಯ್ದೆ (FEOA) ಮತ್ತು ಅದರ ಅಡಿಯಲ್ಲಿ ತಮ್ಮನ್ನು ದೇಶಭ್ರಷ್ಟ ಎಂದು ಘೋಷಿಸಿರುವುದನ್ನು ಪ್ರಶ್ನಿಸಿ ವಿಜಯ್ ಮಲ್ಯ ಅರ್ಜಿ ಸಲ್ಲಿಸಿದ್ದಾರೆ.

ಮುಖ್ಯ ನ್ಯಾಯಮೂರ್ತಿ ಅಲೋಕ್ ಅರಾಧೆ ಮತ್ತು ನ್ಯಾಯಮೂರ್ತಿ ಗೌತಮ್ ಅನ್ಬಾಡ್ ಅವರಿದ್ದ ಪೀಠವು ಈ ಅರ್ಜಿಯ ವಿಚಾರಣೆ ನಡೆಸುತ್ತಿದೆ. ಮಲ್ಯ ನ್ಯಾಯಾಲಯದ ವ್ಯಾಪ್ತಿಯಿಂದ ತಪ್ಪಿಸಿಕೊಳ್ಳುತ್ತಿದ್ದಾರೆ ಎಂಬುದನ್ನು ದಾಖಲೆಗಳು ತೋರಿಸುತ್ತಿವೆ. ಆದ್ದರಿಂದ ಅವರ ಅರ್ಜಿಯಲ್ಲಿ ಪರಿಹಾರವನ್ನು ನಿರೀಕ್ಷಿಸಲು ಸಾಧ್ಯವಿಲ್ಲ ಎಂದು ನ್ಯಾಯ ಪೀಠ ಹೇಳಿದೆ.

"ನೀವು ಕೂಡಲೇ ಭಾರತಕ್ಕೆ ಮರಳಬೇಕು. ಇಲ್ಲದಿದ್ದರೆ ನಿಮ್ಮ ಅರ್ಜಿ ವಿಚಾರಣೆ ನಡೆಸಲು ಸಾಧ್ಯವಿಲ್ಲ. ಉದ್ದೇಶಪೂರ್ವಕವಾಗಿ ನ್ಯಾಯಾಲಯದ ಪ್ರಕ್ರಿಯೆಯಿಂದ ತಪ್ಪಿಸಿಕೊಳ್ಳುತ್ತಿದ್ದೀರಿ. ಹೀಗಾಗಿ ನ್ಯಾಯಯುತ ಪರಿಹಾರವನ್ನು ಪಡೆಯಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

ನ್ಯಾಯಯುತವಾಗಿ ಪ್ರಕರಣ ವಜಾಗೊಳಿಸಲು ಸಾಧ್ಯವಿಲ್ಲ. ಭಾರತಕ್ಕೆ ಮರಳಲು ಕೊನೆಯ ಅವಕಾಶ ನೀಡುತ್ತಿರುವುದಾಗಿ ಹೇಳಿದ ನ್ಯಾಯಾಲಯ ಮುಂದಿನ ವಾರಕ್ಕೆ ಪ್ರಕರಣವನ್ನು ಮುಂದೂಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಚೀನಾ ಏಕಪಕ್ಷೀಯ ನೀತಿಗೆ ಬ್ರೇಕ್‌: 'Quad' ಸಭೆ ನಡುವೆ ಮಹತ್ವದ ಖನಿಜ ಒಪ್ಪಂದಕ್ಕೆ ಭಾರತ-ಅಮೆರಿಕಾ ಸಹಿ..!

ಚೀನಾಗೆ ಕೌಂಟರ್: ಇಂಡೋ-ಪೆಸಿಫಿಕ್‌ನಲ್ಲಿ ಭದ್ರತಾ ಸಹಕಾರ ಹೆಚ್ಚಿಸಲು 'Quad' ಮಹತ್ವದ ತೀರ್ಮಾನ, ಹೊಸ ಕಾರ್ಯಯೋಜನೆ ಘೋಷಿಸಿದ ಮಾರ್ಕೊ ರುಬಿಯೋ..!

ದೆಹಲಿಯಲ್ಲಿ ಸಿದ್ದರಾಮಯ್ಯ-ಡಿಕೆ.ಶಿವಕುಮಾರ್; ನಾಯಕತ್ವ ಬದಲಾವಣೆ ಊಹಾಪೋಹಗಳಿಗೆ ಬೀಳುತ್ತಾ ತೆರೆ? ಕುತೂಹಲ ಮೂಡಿಸಿದ ಕಾಂಗ್ರೆಸ್ ಸಭೆ..!

ಪ್ಯಾಲೆಸ್ಟೀನ್ ರಾಷ್ಟ್ರ ಸ್ಥಾಪನೆವರೆಗೆ ಇಸ್ರೇಲ್‌ಗೆ ಮಾನ್ಯತೆ ಇಲ್ಲ: ಅಬ್ರಹಾಂ ಒಪ್ಪಂದಕ್ಕೆ 'NO' ಎಂದ ಪಾಕಿಸ್ತಾನ, ಟ್ರಂಪ್ ರಾಜತಾಂತ್ರಿಕ ಯತ್ನಕ್ಕೆ ಹಿನ್ನೆಡೆ..!

‘ಸ್ವಯಂ ರಕ್ಷಣೆ’ ಹೆಸರಿನಲ್ಲಿ ಇರಾನ್ ಕ್ಷಿಪಣಿ ಉಡಾವಣೆ ತಾಣಗಳ ಮೇಲೆ ಅಮೆರಿಕಾ ವಾಯುದಾಳಿ: ಟ್ರಂಪ್ ದ್ವಿಮುಖ ನಡೆ ವಿರುದ್ಧ ಟೀಕೆ, ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಮತ್ತೆ ಉದ್ವಿಗ್ನ..!

SCROLL FOR NEXT