ಆಟೋ ಜಖಂಗೊಂಡಿರುವುದು. 
ದೇಶ

ಮುಂಬೈ ಮೆಟ್ರೋ ಪಿಲ್ಲರ್ ಕುಸಿತ: ಚಲಿಸುತ್ತಿದ್ದ ಕಾರು-ಆಟೋ ಮೇಲೆ ಬಿದ್ದ ಕಾಂಕ್ರೀಟ್ ಸ್ಲ್ಯಾಬ್; ಓರ್ವ ಸಾವು, ನಾಲ್ವರಿಗೆ ಗಾಯ; Video

ಕಾಮಗಾರಿ ನಡೆಯುತ್ತಿದ್ದ ವೇಳೆ ರಸ್ತೆಯಲ್ಲಿ ಸಾಗುತ್ತಿದ್ದ ಆಟೋ ಹಾಗೂ ಕಾರಿನ ಮೇಲೆ ಕಾಂಕ್ರೀಟ್ ಸ್ಲ್ಯಾಬ್ ಕುಸಿದು ಬಿದ್ದಿದೆ ಎಂದು ತಿಳಿದುಬಂದಿದೆ.

ಮುಂಬೈ: ವಾಣಿಜ್ಯ ನಗರಿ ಮುಂಬೈನಲ್ಲಿ ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್'ನ ಕಾಂಕ್ರೀಟ್ ಸ್ಲ್ಯಾಬ್ ವೊಂದು ಆಟೋ ಹಾಗೂ ಕಾರಿನ ಮೇಲೆ ಕುಸಿದು ಬಿದ್ದಿದ್ದು, ಪರಿಣಾಮ ಓರ್ವ ಸಾವನ್ನಪ್ಪಿ, ನಾಲ್ವರು ಗಾಯಗೊಂಡಿರುವ ಘಟನೆ ಶುಕ್ರವಾರ ನಡೆದಿದೆ.

ಎಲ್‌ಬಿಎಸ್ ರಸ್ತೆಯ ಜಾನ್ಸನ್ & ಜಾನ್ಸನ್ ಕಂಪನಿಯ ಬಳಿ ಮಧ್ಯಾಹ್ನ 12.20 ರ ಸುಮಾರಿಗೆ ಈ ದುರ್ಘಟನೆ ಸಂಭವಿಸಿದೆ.

ಕಾಮಗಾರಿ ನಡೆಯುತ್ತಿದ್ದ ವೇಳೆ ರಸ್ತೆಯಲ್ಲಿ ಸಾಗುತ್ತಿದ್ದ ಆಟೋ ಹಾಗೂ ಕಾರಿನ ಮೇಲೆ ಕಾಂಕ್ರೀಟ್ ಸ್ಲ್ಯಾಬ್ ಕುಸಿದು ಬಿದ್ದಿದೆ ಎಂದು ತಿಳಿದುಬಂದಿದೆ.

ಸುದ್ದಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳದ ಸಿಬ್ಬಂದಿ, ಪೊಲೀಸ್ ತಂಡ, ಮೆಟ್ರೋ ಸಿಬ್ಬಂದಿ, ಸ್ಥಳೀಯ ಅಧಿಕಾರಿಗಳು ಮತ್ತು 108 ಆಂಬ್ಯುಲೆನ್ಸ್ ಸೇವಾ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿದರು.

ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರೆದಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಕಾಂಕ್ರೀಟ್ ಸ್ಲ್ಯಾಬ್ ಕುಸಿತಕ್ಕೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ.

ಶಿವಾಜಿ ಜೊತೆಗೆ ಟಿಪ್ಪು ಹೋಲಿಕೆ: ವಿವಾದ ಹುಟ್ಟುಹಾಕಿದ ಮಹಾರಾಷ್ಟ್ರ ಕಾಂಗ್ರೆಸ್ ಮುಖ್ಯಸ್ಥ, ಬಿಜೆಪಿ ಕಿಡಿ!

T-20 ವಿಶ್ವಕಪ್ 2026: ನ್ಯೂಜಿಲೆಂಡ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ 7 ವಿಕೆಟ್ ಭರ್ಜರಿ ಗೆಲುವು!

ಬ್ರಹ್ಮಪುತ್ರ ನದಿ ಕೆಳಗೆ ದೇಶದ ಮೊದಲ ರಸ್ತೆ-ರೈಲು ಸುರಂಗಕ್ಕೆ ಕೇಂದ್ರ ಸಂಪುಟ ಅನುಮೋದನೆ

ಹಂಪಿ ಉತ್ಸವ: ಸ್ವಂತ ಖರ್ಚಿನಲ್ಲಿ ಸರ್ಕಾರಿ ಶಾಲಾ ಮಕ್ಕಳಿಗೆ ಹೆಲಿಕಾಪ್ಟರ್‌ನಲ್ಲಿ ಸುತ್ತಾಡಿಸಿದ ಸಚಿವ ಜಮೀರ್!

ಹಾಸನ: ಮದುವೆಗೆ ಬಂದಿದ್ದ ಮಹಿಳೆ ನಿಗೂಢ ನಾಪತ್ತೆ, ಕೊಲೆ ಶಂಕೆ!

SCROLL FOR NEXT