ಸುಪ್ರೀಂ ಕೋರ್ಟ್  online desk
ದೇಶ

ಸ್ತನ ಹಿಡಿದು, ಪೈಜಾಮಾ ಬಿಚ್ಚುವುದು ಅತ್ಯಾಚಾರ ಯತ್ನವಲ್ಲ: ಅಲಹಾಬಾದ್ ಹೈಕೋರ್ಟ್‌ ಆದೇಶ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಸ್ತನಗಳನ್ನು ಹಿಡಿದು ಪೈಜಾಮಾದ ಲಾಡಿ ಬಿಚ್ಚುವುದು ಅತ್ಯಾಚಾರ ಯತ್ನವಲ್ಲ. ಅತ್ಯಾಚಾರಕ್ಕೆ ಸಿದ್ಧತೆ ಅಷ್ಟೇ ಎಂದು ಹೇಳುವ ಅಲಹಾಬಾದ್ ಹೈಕೋರ್ಟ್ ಆದೇಶವನ್ನು ತೀವ್ರವಾಗಿ ಖಂಡಿಸಿದ ಸುಪ್ರೀಂ ಕೋರ್ಟ್.

ನವದೆಹಲಿ: ಮಹಿಳೆಯರ ಸ್ತನಗಳನ್ನು ಹಿಡಿದು ಪೈಜಾಮಾ ಲಾಡಿ ಬಿಚ್ಚುವುದು "ಅತ್ಯಾಚಾರ ಯತ್ನವಲ್ಲ" ಎಂದು ವಿವಾದಾತ್ಮಕ ತೀರ್ಪು ನೀಡಿದ್ದ ಅಲಹಾಬಾದ್ ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್ ಬುಧವಾರ ರದ್ದುಗೊಳಿಸಿದೆ.

ಮುಖ್ಯ ನ್ಯಾಯಮೂರ್ತಿ(ಸಿಜೆಐ) ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿಗಳಾದ ಜೋಯ್ಮಲ್ಯ ಬಾಗ್ಚಿ ಮತ್ತು ಎನ್ ವಿ ಅಂಜಾರಿಯಾ ಅವರ ಪೀಠವು "ಕ್ರಿಮಿನಲ್ ನ್ಯಾಯಶಾಸ್ತ್ರದ ಸ್ಥಿರ ತತ್ವಗಳ ತಪ್ಪಾದ ಅನ್ವಯ"ದ ಕಾರಣದಿಂದಾಗಿ ಈ ಆಕ್ಷೇಪಾರ್ಹ ಆದೇಶವನ್ನು ರದ್ದುಗೊಳಿಸಲಾಗಿದೆ ಎಂದು ಹೇಳಿದೆ.

“ಲೈಂಗಿಕ ಅಪರಾಧ ಪ್ರಕರಣಗಳ ನ್ಯಾಯದಾನವು ಕೇವಲ ಕಾನೂನಿನ ಚೌಕಟ್ಟಿಗೆ ಸೀಮಿತವಾಗಿರದೆ, ಅದು ಸಂವೇದನಾಶೀಲತೆ ಮತ್ತು ಸಹಾನುಭೂತಿಯಿಂದ ಕೂಡಿರಬೇಕು” ಎಂದು ಸುಪ್ರೀಂ ಕೋರ್ಟ್, ಅಲಹಾಬಾದ್ ಹೈಕೋರ್ಟ್ ಅನ್ನು ತರಾಟೆಗೆ ತೆಗೆದುಕೊಂಡಿದೆ.

ಸ್ತನಗಳನ್ನು ಹಿಡಿದು ಪೈಜಾಮಾದ ಲಾಡಿ ಬಿಚ್ಚುವುದು ಅತ್ಯಾಚಾರ ಯತ್ನವಲ್ಲ. ಅತ್ಯಾಚಾರಕ್ಕೆ ಸಿದ್ಧತೆ ಅಷ್ಟೇ ಎಂದು ಹೇಳುವ ಅಲಹಾಬಾದ್ ಹೈಕೋರ್ಟ್ ಆದೇಶವನ್ನು ತೀವ್ರವಾಗಿ ಖಂಡಿಸಿದ ಸುಪ್ರೀಂ ಕೋರ್ಟ್, ಇದು ‘ಅಮಾನವೀಯ ಮತ್ತು ಸಂವೇದನಾ ರಹಿತ’ ತೀರ್ಪು ಎಂದು ಟೀಕಿಸಿದೆ.

ಸ್ತನಗಳನ್ನು ಹಿಡಿಯುವುದು ಮತ್ತು ಪೈಜಾಮದ ಲಾಡಿ ಬಿಚ್ಚುವುದು ಅತ್ಯಾಚಾರದ ಪ್ರಯತ್ನವೇ ಹೊರತು, ಕೇವಲ ಸಿದ್ಧತೆಯಲ್ಲ ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ.

ಫೆಬ್ರವರಿ 10ರಂದು ನೀಡಿದ ತನ್ನ ತೀರ್ಪಿನಲ್ಲಿ ಸುಪ್ರೀಂ ಕೋರ್ಟ್ ಪೀಠವು, “ನ್ಯಾಯಾಲಯಗಳು ದೂರುದಾರರ ಅಥವಾ ಸಂತ್ರಸ್ತರ ದುರ್ಬಲತೆ ಮತ್ತು ಸೂಕ್ಷ್ಮತೆಗಳ ಬಗ್ಗೆ ‘ಅಸಡ್ಡೆ’ ತೋರಿದರೆ ಅಥವಾ ಅವುಗಳನ್ನು ಪರಿಗಣನೆಗೆ ತೆಗೆದುಕೊಳ್ಳದಿದ್ದರೆ, ಅಂತಹ ಸಂದರ್ಭಗಳಲ್ಲಿ ‘ಸಂಪೂರ್ಣ ನ್ಯಾಯ’ ನೀಡಲು ಸಾಧ್ಯವಿಲ್ಲ ಎಂದು ಎಚ್ಚರಿಸಿದೆ.

ಹೈಕೋರ್ಟ್ ತೀರ್ಪನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್, ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿ ಇಬ್ಬರು ಆರೋಪಿಗಳ ವಿರುದ್ಧ ಅತ್ಯಾಚಾರಕ್ಕೆ ಯತ್ನಿಸಿದ ಮೂಲ ಕಠಿಣ ಆರೋಪವನ್ನು ಮರುಸ್ಥಾಪಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ಭೀಕರ ಅಪಘಾತ: ನಿಯಂತ್ರಣ ತಪ್ಪಿ ಡಿವೈಡರ್‌ ದಾಟಿ SUVಗೆ ಕಾರು ಡಿಕ್ಕಿ, ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸೇರಿ 6 ಮಂದಿಗೆ ಗಾಯ..!

ರಾಹುಲ್ ಗಾಂಧಿ ನಿಲುವಿಗೆ ಉಲ್ಟಾ ಹೊಡೆದರೇ ಡಿಕೆಶಿ? CM ನಿವಾಸಕ್ಕೆ ಅದಾನಿ ಭೇಟಿ; ಕೈ ಪಾಳಯದಲ್ಲಿ ಭುಗಿಲೆದ್ದ ಅಸಮಾಧಾನ..!

KPSC ಹಗರಣ: IAS ಅಧಿಕಾರಿ ಗಂಗ್ವಾರ್ ಮನೆ ಮೇಲೆ ED ದಾಳಿ; ಗೇಟ್ ಲಾಕ್ ಮಾಡಿ ಸೆಕ್ಯೂರಿಟಿ ಹೈಡ್ರಾಮಾ, ಕೀ ಮೇಕರ್ ಕರೆಯಿಸಿ ಬಾಗಿಲು ಮುರಿದ ಅಧಿಕಾರಿಗಳು..!

Operation Sindoorನಲ್ಲಿ ಧ್ವಂಸವಾಗಿದ್ದ ಜೈಶ್ ನೆಲೆ ಮರುನಿರ್ಮಾಣ! ಪಾಕ್‌ ಸರ್ಕಾರದಿಂದ 25 ಕೋಟಿ ನೆರವು!

Onion Price: ದಿಢೀರ್ ಈರುಳ್ಳಿ ಬೆಲೆ ಏರಿಕೆ; ಸೆಪ್ಟೆಂಬರ್-ಅಕ್ಟೋಬರ್‌ನಲ್ಲಿ ಮತ್ತಷ್ಟು ದುಬಾರಿ ಸಾಧ್ಯತೆ, ದರ ಏರಿಕೆಗೆ ಕಾರಣವೇನು?