ಉದ್ರಿಕ್ತ ಗುಂಪನ್ನು ಚದುರಿಸಲು ಅಶ್ರುವಾಯು ಪ್ರಯೋಗಿಸಿದ ಪೊಲೀಸರು ಸಾಂದರ್ಭಿಕ ಚಿತ್ರ 
ದೇಶ

ಪಂಜಾಬ್: ಬಟಿಂಡಾದಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ, ಅಶ್ರುವಾಯು ಪ್ರಯೋಗ!

ಗುಂಪನ್ನು ಚದುರಿಸಲು ಪೊಲೀಸರು ಅಶ್ರುವಾಯು ಪ್ರಯೋಗಿಸಿದ್ದು, ಹಲವು ರೈತರು ಗಾಯಗೊಂಡರು. ಪೊಲೀಸರು ಅಶ್ರುವಾಯು ಪ್ರಯೋಗಕ್ಕೂ ಮುನ್ನಾ ಎರಡೂ ಕಡೆಯವರು ಪರಸ್ಪರ ಕಲ್ಲುಗಳು ಮತ್ತು ಇಟ್ಟಿಗೆಗಳನ್ನು ಹೊಡೆದಿದ್ದಾರೆ ಎಂದು ವರದಿಯಾಗಿದೆ.

ಚಂಡೀಗಢ: ಬಟಿಂಡಾದ ಜಿಯೋಂಡ್‌ನಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ. ಜಿಲ್ಲಾ ಆಡಳಿತ ಸಂಕೀರ್ಣಕ್ಕೆ (DCA) ರೈತರು ಮೆರವಣಿಗೆ ನಡೆಸಲು ಯತ್ನಿಸಿದಾಗ ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವೆ ಘರ್ಷಣೆ ಸಂಭವಿಸಿದೆ.

ಗುಂಪನ್ನು ಚದುರಿಸಲು ಪೊಲೀಸರು ಅಶ್ರುವಾಯು ಪ್ರಯೋಗಿಸಿದ್ದು, ಹಲವು ರೈತರು ಗಾಯಗೊಂಡರು. ಪೊಲೀಸರು ಅಶ್ರುವಾಯು ಪ್ರಯೋಗಕ್ಕೂ ಮುನ್ನಾ ಎರಡೂ ಕಡೆಯವರು ಪರಸ್ಪರ ಕಲ್ಲುಗಳು ಮತ್ತು ಇಟ್ಟಿಗೆಗಳನ್ನು ಹೊಡೆದಿದ್ದಾರೆ ಎಂದು ವರದಿಯಾಗಿದೆ.

ನಗರಕ್ಕೆ ಬರುವ ಎಲ್ಲ ಪ್ರಮುಖ ರಸ್ತೆಗಳಲ್ಲಿ ಪೊಲೀಸರು ನಾಕಾಬಂಧಿ ಹಾಕಿದ್ದರು. ಮಂಗಳವಾರ ರಾತ್ರಿ ಕಾರ್ಯಾಚರಣೆ ಆರಂಭವಾಗುತ್ತಿದ್ದಂತೆಯೇ ಹಲವಾರು ರೈತರನ್ನು ವಿವಿಧ ಸ್ಥಳಗಳಲ್ಲಿ ಬಂಧಿಸಲಾಗಿದೆ ಅಥವಾ ಗೃಹಬಂಧನದಲ್ಲಿ ಇರಿಸಲಾಗಿದೆ ಎಂದು ವರದಿಯಾಗಿದೆ. ಮಹಿಳೆಯರು ಸೇರಿದಂತೆ ಕೆಲವು ರೈತರನ್ನು ಜೇಂಡ್ ಗ್ರಾಮದಿಂದ ಬಂಧಿಸಲಾಯಿತು.

ಬಟಿಂಡಾ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ (SSP) ಜ್ಯೋತಿ ಯಾದವ್ ಮಾತನಾಡಿ, ಕೆಲವು ಮನೆಗಳ ಮೇಲ್ಛಾವಣಿ ಹಾಗೂ ಪೊಲೀಸ್ ಸಿಬ್ಬಂದಿ ಮೇಲೆ ಉದ್ರಿಕ್ತ ಗುಂಪು ಕಲ್ಲು ತೂರಾಟ ನಡೆಸಿದೆ. ಗುಂಪನ್ನು ಚದುರಿಸಲು ಪೊಲೀಸರು ಅಶ್ರುವಾಯು ಪ್ರಯೋಗಿಸಿದ್ದಾರೆ ಎಂದು ತಿಳಿಸಿದರು.

ಪ್ರತಿಭಟನೆ ನಡೆಸುವುದು ಪ್ರಜಾಸತ್ತಾತ್ಮಕ ಹಕ್ಕು ಎಂದು ಹೇಳಿದ ಪ್ರತಿಭಟನಾಕಾರರು, ಪ್ರತಿಭಟನೆಯ ಕರೆಗೂ ಮುನ್ನ ಪೊಲೀಸರು ರೈತ ಮುಖಂಡರ ನಿವಾಸಗಳ ಮೇಲೆ ದಾಳಿ ನಡೆಸಿ ವಶಕ್ಕೆ ಪಡೆಯುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಭಾರತೀಯ ಕಿಸಾನ್ ಯೂನಿಯನ್ (Ekta Ugrahan) ತನ್ನ ಇಬ್ಬರು ಕಾರ್ಯಕರ್ತರಾದ ಶಗನ್‌ದೀಪ್ ಸಿಂಗ್ ಜಿಯೋಂಡ್ ಮತ್ತು ಬಲದೇವ್ ಸಿಂಗ್ ಚೌಕೆ ಅವರನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿ DCA ಹೊರಗೆ ಅನಿರ್ದಿಷ್ಟಾವಧಿ ಪ್ರತಿಭಟನೆಯನ್ನು ಘೋಷಿಸಿತ್ತು.

ಕಳೆದ ವರ್ಷ ಪ್ರತಿಭಟನೆಯ ವೇಳೆ ಇಬ್ಬರನ್ನು ಬಂಧಿಸಲಾಗಿತ್ತು ಮತ್ತು ಏಪ್ರಿಲ್‌ನಿಂದ ಬಟಿಂಡಾ ಜೈಲಿನಲ್ಲಿ ಇರಿಸಲಾಗಿತ್ತು. ಭಾರೀ ಪೊಲೀಸ್ ನಿಯೋಜನೆಯ ಹೊರತಾಗಿಯೂ, ಫರೀದ್‌ಕೋಟ್ ಜಿಲ್ಲೆಯ ಜೈತೋ ಬ್ಲಾಕ್‌ನಿಂದ ಕೆಲವು ರೈತರು ಮಧ್ಯಾಹ್ನ DAC ಗೆ ತಲುಪುವಲ್ಲಿ ಯಶಸ್ವಿಯಾದರು ಆದರೆ ತಕ್ಷಣ ಅವರನ್ನು ಬಂಧಿಸಲಾಯಿತು. ಈ ಮಧ್ಯೆ ಶಗನ್‌ದೀಪ್ ಮತ್ತು ಬಲದೇವ್‌ಗೆ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Parliament special session: ಅಗ್ನಿ ಪರೀಕ್ಷೆಯಲ್ಲಿ ಮೋದಿ ಸರ್ಕಾರ, ಇಂದು ಪಾಸ್ ಆಗುತ್ತಾ ಪ್ರಮುಖ ಮಸೂದೆಗಳು?

'ಇರಾನ್ ತನ್ನ ಸಮೃದ್ಧ ಯುರೇನಿಯಂ ಸಂಗ್ರಹವನ್ನು ಹಸ್ತಾಂತರಿಸಲು ಒಪ್ಪಿಕೊಂಡಿದೆ, ಶಾಂತಿ ಒಪ್ಪಂದ ಹತ್ತಿರದಲ್ಲಿದೆ': Donald Trump

'ನನ್ನ ಸ್ನೇಹಿತ ಮೋದಿ ಜೊತೆಗೆ ಉತ್ತಮ ಮಾತುಕತೆ ನಡೆಸಿದೆ': ಡೊನಾಲ್ಡ್ ಟ್ರಂಪ್-Video

Bengaluru: ಎಲೆಕ್ಟ್ರಾನಿಕ್ ಸಿಟಿಯಲ್ಲಿ 'ಕೃತಕ ಬುದ್ಧಿಮತ್ತೆಯ ಉತ್ಕೃಷ್ಟತಾ ಕೇಂದ್ರ ಸ್ಥಾಪನೆಗೆ ಸಚಿವ ಸಂಪುಟ ಒಪ್ಪಿಗೆ- ಪ್ರಿಯಾಂಕ್ ಖರ್ಗೆ

ರಾಜ್ಯದಲ್ಲಿ ಬರಗಾಲದ ಕರಿನೆರಳು; ಆದರೆ ಸಿಎಂ- ಡಿಸಿಎಂಗೆ ಕುರ್ಚಿ ಕಿತ್ತಾಟದ ತೆವಲು! ಆರ್.ಅಶೋಕ್ ಕಿಡಿ

SCROLL FOR NEXT