ಎಲ್.ಕೆ. ಸುದೀಶ್ - ಪ್ರೇಮಲತಾ ವಿಜಯಕಾಂತ್ - ಎಂ.ಕೆ. ಸ್ಟಾಲಿನ್ 
ದೇಶ

ಡಿಎಂಕೆ ನೇತೃತ್ವದ ಜಾತ್ಯತೀತ ಪ್ರಗತಿಪರ ಮೈತ್ರಿಕೂಟ ಸೇರಿದ ಡಿಎಂಡಿಕೆ

ಡಿಎಂಡಿಕೆ ಪ್ರಧಾನ ಕಾರ್ಯದರ್ಶಿ ಪ್ರೇಮಲತಾ ವಿಜಯಕಾಂತ್ ಮತ್ತು ಪಕ್ಷದ ಖಜಾಂಚಿ ಎಲ್.ಕೆ. ಸುದೀಶ್ ಅವರು ಡಿಎಂಕೆ ಅಧ್ಯಕ್ಷರೂ ಆಗಿರುವ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರನ್ನು ಚೆನ್ನೈನ ಪಕ್ಷದ ಪ್ರಧಾನ ಕಚೇರಿಯಲ್ಲಿ ಭೇಟಿಯಾಗಿ ಎಸ್ ಪಿಎ ಮೈತ್ರಿಕೂಟ ಸೇರಿದರು.

ಚೆನ್ನೈ: ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ(ಡಿಎಂಡಿಕೆ) ಗುರುವಾರ ಅಧಿಕೃತವಾಗಿ ಡಿಎಂಕೆ ನೇತೃತ್ವದ ಜಾತ್ಯತೀತ ಪ್ರಗತಿಪರ ಮೈತ್ರಿಕೂಟ(ಎಸ್‌ಪಿಎ) ಸೇರ್ಪಡೆಯಾಗಿದೆ. ಇದರೊಂದಿಗೆ ವಾರಗಳ ರಾಜಕೀಯ ಊಹಾಪೋಹಗಳಿಗೆ ಅಂತ್ಯ ಹಾಡಿದೆ.

ಡಿಎಂಡಿಕೆ ಪ್ರಧಾನ ಕಾರ್ಯದರ್ಶಿ ಪ್ರೇಮಲತಾ ವಿಜಯಕಾಂತ್ ಮತ್ತು ಪಕ್ಷದ ಖಜಾಂಚಿ ಎಲ್.ಕೆ. ಸುದೀಶ್ ಅವರು ದ್ರಾವಿಡ ಮುನ್ನೇತ್ರ ಕಳಗಂ(ಡಿಎಂಕೆ) ಅಧ್ಯಕ್ಷರೂ ಆಗಿರುವ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರನ್ನು ಚೆನ್ನೈನ ಪಕ್ಷದ ಪ್ರಧಾನ ಕಚೇರಿ ಅಣ್ಣಾ ಅರಿವಲಯಂನಲ್ಲಿ ಭೇಟಿಯಾಗಿ ಎಸ್ ಪಿಎ ಮೈತ್ರಿಕೂಟ ಸೇರಿದರು.

ಉಪಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್ ಮತ್ತು ಡಿಎಂಕೆ ಉಪ ಪ್ರಧಾನ ಕಾರ್ಯದರ್ಶಿ ಕನಿಮೋಳಿ ಕರುಣಾನಿಧಿ ಸೇರಿದಂತೆ ಎರಡೂ ಪಕ್ಷಗಳ ಹಿರಿಯ ನಾಯಕರು ಸಭೆಯಲ್ಲಿ ಹಾಜರಿದ್ದರು.

2005 ರಲ್ಲಿ ನಟ-ರಾಜಕಾರಣಿ ವಿಜಯಕಾಂತ್ ಸ್ಥಾಪಿಸಿದ ಡಿಎಂಡಿಕೆ, ಈ ಹಿಂದೆ ಯಾವತ್ತೂ ಡಿಎಂಕೆ ಜೊತೆ ಮೈತ್ರಿ ಅಥವಾ ಹೊಂದಾಣಿಕೆ ಮಾಡಿಕೊಂಡಿಲ್ಲ. ಡಿಎಂಡಿಕೆ, ಡಿಎಂಕೆ ಜೊತೆ ಕೈಜೋಡಿಸಿರುವುದು ಇದೇ ಮೊದಲು.

ಈ ಕುರಿತು "ಎಕ್ಸ್" ನಲ್ಲಿ ಪೋಸ್ಟ್ ಮಾಡಿರುವ ಸಿಎಂ ಸ್ಟಾಲಿನ್, ಡಿಎಂಡಿಕೆಯನ್ನು ಮೈತ್ರಿಕೂಟಕ್ಕೆ ಸ್ವಾಗತಿಸಿದ್ದಾರೆ. "ಸದ್ಭಾವನೆಯ ಬಂಧವು ತಮಿಳುನಾಡಿನ ಪ್ರಗತಿ ಮತ್ತು ಸಮೃದ್ಧಿಗೆ ಕೊಡುಗೆ ನೀಡುವುದನ್ನು ಮುಂದುವರಿಸುತ್ತದೆ" ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Asian Games 2026: ಫೈನಲ್ ನಲ್ಲಿ ಪಾಕಿಸ್ತಾನ ವಿರುದ್ಧ ಭಾರತಕ್ಕೆ ರೋಚಕ ಜಯ, ಮತ್ತೊಂದು ಚಿನ್ನದ ಪದಕ

ಮೈಸೂರು: ಕುಸಿದು ಬಿದ್ದ ದೀಪಾಲಂಕಾರದ ಬೃಹತ್ ಕಟೌಟ್; ವಿದ್ಯಾರ್ಥಿಗಳು ಪಾರು, ದಸರಾ ಆರಂಭದಲ್ಲೇ ತಪ್ಪಿದ ದೊಡ್ಡ ದುರಂತ!

'ಕಮಾಲ್ ಕರ್ ದಿಯಾ ಪೈಲಟ್ ಜಿ, ನಿಮ್ಮ ಧೈರ್ಯಕ್ಕೆ ನಮ್ಮ ಸೆಲ್ಯೂಟ್': ಕ್ಯಾಪ್ಟನ್ ಸ್ಮಿತ್ ಮಚ್ಚರ್'ರನ್ನು ಹಾಡಿ ಹೊಗಳಿದ ಸಲ್ಮಾನ್ ಖಾನ್!

Asian Games 2026: ಇತಿಹಾಸ ಬರೆದ ಮೈಸೂರಿನ ಪ್ರಣವಿ ಅರಸ್; ಚಿನ್ನ ಗೆದ್ದ ಮೊದಲ ಭಾರತೀಯ ಮಹಿಳಾ ಗಾಲ್ಫರ್

Dimple Queen: ಹುಟ್ಟುಹಬ್ಬದ ಸಂಭ್ರಮದಲ್ಲಿ ರಚಿತಾ ರಾಮ್ ಕೆನ್ನೆ ಗಿಂಡಿದ ಅಭಿಮಾನಿ! Video ವೈರಲ್