ಮಾಣಿಕ್ ಗುಪ್ತಾ 
ದೇಶ

ಕ್ರಿಕೆಟ್ ಪಂದ್ಯದ ವೇಳೆ ಜೇನುನೊಣಗಳ ದಾಳಿಗೆ ಅಂಪೈರ್ ಸಾವು, 15-20 ಆಟಗಾರರಿಗೆ ಗಾಯ!

ಆಟಗಾರರು ಮತ್ತು ಪ್ರೇಕ್ಷಕರು ತಮ್ಮನ್ನು ತಾವು ರಕ್ಷಿಸಿಕೊಳ್ಳಲು ಸ್ಥಳದಿಂದ ಓಡಿದ್ದಾರೆ. ಆದರೆ, ದಾಳಿಯಲ್ಲಿ ಗುಪ್ತಾ ಗಂಭೀರವಾಗಿ ಗಾಯಗೊಂಡು ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಕಾನ್ಪುರ: ಉನ್ನಾವೊ ಜಿಲ್ಲೆಯಲ್ಲಿ ಕ್ರಿಕೆಟ್ ಪಂದ್ಯದ ವೇಳೆ ಜೇನುನೊಣಗಳ ಹಿಂಡು ದಾಳಿ ಮಾಡಿ 65 ವರ್ಷದ ಅಂಪೈರ್ ಸಾವಿಗೀಡಾಗಿದ್ದು, ಹಲವಾರು ಆಟಗಾರರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.

ಬುಧವಾರ ಸಂಜೆ ಶುಕ್ಲಗಂಜ್ ಪ್ರದೇಶದ ಸಪ್ರು ಮೈದಾನದಲ್ಲಿ ಘಟನೆ ನಡೆದಿದ್ದು, ಪಂದ್ಯವನ್ನು ಆಯೋಜಿಸಿದ್ದ ಕಾನ್ಪುರ ಕ್ರಿಕೆಟ್ ಅಸೋಸಿಯೇಷನ್‌ನ ಉನ್ನತ ಪದಾಧಿಕಾರಿಯೊಬ್ಬರು ದೃಢಪಡಿಸಿದ್ದಾರೆ.

ಪೊಲೀಸ್ ಅಧಿಕಾರಿಗಳ ಪ್ರಕಾರ, ಕಾನ್ಪುರದ ಮಾಣಿಕ್ ಗುಪ್ತಾ ಅವರು ಕ್ರಿಕೆಟ್ ಪಂದ್ಯದ ಅಂಪೈರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾಗ ಜೇನುನೊಣಗಳ ಹಿಂಡು ಇದ್ದಕ್ಕಿದ್ದಂತೆ ದಾಳಿ ಮಾಡಿದೆ. ಈ ವೇಳೆ ಆಟಗಾರರು ಮತ್ತು ಮೈದಾನದಲ್ಲಿದ್ದ ಇತರರ ಮೇಲೆ ದಾಳಿ ಮಾಡಿವೆ.

ಆಟಗಾರರು ಮತ್ತು ಪ್ರೇಕ್ಷಕರು ತಮ್ಮನ್ನು ತಾವು ರಕ್ಷಿಸಿಕೊಳ್ಳಲು ಸ್ಥಳದಿಂದ ಓಡಿದ್ದಾರೆ. ಆದರೆ, ದಾಳಿಯಲ್ಲಿ ಗುಪ್ತಾ ಗಂಭೀರವಾಗಿ ಗಾಯಗೊಂಡು ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಆರಂಭದಲ್ಲಿ ಅವರನ್ನು ಶುಕ್ಲಗಂಜ್‌ನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು ಮತ್ತು ನಂತರ ಅವರ ಸ್ಥಿತಿ ಹದಗೆಟ್ಟ ಕಾರಣ ಕಾನ್ಪುರದ ಲಾಲಾ ಲಜಪತ್ ರಾಯ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ, ಅವರು ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.

ಮತ್ತೊಬ್ಬ ಅಂಪೈರ್ ಮತ್ತು ಸುಮಾರು 15 ರಿಂದ 20 ಆಟಗಾರರಿಗೆ ಜೇನುನೊಣಗಳು ದಾಳಿ ಮಾಡಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಾನ್ಪುರ ಕ್ರಿಕೆಟ್ ಅಸೋಸಿಯೇಷನ್‌ನ ಅಧ್ಯಕ್ಷ ಎಸ್.ಎನ್. ಸಿಂಗ್, ಉನ್ನಾವೊದಲ್ಲಿ ನಡೆದ ಕ್ರಿಕೆಟ್ ಪಂದ್ಯದ ಸಮಯದಲ್ಲಿ ಜೇನುನೊಣಗಳ ದಾಳಿಯಿಂದ ಅಂಪೈರ್ ಮಾಣಿಕ್ ಗುಪ್ತಾ ಸಾವಿಗೀಡಾಗಿದ್ದಾರೆ ಎಂದು ಸುದ್ದಿಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.

ಗುಪ್ತಾ ಅವರನ್ನು ಆಸ್ಪತ್ರೆಗೆ ಸಾಗಿಸುವಾಗ, ಜೇನುನೊಣಗಳು ಇನ್ನೂ ಅವರ ಮುಖ ಮತ್ತು ದೇಹಕ್ಕೆ ಅಂಟಿಕೊಂಡಿದ್ದವು. ಇದು ದಾಳಿಯ ತೀವ್ರತೆಯನ್ನು ಒತ್ತಿಹೇಳುತ್ತದೆ ಎಂದು ಸಿಂಗ್ ಹೇಳಿದರು.

ಸಂಘದ ಪರವಾಗಿ ಹೃತ್ಪೂರ್ವಕ ಸಂತಾಪ ವ್ಯಕ್ತಪಡಿಸಿದ ಅವರು, ಈ ದುಃಖದ ಸಮಯದಲ್ಲಿ ದುಃಖಿತ ಕುಟುಂಬದೊಂದಿಗೆ ದೃಢವಾಗಿ ನಿಲ್ಲುವುದಾಗಿ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

NEET: ಭೌತಶಾಸ್ತ್ರ ಪ್ರಶ್ನೆಪತ್ರಿಕೆ ಸೋರಿಕೆ ಆರೋಪ, ಪುಣೆ ಉಪನ್ಯಾಸಕಿ ಬಂಧನ

IPL 2026: SRH ವಿರುದ್ಧ RCB ಗೆ ಸೋಲು, ಸೋತರೂ ಅಗ್ರ ಸ್ಥಾನ ಅಬಾಧಿತ! ಕ್ವಾಲಿಫೈಯರ್ ಗೆ ಲಗ್ಗೆ

IPL 2026: SRH ಕನಸಿಗೆ ಕೊಳ್ಳಿ ಇಟ್ಟ RCB, ಗೆಲುವಿನ ಹೊರತಾಗಿಯೂ Eliminater ಅನಿವಾರ್ಯ!

NEET UG ಪ್ರಶ್ನೆಪತ್ರಿಕೆ ಸೋರಿಕೆ: ಈ ಬಾರಿ ಶೇ.100ರಷ್ಟು ದೋಷರಹಿತ ಮರು ಪರೀಕ್ಷೆ; ಕಠಿಣ ಕ್ರಮ ಎಂದ Dharmendra Pradhan

Rudraprayag ಭೀಕರ ಭೂಕುಸಿತ: ಸ್ಥಳದಲ್ಲೇ ಓರ್ವನ ಸಾವು, ಇಬ್ಬರು ಗಂಭೀರ, Video

SCROLL FOR NEXT