ಸಾಂದರ್ಭಿಕ ಚಿತ್ರ online desk
ದೇಶ

ಗುರುಗ್ರಾಮ: ನೆರೆಮನೆಯವನಿಂದ 3 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ

ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ವಿಚಾರಣೆಯ ಸಮಯದಲ್ಲಿ ಹೀನ ಕೃತ್ಯ ಎಸಗಿರುವುದನ್ನು ಒಪ್ಪಿಕೊಂಡಿದ್ದಾನೆ ಎಂದು ಅವರು ಹೇಳಿದ್ದಾರೆ.

ಗುರುಗ್ರಾಮ: ಗುರುಗ್ರಾಮದ ಸೆಕ್ಟರ್ 37 ರಲ್ಲಿ ನೆರೆಮನೆಯ ಕಾಮುಕನೊಬ್ಬ ಮೂರು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.

ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ವಿಚಾರಣೆಯ ಸಮಯದಲ್ಲಿ ಹೀನ ಕೃತ್ಯ ಎಸಗಿರುವುದನ್ನು ಒಪ್ಪಿಕೊಂಡಿದ್ದಾನೆ ಎಂದು ಅವರು ಹೇಳಿದ್ದಾರೆ.

ಗುರುವಾರ ರಾತ್ರಿ, ಮೊಹಮ್ಮದ್‌ಪುರ್ ಝಾರ್ಸಾ ಗ್ರಾಮದಲ್ಲಿ ಮೂರು ವರ್ಷದ ಬಾಲಕಿಯೊಬ್ಬಳು ಕಾಣೆಯಾಗಿದ್ದಾಳೆ ಎಂದು ಪೊಲೀಸರಿಗೆ ದೂರು ಬಂದಿದ್ದು, ನೆರೆಹೊರೆಯಲ್ಲಿ ವಾಸಿಸುತ್ತಿದ್ದ ವ್ಯಕ್ತಿಯೊಬ್ಬ ಆಕೆಗೆ ಆಮಿಷವೊಡ್ಡಿ ಅಪಹರಿಸಿದ್ದಾನೆ ಎಂದು ಕುಟುಂಬ ಆರೋಪಿಸಿದೆ.

ಈ ಸಂಬಂಧ ಸೆಕ್ಟರ್ 37 ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿದ ಒಂದು ಗಂಟೆಯೊಳಗೆ ಪೊಲೀಸರು ಗುರುಗ್ರಾಮ್‌ನಲ್ಲಿ ಸ್ಕ್ರ್ಯಾಪ್ ಸಂಗ್ರಾಹಕನಾಗಿ ಕೆಲಸ ಮಾಡುತ್ತಿದ್ದ ಬಿಹಾರ ಮೂಲದ ಆರೋಪಿಯನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

"ವಿಚಾರಣೆಯ ಸಮಯದಲ್ಲಿ, ಗುರುವಾರ ತಡರಾತ್ರಿ, ಅಪ್ರಾಪ್ತ ಬಾಲಕಿಯನ್ನು ಸೆಕ್ಟರ್ 37ರ ನಿರ್ಜನ ಸ್ಥಳಕ್ಕೆ ಕರೆದೊಯ್ದು, ಮಗುವಿನ ಮೇಲೆ ಅತ್ಯಾಚಾರ ಮಾಡಿ, ನಂತರ ಸಾಕ್ಷ್ಯಗಳನ್ನು ನಾಶಮಾಡಲು ಕತ್ತು ಹಿಸುಕಿ ಕೊಂದಿದ್ದಾನೆ. ಈ ಕುರಿತು ಹೆಚ್ಚಿನ ವಿಚಾರಣೆ ನಡೆಯುತ್ತಿದೆ" ಎಂದು ಗುರುಗ್ರಾಮ್ ಪೊಲೀಸರ ವಕ್ತಾರರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದಾವಣಗೆರೆಯಲ್ಲಿ ಕಾಂಗ್ರೆಸ್ ಬೆನ್ನಿಗೆ ಚೂರಿ: ಸುರ್ಜೇವಾಲ ಕೈಸೇರಿದ ರಿಪೋರ್ಟ್; MLC ಅಬ್ದುಲ್ ಜಬ್ಬಾರ್ ರಾಜಿನಾಮೆ!

ದಾವಣಗೆರೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ: ಸಿಎಂ ರಾಜಕೀಯ ಕಾರ್ಯದರ್ಶಿ ನಸೀರ್ ತಲೆದಂಡ, ಜಮೀರ್ ಸಚಿವ ಸ್ಥಾನಕ್ಕೂ ಕುತ್ತು?

5 ವರ್ಷದ ಬಾಲಕನ ಜೊತೆ ಅಸ್ವಾಭಾವಿಕ s*x; ವಸತಿ ಶಾಲೆ ವಿದ್ಯಾರ್ಥಿಯ ಗಂಟಲು ಸೀಳಿದ ಗಾರ್ಡ್!

ಮಗ ವಿದೇಶದಲ್ಲಿ ಓದುತ್ತಿದ್ದಾನೆ, ಹಲ್ಲೆ ಕೇಸ್ ಕೈಬಿಡಿ: ಪುತ್ರನ ಭವಿಷ್ಯಕ್ಕಾಗಿ ಪ್ರಕರಣ ರದ್ದು ಕೋರಿದ ಅನಂತಕುಮಾರ್ ಹೆಗಡೆ!

'ವೃದ್ಧ ಸಮಾಜದತ್ತ ಶ್ರೀಲಂಕಾ': ಅತ್ಯಂತ ವೇಗವಾಗಿ ಹೆಚ್ಚುತ್ತಿದೆ ಹಿರಿಯರ ಸಂಖ್ಯೆ; 40 ವರ್ಷಗಳಲ್ಲಿ ಮೂರು ಪಟ್ಟು ಜಾಸ್ತಿ!

SCROLL FOR NEXT