ಸಾಂದರ್ಭಿಕ ಚಿತ್ರ 
ದೇಶ

ಮಹಾರಾಷ್ಟ್ರದಲ್ಲಿ ಮುಸ್ಲಿಂ ಮೀಸಲಾತಿ ರದ್ದತಿ ಪ್ರಶ್ನಿಸಿ ಬಾಂಬೆ ಹೈಕೋರ್ಟ್‌ಗೆ ಅರ್ಜಿ

"ಪ್ರತಿವಾದಿ(ಮಹಾರಾಷ್ಟ್ರ ಸರ್ಕಾರ) ಅಲ್ಪಸಂಖ್ಯಾತ ಸಮುದಾಯದ ವಿಚಾರದಲ್ಲಿ ಜನಾಂಗೀಯ ತಾರತಮ್ಯ ಮಾಡುತ್ತಿದೆ. ಇದು ಸಂವಿಧಾನದಲ್ಲಿ ಪ್ರತಿಪಾದಿಸಲಾದ ಮೂಲಭೂತ ಹಕ್ಕುಗಳ ಉಲ್ಲಂಘನೆಯಾಗಿದೆ" ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.

ಮುಂಬೈ: ಮುಸ್ಲಿಂ ಸಮುದಾಯಕ್ಕೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ನೀಡಲಾಗಿದ್ದ ಶೇಕಡಾ 5 ರಷ್ಟು ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಬಾಂಬೆ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗಿದ್ದು, ಈ ಕ್ರಮವನ್ನು "ಜನಾಂಗೀಯ ತಾರತಮ್ಯ" ಎಂದು ಟೀಕಿಸಲಾಗಿದೆ.

ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ಮುಸ್ಲಿಂ ಮೀಸಲಾತಿ ರದ್ದತಿ ಪ್ರಶ್ನಿಸಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದು, ಮಹಾರಾಷ್ಟ್ರದ ಸಾಮಾಜಿಕ ನ್ಯಾಯ ಮತ್ತು ವಿಶೇಷ ನೆರವು ಇಲಾಖೆಯು ಫೆಬ್ರವರಿ 17 ರಂದು ಹೊರಡಿಸಿದ ಸರ್ಕಾರದ ಅಧಿಸೂಚನೆ ಸಂವಿಧಾನ ಬಾಹಿರ ಮತ್ತು ಮುಸ್ಲಿಂ ಸಮುದಾಯದ ಹಿತಾಸಕ್ತಿಗಳಿಗೆ ವಿರುದ್ಧವಾಗಿದೆ ಎಂದು ಹೇಳಿದ್ದಾರೆ.

"ಪ್ರತಿವಾದಿ(ಮಹಾರಾಷ್ಟ್ರ ಸರ್ಕಾರ) ಅಲ್ಪಸಂಖ್ಯಾತ ಸಮುದಾಯದ ವಿಚಾರದಲ್ಲಿ ಜನಾಂಗೀಯ ತಾರತಮ್ಯ ಮಾಡುತ್ತಿದೆ. ಇದು ಸಂವಿಧಾನದಲ್ಲಿ ಪ್ರತಿಪಾದಿಸಲಾದ ಮೂಲಭೂತ ಹಕ್ಕುಗಳ ಉಲ್ಲಂಘನೆಯಾಗಿದೆ" ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.

ಅರ್ಜಿಯನ್ನು ಹೈಕೋರ್ಟ್ ಮುಂದಿನ ವಾರ ವಿಚಾರಣೆಗೆ ಕೈಗೆತ್ತಿಕೊಳ್ಳುವ ಸಾಧ್ಯತೆಯಿದೆ.

ಫೆಬ್ರವರಿ 17 ರಂದು ಸರ್ಕಾರ ಹೊರಡಿಸಿದ ಅಧಿಸೂಚನೆಯನ್ನು ರದ್ದುಗೊಳಿಸಲು ಮತ್ತು ಮಧ್ಯಂತರ ಆದೇಶದ ಮೂಲಕ ಅರ್ಜಿಯ ವಿಚಾರಣೆಯವರೆಗೆ ತಡೆ ನೀಡುವಂತೆ ಹೈಕೋರ್ಟ್ ಗೆ ಕೋರಲಾಗಿದೆ ಎಂದು ಅರ್ಜಿದಾರರ ಪರ ವಕೀಲ ನಿತಿನ್ ಸತ್ಪುಟೆ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪಕ್ಷದ ಹಿತಕ್ಕಾಗಿ ನಾಗೇಂದ್ರ ಯಾವುದೇ ತ್ಯಾಗಕ್ಕೂ ಸಿದ್ಧ, ಆದ್ರೆ...: ಹೈಕಮಾಂಡ್ ಭೇಟಿ ಬಳಿಕ CM ಡಿಕೆ ಶಿವಕುಮಾರ್

Nepal Floods: ನೇಪಾಳ ಭೀಕರ ಪ್ರವಾಹಕ್ಕೆ ಚೀನಾದ ನಿರ್ಮಾಣ ಕಾರ್ಯವೇ ಕಾರಣ?

‘ನೇಪಾಳಿಗರೇ, ನೀವು ಒಂಟಿಯಲ್ಲ, ನಾನು ನಿಮ್ಮೊಂದಿಗೆ ನಿಲ್ಲುತ್ತೇನೆ’: ಪ್ರವಾಹ ಪೀಡಿತ ಸಂತ್ರಸ್ತರಿಗೆ ನೆರವಿನ ಹಸ್ತ ಚಾಚಿದ ಬಾಲಿವುಡ್ ನಟ ಸೋನು ಸೂದ್!

'ಸಿಂಹ ಸುಮ್ಮನೆ ಕುಳಿತಿದೆ ಅಂದ್ರೆ ಸುಸ್ತಾಗಿದೆ ಅಂತಲ್ಲ, ಮುಂದಿನ ಬೇಟೆಗೆ ರೆಡಿ ಆಗ್ತಿದೆ ಎಂದರ್ಥ': ಕಿಚ್ಚ ಸುದೀಪ್ ದಿಢೀರ್ ಪೋಸ್ಟ್; ಇಲ್ಲಿದೆ ಕಾರಣ...

ಕಾನ್ಪುರದಲ್ಲಿ ತರಬೇತಿ ವಿಮಾನ ಪತನ: ಕರ್ನಾಟಕದ ಪೈಲಟ್‌ ಅಭಿಷೇಕ್​ ಸೇರಿ ಇಬ್ಬರು ಸಾವು; Video