ದೇಶ

ಅಸ್ಸಾಂನ ಮಾಜಿ ಕಾಂಗ್ರೆಸ್ ಅಧ್ಯಕ್ಷ ಭೂಪೇನ್ ಬೋರಾ ಬಿಜೆಪಿ ಸೇರ್ಪಡೆ

ಫೆಬ್ರವರಿ 16ರಂದು ಬೋರಾ ರಾಜೀನಾಮೆ ನೀಡಿದ್ದು, ಕಾಂಗ್ರೆಸ್ ಹೈಕಮಾಂಡ್ ರಾಜೀನಾಮೆಯನ್ನು ಸ್ವೀಕರಿಸಿರಲಿಲ್ಲ. ಹಿರಿಯ ನಾಯಕರು ಬೋರಾ ನಿವಾಸಕ್ಕೆ ಧಾವಿಸಿದ್ದರು. ರಾಹುಲ್ ಗಾಂಧಿ ಕೂಡಾ ಮಾತನಾಡಿದ್ದರು ಎಂದು ವರದಿಯಾಗಿತ್ತು.

ಅಸ್ಸಾಂ ಕಾಂಗ್ರೆಸ್‌ನ ಮಾಜಿ ಮುಖ್ಯಸ್ಥ ಭೂಪೇನ್ ಕುಮಾರ್ ಬೋರಾ ಭಾನುವಾರ ಆಡಳಿತಾರೂಢ ಬಿಜೆಪಿಗೆ ಸೇರ್ಪಡೆಗೊಂಡಿದ್ದು, ಸದ್ಯ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.

ಅಸ್ಸಾಂ ಬಿಜೆಪಿ ಪ್ರಧಾನ ಕಚೇರಿ ವಾಜಪೇಯಿ ಭವನದಲ್ಲಿ ನಡೆದ ಸಮಾರಂಭದಲ್ಲಿ ಬೋರಾ ಅಸ್ಸಾಂ ಬಿಜೆಪಿ ರಾಜ್ಯಧ್ಯಕ್ಷ ದಿಲೀಪ್ ಸೈಕಿಯಾ ಅವರ ಸಮ್ಮುಖದಲ್ಲಿ ಸೇರ್ಪಡೆಗೊಂಡಿದ್ದಾರೆ. ಮಾಜಿ ಕಾಂಗ್ರೆಸ್ ಕಾರ್ಯಕರ್ತ ಸಂಜು ಬೋರಾ ಕೂಡ ಈ ಸಂದರ್ಭದಲ್ಲೇ ಬಿಜೆಪಿ ಸೇರಿದ್ದಾರೆ.

ಫೆಬ್ರವರಿ 16ರಂದು ಬೋರಾ ರಾಜೀನಾಮೆ ನೀಡಿದ್ದು, ಕಾಂಗ್ರೆಸ್ ಹೈಕಮಾಂಡ್ ರಾಜೀನಾಮೆಯನ್ನು ಸ್ವೀಕರಿಸಿರಲಿಲ್ಲ. ಹಿರಿಯ ನಾಯಕರು ಬೋರಾ ನಿವಾಸಕ್ಕೆ ಧಾವಿಸಿದ್ದರು. ರಾಹುಲ್ ಗಾಂಧಿ ಕೂಡಾ ಮಾತನಾಡಿದ್ದರು ಎಂದು ವರದಿಯಾಗಿತ್ತು.

ಇದಾದ ಬಳಿಕ ತಮ್ಮ ನಿರ್ಧಾರವನ್ನು ಮರುಪರಿಶೀಲಿಸಲು ಸಮಯ ಬೇಕು ಎಂದು ಕೇಳಿದ ಬೋರಾ ಮರುದಿನವೇ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ನಿವಾಸಕ್ಕೆ ತೆರಳಿ ಫೆಬ್ರವರಿ 22ರಂದು ಬಿಜೆಪಿಗೆ ಸೇರುವುದಾಗಿ ಘೋಷಿಸಿದ್ದರು.

126 ಸದಸ್ಯ ಬಲದ ಅಸ್ಸಾಂ ವಿಧಾನಸಭೆಯಲ್ಲಿ ಮಾರ್ಚ್-ಏಪ್ರಿಲ್‌ನಲ್ಲಿ ಚುನಾವಣೆ ನಡೆಯಲಿದ್ದು, ಈ ನಡುವೆ ಕಾಂಗ್ರೆಸ್ ನಾಯಕ ಬಿಜೆಪಿ ಸೇರಿರುವುದು ತೀವ್ರ ರಾಜಕೀಯ ಚರ್ಚೆಗೆ ಎಡೆಮಾಡಿಕೊಟ್ಟಿದೆ.

ಈ ವೇಳೆ ಬೋರಾ ವಿರುದ್ಧ ಇರುವ ಕೋಲ್ ಟ್ರೇಡ್ (ಕಲ್ಲಿದ್ದಲು ವ್ಯಾಪಾರ) ಹಗರಣದ ಆರೋಪವೂ ಮುನ್ನೆಲೆಗೆ ಬರುತ್ತಿದೆ. 2025ರ ಏಪ್ರಿಲ್‌ನಲ್ಲಿ ಆಡಿಯೋ ಕ್ಲಿಪ್ ಒಂದು ಹರಿದಾಡಿತ್ತು. ಅದರಲ್ಲಿ ಬೋರಾ ಅವರ ಆಪ್ತನೆನ್ನಲಾದ ವ್ಯಕ್ತಿ ಕಲ್ಲಿದ್ದಲು ವ್ಯಾಪಾರಿ ಬಳಿ ಹಣಕ್ಕೆ ಬೇಡಿಕೆ ಇಟ್ಟಿರುವುದು ತಿಳಿದುಬಂದಿತ್ತು. ಈ ಆರೋಪಗಳನ್ನು ಭೂಪೇನ್ ಬೋರಾ ಸಂಪೂರ್ಣವಾಗಿ ನಿರಾಕರಿಸಿದ್ದು ಅವರೇ ಹತಿಗಾಂವ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾಗ್ನಿಜಂಟ್, ಇನ್ಫೋಸಿಸ್, ಟಿಸಿಎಸ್, ವಿಪ್ರೋ ಎಚ್‌ಸಿಎಲ್ ಗೆ ಅಮೆರಿಕ ಶಾಕ್: ಗ್ರೀನ್ ಕಾರ್ಡ್ ಕಾರ್ಯಕ್ರಮದಿಂದ ಅಮಾನತು!

ರಿಯಾದ್ ವಿಮಾನ ನಿಲ್ದಾಣದ ಮೇಲೆ ದಾಳಿ: ರಿಯಾದ್ ಗೆ ತೆರಳಬೇಕಿದ್ದ ಭಾರತೀಯ ವಿಮಾನಗಳು ರದ್ದು

ರಾಜ್‌ಘಟ್‌ನಲ್ಲಿ 'ಇಂಡಿಯಾ' ನಾಯಕರಿಂದ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ 'ವೋಟ್ ಚೋರಿ' ಹೋರಾಟ ಮುಂದುವರಿಸಲು ಪ್ರತಿಜ್ಞೆ!

ಅಂಬಾನಿ ಭಾರತದ ನಿಜವಾದ ಬಾಸ್?: ಭಾರತದಲ್ಲಿ ಸ್ಟಾರ್ ಲಿಂಕ್ ಸೇವೆ ಆರಂಭ ವಿಳಂಬಕ್ಕೆ ಎಲಾನ್ ಮಸ್ಕ್ ಹತಾಶೆ!

SIR ಕಾನೂನುಬದ್ಧ: ಪ್ರತಿಪಕ್ಷಗಳ ಪ್ರತಿಭಟನೆ ನಡುವೆ CEC ಜ್ಞಾನೇಶ್ ಬೆಂಬಲಕ್ಕೆ ನಿಂತ 42 ನಿವೃತ್ತ ನ್ಯಾಯಾಧೀಶರು!