ಕೆನಡಾ ಪ್ರಧಾನಿ ಮಾರ್ಕ್‌ ಕಾರ್ನಿ 
ದೇಶ

ಫೆಬ್ರವರಿ 26 ರಂದು ಭಾರತಕ್ಕೆ ಕೆನಡಾ ಪ್ರಧಾನಿ ಕಾರ್ನಿ ಭೇಟಿ; ಮೋದಿ ಜತೆ ದ್ವಿಪಕ್ಷೀಯ ಮಾತುಕತೆ

ಮಾರ್ಕ್ ಕಾರ್ನಿ ಅವರು ಭಾರತ ಭೇಟಿಯ ಸಮಯದಲ್ಲಿ ವ್ಯಾಪಾರ, ಇಂಧನ, ತಂತ್ರಜ್ಞಾನ ಮತ್ತು ರಕ್ಷಣಾ ವ್ಯವಹಾರಗಳ ಮೇಲೆ ಗಮನ ಹರಿಸಲಾಗುವುದು ಎಂದು ಕೆನಡಾ ಸರ್ಕಾರದ ಪ್ರಕಟಣೆ ತಿಳಿಸಿದೆ.

ನವದೆಹಲಿ: ಕೆನಡಾ ಪ್ರಧಾನಿ ಮಾರ್ಕ್ ಕಾರ್ನಿ ಅವರು ಫೆಬ್ರವರಿ 26 ರಿಂದ ಮಾರ್ಚ್ 7 ರವರೆಗೆ ಭಾರತ, ಆಸ್ಟ್ರೇಲಿಯಾ, ಜಪಾನ್ ಮತ್ತು ಜಪಾನ್‌ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ಸೋಮವಾರ ಕಾರ್ನಿ ಅವರ ಕಚೇರಿಯ ಅಧಿಕೃತ ಪ್ರಕಟಣೆ ತಿಳಿಸಿದೆ.

ಮಾರ್ಕ್ ಕಾರ್ನಿ ಅವರು ಭಾರತ ಭೇಟಿಯ ಸಮಯದಲ್ಲಿ ವ್ಯಾಪಾರ, ಇಂಧನ, ತಂತ್ರಜ್ಞಾನ ಮತ್ತು ರಕ್ಷಣಾ ವ್ಯವಹಾರಗಳ ಮೇಲೆ ಗಮನ ಹರಿಸಲಾಗುವುದು ಎಂದು ಕೆನಡಾ ಸರ್ಕಾರದ ಪ್ರಕಟಣೆ ತಿಳಿಸಿದೆ.

"ಪ್ರಧಾನಿ ಕಾರ್ನಿ ಮೊದಲು ಮುಂಬೈ, ನಂತರ ನವದೆಹಲಿ ಭೇಟಿ ನೀಡಲಿದ್ದಾರೆ. ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ, ಉಭಯ ನಾಯಕರು ಕೆನಡಾ-ಭಾರತ ಸಂಬಂಧವನ್ನು ಉನ್ನತೀಕರಿಸುವ ಮತ್ತು ವಿಸ್ತರಿಸುವತ್ತ ಗಮನಹರಿಸಲಿದ್ದಾರೆ. ವ್ಯಾಪಾರ, ಇಂಧನ, ತಂತ್ರಜ್ಞಾನ, ಕೃತಕ ಬುದ್ಧಿಮತ್ತೆ(AI) ಮತ್ತು ಪ್ರಮುಖ ಖನಿಜಗಳಿಗೆ ಸಂಬಂಧಿಸಿದಂತೆ ಹಲವು ನಿರ್ಣಾಯಕ ಒಪ್ಪಂದಗಳಿಗೆ ಸಹಿ ಹಾಕುವ ನಿರೀಕ್ಷೆಯಿದೆ.

ಜಸ್ಟಿನ್ ಟ್ರುಡೊ ನಂತರ ಕೆನಡಾ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಕಾರ್ನಿ ಅವರು ಭಾರತಕ್ಕೆ ಮೊದಲ ಬಾರಿ ಭೇಟಿ ನೀಡುತ್ತಿದ್ದಾರೆ.

ಮಾಜಿ ಪ್ರಧಾನಿ ಜಸ್ಟಿನ್ ಟ್ರುಡೊ ಅವರ ಅವಧಿಯಲ್ಲಿ ಹದಗೆಟ್ಟಿದ್ದ ಭಾರತ-ಕೆನಡಾ ಸಂಬಂಧವನ್ನು ಮರುರೂಪಿಸಲು ಮಾರ್ಕ್ ಕಾರ್ನಿ ಮುಂದಾಗಿದ್ದಾರೆ. 2023ರಲ್ಲಿ ಸಿಖ್ ಪ್ರತ್ಯೇಕತಾವಾದಿ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯಲ್ಲಿ ಭಾರತ ಸರ್ಕಾರದ ಕೈವಾಡವಿದೆ ಎಂದು ಟ್ರುಡೊ ಆರೋಪಿಸಿದ್ದರು. ಆದರೆ ಭಾರತ ಇದನ್ನು ತಳ್ಳಿಹಾಕಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮೆ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್