ಇರಾನ್ ಸರ್ಕಾರದ ವಿರುದ್ಧದ ಪ್ರತಿಭಟನೆ ಚಿತ್ರ 
ದೇಶ

ಯಾವುದೇ ಕ್ಷಣದಲ್ಲಿ ಅಮೆರಿಕದಿಂದ ವೈಮಾನಿಕ ದಾಳಿ ಸಾಧ್ಯತೆ: ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಇರಾನ್ ನಲ್ಲಿರುವ ವಿದ್ಯಾರ್ಥಿಗಳು, ಯಾತ್ರಿಕರು, ವ್ಯಾಪಾರಸ್ಥರು ಮತ್ತು ಪ್ರವಾಸಿಗರು ಸೇರಿದಂತೆ ಎಲ್ಲರಿಗೂ ಸೂಚನೆ ಅನ್ವಯವಾಗಲಿದೆ.

ನವದೆಹಲಿ: ಮುಂಬರುವ ದಿನಗಳಲ್ಲಿ ಅಮೆರಿಕ ವೈಮಾನಿಕ ದಾಳಿ ಸಾಧ್ಯತೆ ಹಿನ್ನೆಲೆಯಲ್ಲಿ ಇರಾನ್‌ ತೊರೆಯುತ್ತಿರುವ ಅಲ್ಲಿರುವ ಭಾರತೀಯ ಪ್ರಜೆಗಳಿಗೆ ಸೂಚಿಸಲಾಗಿದೆ. ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ವಿಮಾನಗಳ ಮೂಲಕ ಇರಾನ್‌ನಿಂದ ಹೊರಹೋಗುವಂತೆ ಭಾರತದ ರಾಯಭಾರ ಕಚೇರಿ ತನ್ನ ನಾಗರಿಕರಿಗೆ ಮನವಿ ಮಾಡಿದೆ.

ಇರಾನ್ ನಲ್ಲಿರುವ ವಿದ್ಯಾರ್ಥಿಗಳು, ಯಾತ್ರಿಕರು, ವ್ಯಾಪಾರಸ್ಥರು ಮತ್ತು ಪ್ರವಾಸಿಗರು ಸೇರಿದಂತೆ ಎಲ್ಲರಿಗೂ ಸೂಚನೆ ಅನ್ವಯವಾಗಲಿದೆ.

14 ಜನವರಿ 2026 ರ ಸಲಹೆಯನ್ನು ಎಲ್ಲಾ ಭಾರತೀಯ ನಾಗರಿಕರು ಮತ್ತು ಭಾರತೀಯ ಮೂಲದ ವ್ಯಕ್ತಿಗಳು (PIOs) ಪಾಲಿಸಬೇಕು. ಪ್ರತಿಭಟನೆ ಅಥವಾ ಪ್ರದರ್ಶನಗಳ ಪ್ರದೇಶಗಳಿಗೆ ಅದಷ್ಟು ಹೋಗಬಾರದು. ಇರಾನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯೊಂದಿಗೆ ಸಂಪರ್ಕದಲ್ಲಿರಿ ಮತ್ತು ಯಾವುದೇ ಬೆಳವಣಿಗೆಗಳಿಗಾಗಿ ಸ್ಥಳೀಯ ಮಾಧ್ಯಮಗಳ ಮೇಲೆ ನಿಗಾವಹಿಸಿ ಎಂದು ಸಲಹೆಯಲ್ಲಿ ಪುನರುಚ್ಚರಿಸಲಾಗಿದೆ.

ಇರಾನ್‌ನಲ್ಲಿರುವ ಭಾರತೀಯರು ಪಾಸ್‌ಪೋರ್ಟ್‌ಗಳು ಮತ್ತು ಐಡಿಗಳು ಸೇರಿದಂತೆ ಅವರ ಪ್ರಯಾಣ ಮತ್ತು ವಲಸೆ ದಾಖಲೆಗಳನ್ನು ತಮ್ಮಲ್ಲಿ ಇರಿಸಿಕೊಳ್ಳಬೇಕು.ಯಾವುದೇ ನೆರವಿಗಾಗಿ ಭಾರತೀಯ ರಾಯಭಾರ ಕಚೇರಿಯನ್ನು ಸಂಪರ್ಕಿಸಲು ಕೋರಲಾಗಿದೆ.

ಭಾರತೀಯ ರಾಯಭಾರ ಕಚೇರಿಯು ತುರ್ತು ಸಹಾಯವಾಣಿ ಸಂಖ್ಯೆ ಮತ್ತು ಇಮೇಲ್ ಅನ್ನು ಸಹ ನೀಡಿದೆ: +989128109115; +989128109109; +989128109102; +989932179359.

ಇಮೇಲ್: cons.tehran@mea.gov.in. ಇರಾನ್‌ನಲ್ಲಿರುವ ಭಾರತೀಯ ಪ್ರಜೆಗಳನ್ನು ಭಾರತೀಯ ರಾಯಭಾರ ಕಚೇರಿಯಲ್ಲಿ ನೋಂದಾಯಿಸಲು ತಿಳಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel