ಯುವ ಕಾಂಗ್ರೆಸ್ ನಾಯಕರ ಪ್ರತಿಭಟನೆ, ಮಾರ್ಗರೇಟ್ ಆಳ್ವಾ  
ದೇಶ

'ಇಂಡಿಯಾ ಎಐ ಸಮ್ಮಿಟ್' ವೇಳೆ ಯುವ ಕಾಂಗ್ರೆಸ್ ನಾಯಕರು ಶರ್ಟ್ ಬಿಚ್ಚಿ ಪ್ರತಿಭಟನೆ; Congress ನಾಯಕಿ ಮಾರ್ಗರೇಟ್ ಆಳ್ವಾ ಆಕ್ಷೇಪ; Video

ಅಂತಾರಾಷ್ಟ್ರೀಯ ಮಟ್ಟದ ಕಾರ್ಯಕ್ರಮಗಳಲ್ಲಿ ಶಿಸ್ತು ಮತ್ತು ಸಭ್ಯತೆ ಅತ್ಯಂತ ಮುಖ್ಯ. ‘ಇಂಡಿಯಾ ಎಐ ಸಮ್ಮಿಟ್’ ವೇಳೆ ಯುವ ಕಾಂಗ್ರೆಸ್ ಕಾರ್ಯಕರ್ತರು ಶರ್ಟ್ ಬಿಚ್ಚಿ ಪ್ರತಿಭಟನೆ ಸರಿಯಲ್ಲ.

ಬೆಂಗಳೂರು: ಕಳೆದ ವಾರ ‘ಇಂಡಿಯಾ ಎಐ ಸಮ್ಮಿಟ್ (India AI Summit)’ ವೇಳೆ ಯುವ ಕಾಂಗ್ರೆಸ್ ನಾಯಕರು ಶರ್ಟ್ ಬಿಚ್ಚಿ ಪ್ರತಿಭಟನೆ ನಡೆಸಿದ್ದು ಸಾಕಷ್ಟು ಸುದ್ದಿಯಾಗಿತ್ತು. ಯುವ ಕಾಂಗ್ರೆಸ್ ನಾಯಕರ ಪ್ರತಿಭಟನೆಗೆ ಖುದ್ದು ಕಾಂಗ್ರೆಸ್ ಪಕ್ಷದ ಹಿರಿಯ ನಾಯಕಿ ಹಾಗೂ ಕೇಂದ್ರದ ಮಾಜಿ ಸಚಿವೆ ಮಾರ್ಗರೇಟ್ ಆಳ್ವ ಅವರೇ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಅಂತಾರಾಷ್ಟ್ರೀಯ ಮಟ್ಟದ ಕಾರ್ಯಕ್ರಮಗಳಲ್ಲಿ ಶಿಸ್ತು ಮತ್ತು ಸಭ್ಯತೆ ಅತ್ಯಂತ ಮುಖ್ಯ. ‘ಇಂಡಿಯಾ ಎಐ ಸಮ್ಮಿಟ್’ ವೇಳೆ ಯುವ ಕಾಂಗ್ರೆಸ್ ಕಾರ್ಯಕರ್ತರು ಶರ್ಟ್ ಬಿಚ್ಚಿ ಪ್ರತಿಭಟನೆ ಸರಿಯಲ್ಲ. ಅಂತಾರಾಷ್ಟ್ರೀಯ ಮಟ್ಟದ ಕಾರ್ಯಕ್ರಮಗಳಲ್ಲಿ ಘನತೆ, ಶಿಸ್ತು ಮತ್ತು ಜವಾಬ್ದಾರಿ ಇರಬೇಕು ಎಂದು ಭಾವಿಸುತ್ತೇನೆ ಎಂದಿದ್ದಾರೆ.

ಮಾರ್ಗರೇಟ್ ಆಳ್ವಾ ಹೇಳಿದ್ದೇನು?

ದೆಹಲಿಯ ಭಾರತ್ ಮಂಟಪದಲ್ಲಿ ನಡೆದ ಎಐ ಶೃಂಗಸಭೆ ರಾಷ್ಟ್ರ ಹಾಗೂ ಅಂತರರಾಷ್ಟ್ರೀಯ ಮಟ್ಟದ ಬಂಡವಾಳಗಾರರ ಗಮನಸೆಳೆದ ಕಾರ್ಯಕ್ರಮವಾಗಿತ್ತು. ಆ ಸಂದರ್ಭದಲ್ಲಿ ನಡೆದ ಯುವ ಕಾಂಗ್ರೆಸ್ ಪ್ರತಿಭಟನೆ ರಾಜಕೀಯ ಚರ್ಚೆಗೆ ಗ್ರಾಸವಾಗಿದೆ. ಪ್ರತಿಭಟನೆ ವೇಳೆ ಭಾರತ ಯುವ ಕಾಂಗ್ರೆಸ್ ರಾಷ್ಟ್ರೀಯ ಸಂಯೋಜಕ ನರಸಿಂಹ ಅವರನ್ನು ಪೊಲೀಸರು ಬಂಧಿಸಿದ್ದರು.

ಇನ್ನೊಂದೆಡೆ, ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಸಹ ಯುವ ಕಾಂಗ್ರೆಸ್ ನಾಯಕರ ಅರೆನಗ್ನ ಪ್ರತಿಭಟನೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿ, ಇದೊಂದು ನಾಚಿಕೆಗೇಡಿನ ಸಂಗತಿ ಎಂದು ಟೀಕಿಸಿದ್ದಾರೆ.

ಎಐ ಶೃಂಗಸಭೆ ವೇಳೆ ನಡೆದಿದ್ದೇನು?

ಭಾರತ್ ಮಂಟಪಂನಲ್ಲಿ ನಡೆದ ಎಐ ಶೃಂಗಸಭೆಯ ಸಂದರ್ಭದಲ್ಲಿ ಯುವ ಕಾಂಗ್ರೆಸ್ಸಿನ 10 ಮಂದಿ ನಾಯಕರು ಏಕಾಏಕಿ ತಾವು ತೊಟ್ಟಿದ್ದ ಶರ್ಟನ್ನು ಕಳಚಿ ಪ್ರಧಾನಿ ನರೇಂದ್ರ ಮೋದಿ, ಅಮೆರಿಕ ಅಧ್ಯಕ್ಷ ಟ್ರಂಪ್ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದ್ದರು.

ಈ ಬಗ್ಗೆ ಪ್ರಧಾನಿ ಮೋದಿ ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದರು. ಕಾಂಗ್ರೆಸ್ ಪಕ್ಷದ ಕೊಳಕು ಮತ್ತು ಬೆತ್ತಲೆ ರಾಜಕಾರಣ ಹಾಗೂ ಆ ಪಕ್ಷ ತಾತ್ವಿಕವಾಗಿ ಅದೆಷ್ಟು ದಿವಾಳಿ ಎದ್ದಿದೆ ಎಂಬುದನ್ನು ಈ ಪ್ರತಿಭಟನೆ ತೋರಿಸಿಕೊಟ್ಟಿದೆ ಎಂದು ಮೋದಿ ಹೇಳಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಂದಿಗ್ರಾಮದಲ್ಲಿ 1.22 ಲಕ್ಷ ಮತ, ಅಸ್ಸಾಂನಲ್ಲಿ BJPಗೆ ಗೆಲುವು; 2 ಕ್ಷೇತ್ರ ಗೆದ್ದ TVK: ಕಾಂಗ್ರೆಸ್, ದೀದಿಗೆ ಮುಖಭಂಗ!

ಉಪಚುನಾವಣೆಯಲ್ಲಿ ಗೆಲುವು, ಜನರೊಂದಿಗೆ NDA ಆಳವಾದ ನಂಟಿನ ಪ್ರತೀಕ: ಪ್ರಧಾನಿ ಮೋದಿ

ಮತಗಳ್ಳತನವೇ ಆಗಿದ್ದರೆ ಕೇರಳ Congress CM, ತಮಿಳುನಾಡು CM ಕೂಡ ಮತಗಳ್ಳರೇ: ಚೇತನ್ ಅಹಿಂಸಾ

'ಅಸಹ್ಯ, ಅತಿರೇಕ'.. 'ನಿಮ್ಮನ್ನು ಈರೀತಿ ನೋಡಲು ಇಚ್ಛಿಸುವುದಿಲ್ಲ, BiggBoss ಶೋ ಬಿಟ್ಟು ಹೊರಬನ್ನಿ'; Kichcha Sudeepಗೆ ಪತ್ರ

'ಆಶ್ರಮಕ್ಕೆ ಬರಲು ಹಣ ಪಡೆದ ಕೊಹ್ಲಿ' ಆರೋಪ: Falahari Maharaj ಯೂ-ಟರ್ನ್, ಕ್ಷಮೆಯಾಚನೆ! video