ಅಸ್ಸಾಂ ಪೊಲೀಸರು 
ದೇಶ

ಬಾಯ್ ಫ್ರೆಂಡ್ ಎದುರೇ ಮಹಿಳೆ ಮೇಲೆ ಒಬ್ಬರಾದ ಮೇಲೆ ಒಬ್ಬರಂತೆ 7 ಮಂದಿಯಿಂದ ಗ್ಯಾಂಗ್ ರೇಪ್, 10 ಸಾವಿರ ಸುಲಿಗೆ!

ಅಸ್ಸಾಂನ ಕಚಾರ್ ಜಿಲ್ಲೆಯ ಸಿಲ್ಚಾರ್ ಪಟ್ಟಣಕ್ಕೆ ತನ್ನ ಬಾಯ್ ಫ್ರೆಂಡ್ ಜೊತೆ ಭೇಟಿ ನೀಡಿದ್ದ 28 ವರ್ಷದ ಮಹಿಳೆಯ ಮೇಲೆ ಏಳು ಮಂದಿ ಸಾಮೂಹಿಕ ಅತ್ಯಾಚಾರ ನಡೆಸಿದ್ದಲ್ಲದೆ 10 ಸಾವಿರ ರೂಪಾಯಿ ಹಣ ಸುಲಿಗೆ ಮಾಡಿದ್ದಾರೆ.

ಸಿಲ್ಚಾರ್: ಅಸ್ಸಾಂನ ಕಚಾರ್ ಜಿಲ್ಲೆಯ ಸಿಲ್ಚಾರ್ ಪಟ್ಟಣಕ್ಕೆ ತನ್ನ ಬಾಯ್ ಫ್ರೆಂಡ್ ಜೊತೆ ಭೇಟಿ ನೀಡಿದ್ದ 28 ವರ್ಷದ ಮಹಿಳೆಯ ಮೇಲೆ ಏಳು ಮಂದಿ ಸಾಮೂಹಿಕ ಅತ್ಯಾಚಾರ ನಡೆಸಿದ್ದಲ್ಲದೆ 10 ಸಾವಿರ ರೂಪಾಯಿ ಹಣ ಸುಲಿಗೆ ಮಾಡಿದ್ದಾರೆ. ಘಟನೆಯ ಬಗ್ಗೆ ಸಂತ್ರಸ್ತೆ ಫೆಬ್ರವರಿ 19ರಂದು ದೂರು ದಾಖಲಿಸಿದ್ದು ಅದರ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಸಂತ್ರಸ್ತೆ ಇಬ್ಬರು ಪುರುಷರನ್ನು ಗುರುತಿಸಿದ್ದು ಅವರನ್ನು ನಂತರ ಬಂಧಿಸಲಾಗಿದೆ. ಆದರೆ ಉಳಿದವರನ್ನು ಗುರುತಿಸಿ ಬಂಧಿಸಲು ಪ್ರಯತ್ನಗಳು ನಡೆಯುತ್ತಿವೆ ಎಂದು ಹೇಳಿದರು.

ಸಿಲ್ಚಾರ್ ಸದರ್ ಪೊಲೀಸ್ ಠಾಣೆಯಲ್ಲಿ ಭಾರತೀಯ ದಂಡ ಸಂಹಿತೆಯ ಹಲವು ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕನಿಷ್ಠ ಏಳು ಮಂದಿ ದುಷ್ಕರ್ಮಿಗಳು ಒಬ್ಬೊಬ್ಬರಾಗಿ ತನ್ನ ಮೇಲೆ ಅತ್ಯಾಚಾರ ಎಸಗಿ ನಂತರ 10,000 ವರ್ಗಾಯಿಸುವಂತೆ ಒತ್ತಾಯಿಸಿದರು ಎಂದು ಸಂತ್ರಸ್ತೆ ಆರೋಪಿಸಿದ್ದಾರೆ. ಆರಂಭದಲ್ಲಿ ಪೊಲೀಸರು ಈ ವಿಷಯದ ಬಗ್ಗೆ ಮೌನವಹಿಸಿದ್ದರು. ಆದರೆ ಮಂಗಳವಾರ ಸಿಲ್ಚಾರ್ ಮೂಲದ ಪತ್ರಕರ್ತೆಯ ಮೇಲೆ ಆರೋಪಿಗಳಲ್ಲಿ ಒಬ್ಬರ ಕುಟುಂಬ ಸದಸ್ಯರು ಹಲ್ಲೆ ನಡೆಸಿದ ನಂತರ ಈ ಘಟನೆ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು.

ರಾಷ್ಟ್ರೀಯ ಹೆದ್ದಾರಿ ರಸ್ತೆ ಪೊಲೀಸ್ ಠಾಣೆ ಬಳಿ ಆರೋಪಿಯ ಕುಟುಂಬ ಸದಸ್ಯರು ತನ್ನನ್ನು ತಡೆದರು ಎಂದು ಪತ್ರಕರ್ತ ಆರೋಪಿಸಿದ್ದಾರೆ. ಘಟನೆಯನ್ನು ವರದಿ ಮಾಡಿದ್ದಕ್ಕಾಗಿ ಆರೋಪಿಯು ತನ್ನನ್ನು ಪ್ರಶ್ನಿಸಿ ನಂತರ ಥಳಿಸಿದನು. ಆದರೆ ಸ್ಥಳದಲ್ಲಿದ್ದ ಜನರು ತನ್ನನ್ನು ರಕ್ಷಿಸಿದರು ಎಂದು ಪತ್ರಕರ್ತೆ ಹೇಳಿದರು. ಘಟನೆ ಕುರಿತಂತೆ ತೀವ್ರ ಜನಾಕ್ರೋಶ ವ್ಯಕ್ತವಾಗುತ್ತಿದೆ. ಈ ಮಧ್ಯೆ ರಾಜ್ಯಸಭಾ ಸದಸ್ಯೆ ಸುಶ್ಮಿತಾ ದೇವ್ ಕೂಡ ಪ್ರಕರಣದಲ್ಲಿ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆ: ವಯೋಮಿತಿ 5 ವರ್ಷ ಸಡಿಲಿಕೆ; ಸಮಸ್ಯೆಗೆ ಬಿಜೆಪಿಯೇ ಕಾರಣ ಎಂದ CM

'ದೇಶದ ಘನತೆಗೆ ಮಾಡಿದ ಭೀಕರ ದ್ರೋಹ': ಕಾಂಗ್ರೆಸ್ಸಿಗರ ಅರೆಬೆತ್ತಲೆ ಪ್ರತಿಭಟನೆಗೆ ಜಡ್ಜ್‌ಗಳು ಸೇರಿ 270 ನಿವೃತ್ತ ಅಧಿಕಾರಿಗಳ ಖಂಡನೆ!

ಎಐಎಡಿಎಂಕೆ ಉಚ್ಚಾಟಿತ ನಾಯಕಿ ವಿಕೆ ಶಶಿಕಲಾರಿಂದ ಹೊಸ ಪಕ್ಷ ಸ್ಥಾಪನೆ; ರಾಮನಾಥಪುರಂನಲ್ಲಿ ಧ್ವಜ ಅನಾವರಣ

ಬಿಜೆಪಿ-ಸಿಪಿಐ(ಎಂ) ಹೊಂದಾಣಿಕೆಯಿಂದ ಕೇರಳಕ್ಕೆ ಹೊಸ ಹೆಸರು; ಕೇಂದ್ರ ಬಂಗಾಳವನ್ನು ನಿರ್ಲಕ್ಷಿಸಿದೆ: ಮಮತಾ

Ranji Trophy final: ಮೊದಲ ದಿನ ಬಲಿಷ್ಠ ಕರ್ನಾಟಕ ವಿರುದ್ಧ ಪ್ರಾಬಲ್ಯ ಸಾಧಿಸಿದ ಜಮ್ಮು ಕಾಶ್ಮೀರ!

SCROLL FOR NEXT