ಇಸ್ರೇಲ್ ಗೆ ಪ್ರಯಾಣ ಬೆಳೆಸಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ  
ದೇಶ

ಪ್ರಧಾನಿ ಮೋದಿ ಎರಡು ದಿನಗಳ ಇಸ್ರೇಲ್‌ ಪ್ರವಾಸ ಆರಂಭ; ಸಂಸತ್ತಿನ ನೆಸ್ಸೆಟ್ ಭಾಷಣ ಮಾಡುವ ಮೊದಲ ಭಾರತ ಪ್ರಧಾನಿ; Video

ಇಂದು ಮತ್ತು ನಾಳೆ ಕಾರ್ಯಕ್ರಮಗಳಲ್ಲಿ ಇಬ್ಬರು ನಾಯಕರು ಒಟ್ಟಿಗೆ ಭಾಗವಹಿಸಲಿದ್ದಾರೆ. 2017ರ ಜುಲೈನಲ್ಲಿ ನಡೆದ ಹಿಂದಿನ ಭೇಟಿಯಂತೆ, ತೆಲ್ ಅವೀವ್ ವಿಮಾನ ನಿಲ್ದಾಣದಲ್ಲಿ ನೆತನ್ಯಾಹು ಅವರು ಪ್ರಧಾನಿ ಮೋದಿಯನ್ನು ಸ್ವಾಗತಿಸಲಿದ್ದಾರೆ.

ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ಬುಧವಾರದಿಂದ ಎರಡು ದಿನಗಳ ಇಸ್ರೇಲ್ ಭೇಟಿಯಲ್ಲಿರುತ್ತಾರೆ. ಇಸ್ರೇಲ್ ಪ್ರಧಾನಮಂತ್ರಿ ಬೆಂಜಮಿನ್ ನೆತನ್ಯಾಹು ಅವರು ಮೊನ್ನೆ ಫೆಬ್ರವರಿ 15ರಂದು ಜೆರುಸಲೇಮ್‌ನಲ್ಲಿ ನಡೆದ ಪ್ರಮುಖ ಅಮೆರಿಕನ್ ಯಹೂದಿ ಸಂಘಟನೆಗಳ ಅಧ್ಯಕ್ಷರ ಸಮ್ಮೇಳನದಲ್ಲಿ ಮಾತನಾಡುವ ವೇಳೆ ಈ ಭೇಟಿಯ ಬಗ್ಗೆ ಮಾಹಿತಿ ನೀಡಿದ್ದರು.

ಇಂದು ಮತ್ತು ನಾಳೆ ಕಾರ್ಯಕ್ರಮಗಳಲ್ಲಿ ಇಬ್ಬರು ನಾಯಕರು ಒಟ್ಟಿಗೆ ಭಾಗವಹಿಸಲಿದ್ದಾರೆ. 2017ರ ಜುಲೈನಲ್ಲಿ ನಡೆದ ಹಿಂದಿನ ಭೇಟಿಯಂತೆ, ತೆಲ್ ಅವೀವ್ ವಿಮಾನ ನಿಲ್ದಾಣದಲ್ಲಿ ನೆತನ್ಯಾಹು ಅವರು ಪ್ರಧಾನಿ ಮೋದಿಯನ್ನು ಸ್ವಾಗತಿಸಲಿದ್ದಾರೆ. ನಂತರ ಇಬ್ಬರು ಜೆರುಸಲೆಮ್‌ಗೆ ಒಟ್ಟಿಗೆ ಪ್ರಯಾಣಿಸುವ ನಿರೀಕ್ಷೆಯಿದೆ.

ನಾಳೆ ದ್ವಿಪಕ್ಷೀಯ ಮಾತುಕತೆ ಮತ್ತು ಜಂಟಿ ಪತ್ರಿಕಾಗೋಷ್ಠಿ ನಡೆಯಲಿದೆ. ಅದಲ್ಲದೆ, ಪ್ರಧಾನಿ ಮೋದಿ ಇಸ್ರೇಲ್ ಸಂಸತ್ತಾದ ಕ್ನೆಸೆಟ್‌ನಲ್ಲಿ ಭಾಷಣ ಮಾಡಲಿದ್ದು, ಖಾಸಗಿ ಭೋಜನ, ನವೋತ್ಪಾದನಾ ಕಾರ್ಯಕ್ರಮ, ಯಾದ್ ವಶೆಮ್ ಹೋಲೋಕಾಸ್ಟ್ ಸ್ಮಾರಕ ಸಂಗ್ರಹಾಲಯಕ್ಕೆ ಭೇಟಿ ಹಾಗೂ ಇಸ್ರೇಲ್‌ನಲ್ಲಿ ನೆಲೆಸಿರುವ “ಭಾರತೀಯ-ಯಹೂದಿ” ಸಮುದಾಯದೊಂದಿಗೆ ಸಂವಾದ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಸಾಧ್ಯತೆ ಇದೆ.

ಈ ಎರಡು ದಿನಗಳ ಭೇಟಿಯ ವೇಳೆ ದ್ವಿಪಕ್ಷೀಯ ಹಾಗೂ ಪ್ರಾದೇಶಿಕ ಮಹತ್ವದ ಎಲ್ಲಾ ಪ್ರಮುಖ ವಿಷಯಗಳ ಬಗ್ಗೆ ಪ್ರಧಾನಿ ಮೋದಿ ಪ್ರಸ್ತಾಪಿಸುವ ಸಾಧ್ಯತೆ ಇದೆ.

ಇದು ಪ್ರಧಾನಿಯವರಿಗೆ ಇಸ್ರೇಲ್‌ಗೆ ಎರಡನೇ ಭೇಟಿ ಆಗಿದ್ದು, ಮೊದಲ ಭೇಟಿ ಜುಲೈ 2017ರಲ್ಲಿ ನಡೆದಿತ್ತು. ಅದು ಇಸ್ರೇಲ್‌ಗೆ ಭಾರತೀಯ ಪ್ರಧಾನಮಂತ್ರಿಯೊಬ್ಬರು ನೀಡಿದ ಮೊದಲ ಐತಿಹಾಸಿಕ ಭೇಟಿ ಆಗಿತ್ತು. ಇತ್ತೀಚಿನ ಈ ಉನ್ನತ ಮಟ್ಟದ ಭೇಟಿ, ಎರಡೂ ದೇಶಗಳ ನಡುವೆ ನಡೆದ ಹಲವು ಉನ್ನತ ಮಟ್ಟದ ಸಚಿವರ ವಿನಿಮಯಗಳ ನಂತರ ನಡೆಯುತ್ತಿರುವುದು ಗಮನಾರ್ಹವಾಗಿದೆ.

ಭಾರತದ ಮೊದಲ ಪ್ರಧಾನಿಗೆ ಗೌರವ

ಇಸ್ರೇಲ್ ಸಂಸತ್ತಾದ ಕ್ನೆಸೆಟ್ ನ್ನು ಉದ್ದೇಶಿಸಿ ಮಾತನಾಡುವ ಮೊದಲ ಭಾರತ ಪ್ರಧಾನಮಂತ್ರಿ ಆಗುವ ಗೌರವ ದೊರೆಯಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಮ್ಮ ಪ್ರಯಾಣಕ್ಕೂ ಮುನ್ನ ನೀಡಿದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇಂದು ಇಸ್ರೇಲ್‌ಗೆ ಹೊರಡುವ ಮುನ್ನ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿರುವ ಅವರು, ಭಾರತ ಮತ್ತು ಇಸ್ರೇಲ್ ನಡುವೆ ಬಲವಾದ ಹಾಗೂ ಬಹುಮುಖ ತಂತ್ರಾತ್ಮಕ ಭಾಗವಾಗಿದೆ. ಅದು ಗಮನಾರ್ಹ ಬೆಳವಣಿಗೆ ಮತ್ತು ಚುರುಕುತನವನ್ನು ಕಂಡಿದೆ ಎಂದು ಹೇಳಿದರು. ಇಸ್ರೇಲ್ ಪ್ರಧಾನಮಂತ್ರಿ ಬೆಂಜಮಿನ್ ನೆತನ್ಯಾಹು ಅವರೊಂದಿಗೆ ಚರ್ಚೆ ನಡೆಸಲು ತಾವು ಎದುರು ನೋಡುತ್ತಿರುವುದಾಗಿ ತಿಳಿಸಿದ್ದಾರೆ.

ನನ್ನ ಈ ಭೇಟಿ ಭಾರತ ಮತ್ತು ಇಸ್ರೇಲ್ ನಡುವಿನ ದೀರ್ಘಕಾಲೀನ ಬಂಧಗಳನ್ನು ಮತ್ತಷ್ಟು ಬಲಪಡಿಸುವುದರ ಜೊತೆಗೆ, ನಮ್ಮ ತಂತ್ರಾತ್ಮಕ ಭಾಗವಾಗಿ ಹೊಸ ಗುರಿಗಳನ್ನು ನಿರ್ಧರಿಸಿ, ಸ್ಥಿರ, ನವೋತ್ಪಾದನಾಶೀಲ ಮತ್ತು ಸಮೃದ್ಧ ಭವಿಷ್ಯಕ್ಕಾಗಿ ನಮ್ಮ ಸಂಯುಕ್ತ ದೃಷ್ಟಿಯನ್ನು ಮುಂದುವರಿಸಲಿದೆ ಎಂಬ ವಿಶ್ವಾಸವಿದೆ ಎಂದು ಪ್ರಧಾನಿ ಮೋದಿ ಹೇಳಿದರು.

ವಿಜ್ಞಾನ ಮತ್ತು ತಂತ್ರಜ್ಞಾನ, ನವೋತ್ಪಾದನೆ, ಕೃಷಿ, ಜಲ ನಿರ್ವಹಣೆ, ರಕ್ಷಣಾ ಮತ್ತು ಭದ್ರತೆ, ವಾಣಿಜ್ಯ ಮತ್ತು ಹೂಡಿಕೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ನಮ್ಮ ಸಹಕಾರವನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಪ್ರಧಾನಿ ನೆತನ್ಯಾಹು ಅವರೊಂದಿಗೆ ಚರ್ಚೆ ನಡೆಸಲು ನಾನು ಎದುರು ನೋಡುತ್ತಿದ್ದೇನೆ ಎಂದು ಅವರು ತಮ್ಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇಬ್ಬರು ನಾಯಕರು ಪ್ರಾದೇಶಿಕ ಮತ್ತು ಜಾಗತಿಕ ಮಹತ್ವದ ಪರಸ್ಪರ ಆಸಕ್ತಿಯ ವಿಷಯಗಳ ಬಗ್ಗೆ ಸಹ ಅಭಿಪ್ರಾಯ ವಿನಿಮಯ ಮಾಡಿಕೊಳ್ಳಲಿದ್ದಾರೆ.

ಇಸ್ರೇಲ್ ಸಂಸತ್ತಾದ ಕ್ನೆಸೆಟ್ ನ್ನು ಉದ್ದೇಶಿಸಿ ಮಾತನಾಡುವ ಮೊದಲ ಭಾರತೀಯ ಪ್ರಧಾನಮಂತ್ರಿ ಆಗುವ ಗೌರವ ನನಗೆ ದೊರೆಯಲಿದೆ. ಇದು ನಮ್ಮ ಎರಡೂ ದೇಶಗಳನ್ನು ಸಂಪರ್ಕಿಸುವ ಬಲವಾದ ಸಂಸತ್ತೀಯ ಮತ್ತು ಪ್ರಜಾಪ್ರಭುತ್ವದ ಬಂಧಗಳಿಗೆ ಗೌರವ ಸಲ್ಲಿಸುವ ಸಂದರ್ಭವಾಗಲಿದೆ ಎಂದು ಹೇಳಿದರು.

ಇಸ್ರೇಲ್‌ನಲ್ಲಿ ವಾಸಿಸುವ ಭಾರತೀಯ ವಲಸಿಗ ಸಮುದಾಯದ ಸದಸ್ಯರೊಂದಿಗೆ ಸಂವಾದ ನಡೆಸಲು ತಾವು ಉತ್ಸುಕರಾಗಿದ್ದೇನೆ ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ.

ಜೆರುಸಲೇಂ ಪೋಸ್ಟ್​​ನ ಮುಖಪುಟದಲ್ಲಿ ಪ್ರಧಾನಿಯದ್ದೇ ಸುದ್ದಿ

ಮೋದಿ ಆಗಮನಕ್ಕೂ ಮುನ್ನ ಸಂಸತ್(Knesset)ನಲ್ಲಿ ತ್ರಿವರ್ಣ ದೀಪಗಳು ಕಂಗೊಳಿಸಿವೆ. ಪ್ರಧಾನಿ ಮೋದಿ ನಾಳೆ ಇಸ್ರೇಲ್ ಸಂಸತ್ತಿನಲ್ಲಿ ಭಾಷಣ ಮಾಡಲಿದ್ದು, ಜೆರುಸಲೇಂ ಪೋಸ್ಟ್​​ನ ಮುಖಪುಟದಲ್ಲಿ ಪ್ರಧಾನಿಯದ್ದೇ ಸುದ್ದಿ ಪ್ರಕಟವಾಗಿದೆ.

ಇದಕ್ಕೂ ಮೊದಲು, ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ 2015 ರಲ್ಲಿ ಸಂಸತ್ತನ್ನುದ್ದೇಶಿಸಿ ಮಾತನಾಡಿದ್ದರು. ಅಮೆರಿಕ ಮತ್ತು ಇರಾನ್ ನಡುವಿನ ಉದ್ವಿಗ್ನತೆ ಉತ್ತುಂಗದಲ್ಲಿರುವ ಸಮಯದಲ್ಲಿ ಈ ಭೇಟಿ ತುಂಬಾ ಮಹತ್ವದ್ದಾಗಿದೆ. ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ಆಹ್ವಾನದ ಮೇರೆಗೆ ಪ್ರಧಾನಿ ಮೋದಿ ತೆರಳುತ್ತಿದ್ದಾರೆ. ಪ್ರಧಾನಿ ಮೋದಿ ಫೆಬ್ರವರಿ 26ರಂದು ಸಂಸತ್ತು ಉದ್ದೇಶಿಸಿ ಮಾತನಾಡಲಿದ್ದಾರೆ.

ಇಸ್ರೇಲ್ ಸಂಸತ್ತಿನ ಸ್ಪೀಕರ್ ಅಮೀರ್ ಒಹಾನಾ ನೆಸ್ಸೆಟ್‌ನ ಫೋಟೋವನ್ನು ಹಂಚಿಕೊಂಡು, ಇಂದು ರಾತ್ರಿ, ನೆಸ್ಸೆಟ್ ಅನ್ನು ಭಾರತೀಯ ಧ್ವಜದ ಬಣ್ಣಗಳಲ್ಲಿ ಬೆಳಗಿಸಲಾಗುತ್ತದೆ, ಇದು ಪ್ರಧಾನಿ ಮೋದಿಗೆ ನಾವು ಕೊಡುತ್ತಿರುವ ಗೌರವ ಎಂದು ಹೇಳಿದ್ದಾರೆ. ಪ್ರಧಾನಿ ಮೋದಿಯವರ ಭೇಟಿಯನ್ನು ಇಸ್ರೇಲ್ ಸಂಸತ್ತು, ನೆಸ್ಸೆಟ್‌ನಿಂದ ಹಿಡಿದು ಪ್ರಮುಖ ಪತ್ರಿಕೆಗಳವರೆಗೆ ವ್ಯಾಪಕವಾಗಿ ಚರ್ಚಿಸಲಾಗುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮಹಿಳಾ ಮೀಸಲಾತಿ ಮಸೂದೆಗೆ ಬೆಂಬಲ; ಆದರೆ ಡೀಲಿಮಿಟೇಷನ್ ಗೆ ಪ್ರತಿಪಕ್ಷಗಳ ವಿರೋಧ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

EVM ಬದಲು ಬ್ಯಾಲೆಟ್ ಪೇಪರ್ ಬಳಕೆ ಮಸೂದೆಗೆ ಕೊನೆಗೂ ರಾಜ್ಯಪಾಲರ ಅಂಕಿತ!

ಪಾಕಿಸ್ತಾನಕ್ಕೆ ಶಾಕ್! ಕೇಂದ್ರದ ಡೀಲಿಮಿಟೇಷನ್ ಮಸೂದೆಯಲ್ಲಿ ಪಾಕ್ ಆಕ್ರಮಿತ ಕಾಶ್ಮೀರದ ಕ್ಷೇತ್ರಗಳ ಮರುಹಂಚಿಕೆಗೆ ಕ್ರಮ!

'ಚೀನಾ, ಇಡೀ ಜಗತ್ತಿಗೆ' ಹಾರ್ಮುಜ್ ಅನ್ನು 'ಶಾಶ್ವತವಾಗಿ' ತೆರೆಯುತ್ತೇವೆ; ಜಿನ್ ಪಿಂಗ್ ನನಗೆ ದೊಡ್ಡ ಅಪ್ಪುಗೆ ನೀಡುತ್ತಾರೆ: ಟ್ರಂಪ್

BJP ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣ: Congress ಶಾಸಕ ವಿನಯ್ ಕುಲಕರ್ಣಿ ಅಪರಾಧಿ; ಕೋರ್ಟ್ ತೀರ್ಪು!

SCROLL FOR NEXT