ಅನಿಲ್ ಅಂಬಾನಿ 
ದೇಶ

2,220 ಕೋಟಿ ರೂ ವಂಚನೆ: ಅನಿಲ್ ಅಂಬಾನಿ, RCom ವಿರುದ್ಧ ಸಿಬಿಐ ಹೊಸ ಕೇಸ್ ದಾಖಲು!

ಈ ಸಾಲದ ವಹಿವಾಟಿಗೆ ಸಂಬಂಧಿಸಿದ ವಿವಿಧ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಸಿಬಿಐ ವಕ್ತಾರರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ನವದೆಹಲಿ: 2013-17ರ ಅವಧಿಯಲ್ಲಿ ಬ್ಯಾಂಕ್ ಆಫ್ ಬರೋಡಾಗೆ ವಂಚಿಸಿದ ಆರೋಪದ ಮೇಲೆ ಕೈಗಾರಿಕೋದ್ಯಮಿ ಅನಿಲ್ ಅಂಬಾನಿ ಮತ್ತು ರಿಲಯನ್ಸ್ ಕಮ್ಯುನಿಕೇಷನ್ಸ್ (RCOM) ವಿರುದ್ಧ ಸಿಬಿಐ ಹೊಸ ಪ್ರಕರಣವನ್ನು ದಾಖಲಿಸಿದೆ. ಬ್ಯಾಂಕ್‌ಗೆ 2,220 ಕೋಟಿ ರೂ. ಹೆಚ್ಚು ನಷ್ಟವನ್ನುಂಟು ಮಾಡಿದ್ದಾರೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.

ಮಂಗಳವಾರ ಬ್ಯಾಂಕ್‌ನಿಂದ ಬಂದ ದೂರಿನ ಮೇರೆಗೆ ಪ್ರಕರಣ ದಾಖಲಿಸಲಾಗಿದೆ. ತದನಂತರ ಸಿಬಿಐ ಅನಿಲ್ ಅಂಬಾನಿ ಅವರ ನಿವಾಸ ಮತ್ತು ರಿಲಯನ್ಸ್ ಕಮ್ಯುನಿಕೇಷನ್ ಲಿಮಿಟೆಡ್‌ನ ನೋಂದಾಯಿತ ಕಚೇರಿಗಳಲ್ಲಿ ಶೋಧ ನಡೆಸಿದೆ.

ಈ ಸಾಲದ ವಹಿವಾಟಿಗೆ ಸಂಬಂಧಿಸಿದ ವಿವಿಧ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಸಿಬಿಐ ವಕ್ತಾರರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

"ರಿಲಯನ್ಸ್ ಕಮ್ಯುನಿಕೇಷನ್ಸ್ ಪಡೆದಿರುವ ಸಾಲಗಳಿಂದಾಗಿ ಬ್ಯಾಂಕ್ ಆಫ್ ಬರೋಡಾ 2,220 ಕೋಟಿ ರೂ.ಗೂ ಹೆಚ್ಚು ನಷ್ಟವನ್ನು ಅನುಭವಿಸಿದೆ. ಸಂಬಂಧಿಸಿದವರೊಂದಿಗೆ ಕಾಲ್ಪನಿಕ ವಹಿವಾಟು ಸೃಷ್ಟಿಸುವ ಮೂಲಕ ದಾರಿ ತಪ್ಪಿಸಲಾಗಿದೆ ಮತ್ತು ದುರ್ಬಳಕೆ ಮಾಡಲಾಗಿದೆ" ಎಂದು ಎಫ್‌ಐಆರ್‌ನಲ್ಲಿ ಆರೋಪಿಸಲಾಗಿದೆ ಎಂದು ವಕ್ತಾರರು ತಿಳಿಸಿದ್ದಾರೆ.

ಖಾತೆಯನ್ನು 2017 ರಲ್ಲಿಯೇ ಅನುತ್ಪಾದಕ ಆಸ್ತಿ ಎಂದು ಘೋಷಿಸಲಾಯಿತು. ಆದಾಗ್ಯೂ, ಬಾಂಬೆ ಹೈಕೋರ್ಟ್‌ಗೆ ಅನಿಲ್ ಅಂಬಾನಿ ಸಲ್ಲಿಸಿದ ಅರ್ಜಿಯ ಆಧಾರದ ಮೇಲೆ, ಹೈಕೋರ್ಟ್‌ನಿಂದ ಖಾತೆಗಳನ್ನು ವಂಚನೆ ಎಂದು ಘೋಷಿಸಲು ತಡೆ ನೀಡಲಾಯಿತು.

ಫೆ.23 ರಂಂದು ತಡೆಯನ್ನು ತೆರವು ಮಾಡಲಾಗಿದ್ದು, ನಂತರ ಬ್ಯಾಂಕ್ ಆಫ್ ಬರೋಡಾ ಈ ದೂರನ್ನು ದಾಖಲಿಸಿದೆ. ಸಿಬಿಐ ತಕ್ಷಣವೇ ಪ್ರಕರಣವನ್ನು ಕೈಗೆತ್ತಿಕೊಂಡಿದೆ ಎಂದು ವಕ್ತಾರರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: MI vs RCB; ಫಿಲ್ ಸಾಲ್ಟ್, ಕೊಹ್ಲಿ, ಪಾಟಿದಾರ್ ಭರ್ಜರಿ ಬ್ಯಾಟಿಂಗ್, ಮುಂಬೈಗೆ ಗೆಲ್ಲಲು 241 ರನ್ ಬೃಹತ್ ಗುರಿ!

ಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ: Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ; Turkey ಬೇಸ್ತು!

IPL 2026: MI vs RCB; ವಾಂಖೆಡೆ ಕ್ರೀಡಾಂಗಣದಲ್ಲಿ ಇತಿಹಾಸ ಬರೆದ ಬೆಂಗಳೂರು, ಅತ್ಯಧಿಕ ಮೊತ್ತ!

ನೀವೇನ್ ಮುಚ್ಚೋದು.. ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ; ಇರಾನ್ ಗೆ ಟ್ರಂಪ್ ಶಾಕ್!

SCROLL FOR NEXT