ಮನೀಶ್ ಸಿಸೋಡಿಯಾ ಮತ್ತು ಅರವಿಂದ್ ಕೇಜ್ರಿವಾಲ್  
ದೇಶ

Delhi excise policy case: ಅರವಿಂದ್ ಕೇಜ್ರಿವಾಲ್-ಮನೀಶ್ ಸಿಸೋಡಿಯಾ ವಿರುದ್ಧ ಕೇಸು ಖುಲಾಸೆ-Video

ಈ ಆದೇಶವನ್ನು ವಿಶೇಷ ನ್ಯಾಯಾಧೀಶ ಜಿತೇಂದ್ರ ಸಿಂಗ್ ಅವರು ಹೊರಡಿಸಿದ್ದು, ಆರೋಪಿಗಳ ವಿರುದ್ಧ ಅಭಿಯೋಜನಾ ಸಂಸ್ಥೆಯ ಸಾಕ್ಷ್ಯಗಳಿಗೆ ಬೆಂಬಲವಾಗುವ ಯಾವುದೇ ವಸ್ತುನಿಷ್ಠ ಸಾಕ್ಷ್ಯ ದೊರಕಿಲ್ಲವೆಂದು ನ್ಯಾಯಾಲಯ ಹೇಳಿದೆ.

ಶುಕ್ರವಾರ ದೆಹಲಿ ನ್ಯಾಯಾಲಯವು ಸಿಬಿಐಯ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಸೇರಿದಂತೆ ಒಟ್ಟು 23 ಮಂದಿಗೆ ಕೇಸಿನಿಂದ ವಿನಾಯಿತಿ ನೀಡಿದೆ.

ಈ ಆದೇಶವನ್ನು ವಿಶೇಷ ನ್ಯಾಯಾಧೀಶ ಜಿತೇಂದ್ರ ಸಿಂಗ್ ಅವರು ಹೊರಡಿಸಿದ್ದು, ಆರೋಪಿಗಳ ವಿರುದ್ಧ ಅಭಿಯೋಜನಾ ಸಂಸ್ಥೆಯ ಸಾಕ್ಷ್ಯಗಳಿಗೆ ಬೆಂಬಲವಾಗುವ ಯಾವುದೇ ವಸ್ತುನಿಷ್ಠ ಸಾಕ್ಷ್ಯ ದೊರಕಿಲ್ಲವೆಂದು ಹೇಳಿದರು.

ದೆಹಲಿಯ ಅಬಕಾರಿ ನೀತಿ ಸಂಬಂಧಿತ ಭ್ರಷ್ಟಾಚಾರ ಪ್ರಕರಣದಲ್ಲಿ ಸಿಬಿಐ ಸಲ್ಲಿಸಿದ್ದ ಆರೋಪಪಟ್ಟಿಯನ್ನು ಪರಿಗಣಿಸಲು ನ್ಯಾಯಾಲಯ ನಿರಾಕರಿಸಿತು.

ದೆಹಲಿಯ ಹಿಂದಿನ ಆಪ್ ಸರ್ಕಾರದ ಈಗಿನ ಬಿಜೆಪಿ ಸರ್ಕಾರ ರದ್ದುಪಡಿಸಿರುವ ಅಬಕಾರಿ ನೀತಿಯ ಜಾರಿಗೆ ಸಂಬಂಧಿಸಿದ ಭ್ರಷ್ಟಾಚಾರದ ಆರೋಪಗಳ ಕುರಿತು ಸಿಬಿಐ ತನಿಖೆ ನಡೆಸಿ ಕೇಜ್ರಿವಾಲ್ ಮತ್ತು ಸಿಸೋಡಿಯಾ ಬಂಧಿತರಾಗಿದ್ದರು.

ದೆಹಲಿ ಅಬಕಾರಿ ನೀತಿ ಪ್ರಕರಣದ ತನಿಖೆ ವೇಳೆ ಫೆಡರಲ್ ಸಂಸ್ಥೆಯ ಸಮನ್ಸ್‌ಗಳನ್ನು ತಪ್ಪಿಸಿಕೊಂಡಿದ್ದಾರೆ ಎಂಬ ಆರೋಪದ ಎರಡು ಪ್ರಕರಣಗಳಲ್ಲಿ, ಜಾರಿ ನಿರ್ದೇಶನಾಲಯದ (ED) ಅರ್ಜಿಗಳನ್ನು ದೆಹಲಿ ನ್ಯಾಯಾಲಯವು ಜನವರಿಯಲ್ಲಿ ಅರವಿಂದ್ ಕೇಜ್ರಿವಾಲ್ ವಿರುದ್ಧ ಕೇಸನ್ನು ವಜಾಗೊಳಿಸಿತ್ತು.

ಅಬಕಾರಿ ನೀತಿ ಪ್ರಕರಣದಲ್ಲಿ ವಿನಾಯಿತಿ ನೀಡಿದ ಕೆಲವೇ ಕ್ಷಣಗಳಲ್ಲಿ ಅರವಿಂದ್ ಕೇಜ್ರಿವಾಲ್ ಅವರು ಮಾಧ್ಯಮಗಳ ಮುಂದೆ ಭಾವುಕರಾಗಿ ಕಣ್ಣೀರು ಹಾಕಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾನು ಭ್ರಷ್ಟನಲ್ಲ': ಕೋರ್ಟ್ ತೀರ್ಪಿನ ಬಳಿಕ ಮಾಧ್ಯಮಗಳ ಮುಂದೆ ಕಣ್ಣೀರು ಹಾಕಿದ ಅರವಿಂದ್ ಕೇಜ್ರಿವಾಲ್-Video

ಹೈಕಮಾಂಡ್‌ ಮೌನ ವಹಿಸಿದಷ್ಟು ಹಾನಿ ಅಧಿಕ (ನೇರ ನೋಟ)

ಕಾಂಗ್ರೆಸ್ ನಲ್ಲಿ ಕುರ್ಚಿ ಕದನ: ಹುಟ್ಟುಹಬ್ಬ ನೆಪದಲ್ಲಿ ಡಿಕೆಶಿ ಬೆಂಬಲಿಗ 40ಕ್ಕೂ ಹೆಚ್ಚು ಶಾಸಕರ ಸಭೆ

ತಮಿಳನಾಡು ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ: ಜಯಲಲಿತಾ ನೆಚ್ಚಿನ ಶಿಷ್ಯ- ಮಾಜಿ ಸಿಎಂ ಪನ್ನೀರ್‌ಸೆಲ್ವಂ DMK ಸೇರ್ಪಡೆ

T20 World Cup 2026: ಜಿಂಬಾಬ್ವೆ ವಿರುದ್ಧ ಗೆದ್ದ ಖುಷಿಯಲ್ಲಿದ್ದ ರಿಂಕು ಸಿಂಗ್‌ಗೆ ಆಘಾತ; ತಂದೆ ಖಾನ್ ಚಂದ್ ನಿಧನ!

SCROLL FOR NEXT