ಕೋರ್ಟ್ ತೀರ್ಪಿನ ನಂತರ ಕಣ್ಣೀರು ಹಾಕುತ್ತಾ ಕುಟುಂಬ ಸದಸ್ಯರೊಂದಿಗೆ ಸಂತಸಪಟ್ಟ ಅರವಿಂದ್ ಕೇಜ್ರಿವಾಲ್ 
ದೇಶ

'ನಾನು ಭ್ರಷ್ಟನಲ್ಲ': ಕೋರ್ಟ್ ತೀರ್ಪಿನ ಬಳಿಕ ಮಾಧ್ಯಮಗಳ ಮುಂದೆ ಕಣ್ಣೀರು ಹಾಕಿದ ಅರವಿಂದ್ ಕೇಜ್ರಿವಾಲ್; Video

ಅಬಕಾರಿ ನೀತಿ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್ ಮತ್ತು ಮನೀಶ್ ಸಿಸೋಡಿಯಾ ಅವರನ್ನು ದೆಹಲಿ ನ್ಯಾಯಾಲಯ ಶುಕ್ರವಾರ ಖುಲಾಸೆಗೊಳಿಸಿದೆ.

ದೆಹಲಿ ಅಬಕಾರಿ ನೀತಿ ಕೇಸಿನಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆಗೊಳಿಸಿದ ಕೆಲವೇ ಕ್ಷಣಗಳಲ್ಲಿ ಅರವಿಂದ್ ಕೇಜ್ರಿವಾಲ್ ಅವರು ಮಾಧ್ಯಮಗಳ ಮುಂದೆ ಭಾವುಕರಾಗಿ ಕಣ್ಣೀರು ಹಾಕಿದರು.

ಕಳೆದ ಕೆಲವು ವರ್ಷಗಳಿಂದ ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಬಿಜೆಪಿ ನಮ್ಮ ಮೇಲೆ ಆರೋಪ ಮಾಡುತ್ತಿದ್ದ ರೀತಿಯನ್ನು ನೀವೆಲ್ಲರೂ ನೋಡಿದ್ದೀರಿ, ಇಂದು ನ್ಯಾಯಾಲಯ ನಮ್ಮ ವಿರುದ್ಧದ ಎಲ್ಲಾ ಆರೋಪಗಳನ್ನು ತಳ್ಳಿ ಹಾಕಿದೆ. ನಾವು ಸದಾ ಸತ್ಯವೇ ಗೆಲ್ಲುತ್ತದೆ ಎಂದು ಹೇಳಿಕೊಂಡು ಬಂದಿದ್ದೆವು.

ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಆಮ್ ಆದ್ಮಿ ಪಕ್ಷದ ವಿರುದ್ಧ ಸಂಚು ರೂಪಿಸಿ, ಪಕ್ಷದ ಐವರು ಪ್ರಮುಖ ನಾಯಕರನ್ನು ಬಂಧಿಸಿದರು. ಅಧಿಕಾರದಲ್ಲಿದ್ದ ಮುಖ್ಯಮಂತ್ರಿಯನ್ನೇ ಬಂಧಿಸಲಾಯಿತು. ಪ್ರತಿಯೊಂದು ಚಾನೆಲ್‌ನಲ್ಲಿ ನಮ್ಮನ್ನು ಭ್ರಷ್ಟರೆಂದು ಕರೆಯಲಾಯಿತು. ಕೇಜ್ರಿವಾಲ್ ಭ್ರಷ್ಟನಲ್ಲ. ನಾನು ಸಂಪಾದಿಸಿರುವುದು ಪ್ರಾಮಾಣಿಕತೆ ಮಾತ್ರ. ಇಂದು ನ್ಯಾಯಾಲಯವೇ ಕೇಜ್ರಿವಾಲ್, ಮನೀಶ್ ಸಿಸೋಡಿಯಾ ಮತ್ತು ಎಎಪಿ ಪ್ರಾಮಾಣಿಕರು ಎಂದು ಹೇಳಿದೆ ಎಂದು ಕಣ್ಣೀರು ಹಾಕುತ್ತ ನುಡಿದರು.

ವಿಶೇಷ ನ್ಯಾಯಾಧೀಶ ಜಿತೇಂದ್ರ ಸಿಂಗ್ ಅವರು ಕೇಜ್ರಿವಾಲ್, ಸಿಸೋಡಿಯಾ ಮತ್ತು ಇತರ 21 ಜನರನ್ನು ಖುಲಾಸೆಗೊಳಿಸಿತು. ಆರೋಪಪಟ್ಟಿಯಲ್ಲಿ ಸಾಕ್ಷ್ಯಾಧಾರಗಳಿಲ್ಲದೆ ಹಲವು ಕೊರತೆಗಳಿವೆ ಎಂದು ನ್ಯಾಯಾಲಯ ಹೇಳಿದೆ.

ಹಿಂದಿನ ಆಪ್ ಸರ್ಕಾರದ ಈಗ ರದ್ದುಪಡಿಸಲಾದ ಅಬಕಾರಿ ನೀತಿಯ ಜಾರಿಗೆ ಸಂಬಂಧಿಸಿದ ಆರೋಪಿತ ಭ್ರಷ್ಟಾಚಾರದ ಕುರಿತು ಸಿಬಿಐ ತನಿಖೆ ನಡೆಸುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್