ರೈಲಿನ ಸಾಂದರ್ಭಿಕ ಚಿತ್ರ 
ದೇಶ

ಬೆಂಗಳೂರಿನಿಂದ ಮುಂಬೈಗೆ ಏಕಮುಖ ವಿಶೇಷ ರೈಲು ಸಂಚಾರ: ಇದು ಎಲ್ಲೆಲ್ಲಿ ನಿಲುಗಡೆಯಾಗಲಿದೆ?

ರೈಲು ಸಂಖ್ಯೆ 06541 ಎಸ್‌ಎಂವಿಟಿ ಬೆಂಗಳೂರು-ಎಲ್.ಟಿ.ಟಿ ಏಕಮುಖ ಕಾಯ್ದಿರಿಸದ ವಿಶೇಷ ಎಕ್ಸ್‌ಪ್ರೆಸ್ ರೈಲು ಭಾನುವಾರ (ಮಾರ್ಚ್ 1) ಸಂಜೆ 7 ಗಂಟೆಗೆ ಬೆಂಗಳೂರಿನ ಎಸ್‌ಎಂವಿಟಿ ನಿಲ್ದಾಣದಿಂದ ಹೊರಡಲಿದೆ.

ಬೆಂಗಳೂರು: ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಯಂತ್ರಿಸುವ ಸಲುವಾಗಿ, ನೈಋತ್ಯ ರೈಲ್ವೆಯು ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ನಿಲ್ದಾಣದಿಂದ ಮುಂಬೈನ ಲೋಕಮಾನ್ಯ ತಿಲಕ್ ಟರ್ಮಿನಸ್‌ಗೆ (LTT) ಮಾರ್ಚ್ 1 ರಂದು ಒನ್‌ ವೇ ವಿಶೇಷ ಎಕ್ಸ್‌ಪ್ರೆಸ್ ರೈಲು ಓಡಿಸಲಿದೆ.

ರೈಲು ಸಂಖ್ಯೆ 06541 ಎಸ್‌ಎಂವಿಟಿ ಬೆಂಗಳೂರು-ಎಲ್.ಟಿ.ಟಿ ಏಕಮುಖ ಕಾಯ್ದಿರಿಸದ ವಿಶೇಷ ಎಕ್ಸ್‌ಪ್ರೆಸ್ ರೈಲು ಭಾನುವಾರ (ಮಾರ್ಚ್ 1) ಸಂಜೆ 7 ಗಂಟೆಗೆ ಬೆಂಗಳೂರಿನ ಎಸ್‌ಎಂವಿಟಿ ನಿಲ್ದಾಣದಿಂದ ಹೊರಡಲಿದೆ. ಇದು ಮರುದಿನ (ಸೋಮವಾರ) ರಾತ್ರಿ 11.30 ಗಂಟೆಗೆ ಮುಂಬೈನ ಎಲ್‌ಟಿಟಿ ನಿಲ್ದಾಣವನ್ನು ತಲುಪಲಿದೆ.

ಈ ರೈಲು ಎಲ್ಲೆಲ್ಲಿ ನಿಲುಗಡೆಯಾಗಲಿದೆ?

ಈ ರೈಲು ಮಾರ್ಗಮಧ್ಯೆ ಚಿಕ್ಕಬಾಣಾವರ, ತುಮಕೂರು, ಅರಸೀಕೆರೆ, ಬೀರೂರು, ದಾವಣಗೆರೆ, ಹರಿಹರ, ಎಸ್ಎಂಎಂ ಹಾವೇರಿ, ಎಸ್ಎಸ್ಎಸ್ ಹುಬ್ಬಳ್ಳಿ, ಧಾರವಾಡ, ಲೋಂಡಾ, ಬೆಳಗಾವಿ, ಘಟಪ್ರಭಾ, ಮಿರಜ್, ಸಾಂಗ್ಲಿ, ಕರಾಡ್, ಸತಾರಾ, ಪುಣೆ, ಲೋನಾವಾಲಾ ಹಾಗೂ ಕಲ್ಯಾಣ್ ನಿಲ್ದಾಣಗಳಲ್ಲಿ ನಿಲುಗಡೆ ಹೊಂದಿರಲಿದೆ.

ಈ ರೈಲಿನಲ್ಲಿ ಒಟ್ಟು 19 ಬೋಗಿಗಳಿರಲಿವೆ. ಇವುಗಳಲ್ಲಿ 15 ಸಾಮಾನ್ಯ ದ್ವಿತೀಯ ದರ್ಜೆ ಬೋಗಿಗಳು ಹಾಗೂ 2 ಎಸ್‌ಎಲ್‌ಆರ್ ಬೋಗಿಗಳು ಇರಲಿವೆ. ವಿಶೇಷವೆಂದರೆ, ರೈಲಿನಲ್ಲಿರುವ 2 ಎಸಿ ಬೋಗಿಗಳು ಲಾಕ್ ಮಾಡಿದ (ಬೀಗ ಹಾಕಿದ) ಸ್ಥಿತಿಯಲ್ಲಿರಲಿದ್ದು, ಪ್ರಯಾಣಿಕರ ಬಳಕೆಗೆ ಲಭ್ಯವಿರುವುದಿಲ್ಲ.

ಇದು ಸಂಪೂರ್ಣ ಕಾಯ್ದಿರಿಸದ (Unreserved) ರೈಲಾಗಿದ್ದು, ಪ್ರಯಾಣಿಕರು 'ರೈಲ್ಒನ್' ಆ್ಯಪ್ ಮೂಲಕ ಅಥವಾ ನಿಲ್ದಾಣದ ಕೌಂಟರ್‌ಗಳಲ್ಲಿ ಟಿಕೆಟ್ ಪಡೆದು ಪ್ರಯಾಣಿಸಬಹುದು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoorನಲ್ಲಿ ಧ್ವಂಸವಾಗಿದ್ದ ಜೈಶ್ ನೆಲೆ ಮರುನಿರ್ಮಾಣ! ಪಾಕ್‌ ಸರ್ಕಾರದಿಂದ 25 ಕೋಟಿ ನೆರವು!

Onion Price: ದಿಢೀರ್ ಈರುಳ್ಳಿ ಬೆಲೆ ಏರಿಕೆ; ಸೆಪ್ಟೆಂಬರ್-ಅಕ್ಟೋಬರ್‌ನಲ್ಲಿ ಮತ್ತಷ್ಟು ದುಬಾರಿ ಸಾಧ್ಯತೆ, ದರ ಏರಿಕೆಗೆ ಕಾರಣವೇನು?

ಮಹಿಳಾ ಮೀಸಲಾತಿ ಮಸೂದೆ ಬೆಂಬಲಿಸಿ, ಕಾಂಗ್ರೆಸ್ ಕಚೇರಿಯಲ್ಲಿ ವಂದೇ ಪೂರ್ತಿಯಾಗಿ ಹಾಡಿ ತೋರಿಸಿ: ರಾಹುಲ್ ಗಾಂಧಿಗೆ ಸ್ಮೃತಿ ಇರಾನಿ ಸವಾಲು

ಮದ್ಯ ಸಾಗಣೆ ಹಗರಣ: ಆಂಧ್ರಪ್ರದೇಶದ ಮಾಜಿ ಸಚಿವರ ಬಂಧಿಸಿದ ED

'3 ರಾಷ್ಟ್ರಗಳಲ್ಲಿ ಭಾರತವನ್ನು ಪ್ರತಿನಿಧಿಸಿದ್ದೇನೆ': SIR ಪಟ್ಟಿಯಲ್ಲಿ ಹೆಸರು ನಾಪತ್ತೆ ಬಗ್ಗೆ ಮಾಜಿ ರಾಯಭಾರಿ ಅಸಮಾಧಾನ!