ಸಾಂದರ್ಭಿಕ ಚಿತ್ರ 
ದೇಶ

ರಾಜಸ್ಥಾನ ಗಡಿಯಲ್ಲಿ ಪಾಕಿಸ್ತಾನಿ ನುಸುಳುಕೋರನ ಬಂಧನ

ನಾಚ್ನಾ ಮತ್ತು ನೋಖ್ ಸೆಕ್ಟರ್‌ಗಳಿಗೆ ಹೊಂದಿಕೊಂಡಿರುವ ಪ್ರದೇಶದಲ್ಲಿ ಈ ಒಳ ನುಸುಳುಕೋರನನ್ನು ಬಂಧಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಜೈಸಲ್ಮೇರ್: ರಾಜಸ್ಥಾನದ ಜೈಸಲ್ಮೇರ್ ಜಿಲ್ಲೆಯ ಗಡಿಯ ಮೂಲಕ ಭಾರತಕ್ಕೆ ನುಸುಳಿದ್ದ ಪಾಕಿಸ್ತಾನಿ ಪ್ರಜೆಯನ್ನು ಗಡಿ ಭದ್ರತಾ ಪಡೆ(ಬಿಎಸ್‌ಎಫ್) ಗುರುವಾರ ಬಂಧಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನಾಚ್ನಾ ಮತ್ತು ನೋಖ್ ಸೆಕ್ಟರ್‌ಗಳಿಗೆ ಹೊಂದಿಕೊಂಡಿರುವ ಪ್ರದೇಶದಲ್ಲಿ ಈ ಒಳ ನುಸುಳುಕೋರನನ್ನು ಬಂಧಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಪ್ರಾಥಮಿಕ ವಿಚಾರಣೆಯಲ್ಲಿ ನುಸುಳುಕೋರ ಮಾನಸಿಕವಾಗಿ ಅಸ್ವಸ್ಥನಾಗಿದ್ದಾನೆ ಎಂದು ಶಂಕಿಸಲಾಗಿದೆ. ಆದಾಗ್ಯೂ ಜಂಟಿ ವಿಚಾರಣಾ ಕೇಂದ್ರ(ಜೆಐಸಿ) ವಿವರವಾದ ವೈದ್ಯಕೀಯ ಪರೀಕ್ಷೆ ಮತ್ತು ವಿಚಾರಣೆಯ ನಂತರ ಆತನ ನಿಖರವಾದ ಸ್ಥಿತಿ ಮತ್ತು ಹಿನ್ನೆಲೆಯನ್ನು ದೃಢೀಕರಿಸಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಾಥಮಿಕ ವಿಚಾರಣೆಯ ಸಮಯದಲ್ಲಿ, ಆ ವ್ಯಕ್ತಿ ತನ್ನನ್ನು ತಾನು ರಾಣಾ ಮೊಹಮ್ಮದ್ ಅಸ್ಲಾಂ ಅವರ ಪುತ್ರ ಮತ್ತು ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಸರ್ಗೋಧಾ ಜಿಲ್ಲೆಯ ನಿವಾಸಿ ಇಶ್ರತ್(35) ಎಂದು ಹೇಳಿಕೊಂಡಿದ್ದಾನೆ.

ಆತನ ಬಳಿ ಪಾಕಿಸ್ತಾನಿ ಕರೆನ್ಸಿ ನೋಟುಗಳು, ಚಾಕು ಮತ್ತು ಇತರ ಕೆಲವು ವಸ್ತುಗಳು ಪತ್ತೆಯಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಹೆಚ್ಚಿನ ತನಿಖೆಗಾಗಿ ಬಿಎಸ್‌ಎಫ್ ಆತನನ್ನು ನೋಖ್ ಪೊಲೀಸ್ ಠಾಣೆಗೆ ಹಸ್ತಾಂತರಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

'30 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ,ಇನ್ನು ಸಾಧ್ಯವಿಲ್ಲ': ನಿವೃತ್ತಿಯ ಸುಳಿವು ನೀಡಿದ ಕೇಂದ್ರ ಸಚಿವ ನಿತಿನ್ ಗಡ್ಕರಿ; ಹೊಸ ಪೀಳಿಗೆಗೆ ದಾರಿ ಮಾಡಿಕೊಡುವ ಇಂಗಿತ!

2013ರ ಲೈಂಗಿಕ ದೌರ್ಜನ್ಯ ಪ್ರಕರಣ: Tehelka ಮಾಜಿ ಸಂಪಾದಕ ತರುಣ್ ತೇಜ್‌ಪಾಲ್‌ಗೆ ಸುಪ್ರೀಂ ಕೋರ್ಟ್‌ ಶಾಕ್‌; 2 ವಾರಗಳಲ್ಲಿ ಶರಣಾಗುವಂತೆ ಖಡಕ್ ಸೂಚನೆ..!

ವಿಮಾನ ಸುರಕ್ಷತೆಯಲ್ಲಿ ರಾಜಿಯಿಲ್ಲ: ಪೈಲಟ್‌ಗಳ ಡ್ರಗ್‌ ಟೆಸ್ಟ್‌ ನಿಯಮದಲ್ಲಿ ಮಹತ್ವದ ಬದಲಾವಣೆ, ವರ್ಷವಿಡೀ ಯಾದೃಚ್ಛಿಕ ತಪಾಸಣೆಗೆ ಕೇಂದ್ರ ಸರ್ಕಾರ ಮುಂದು..!