ಅವ್ಯಾನ್  
ದೇಶ

ಐದು ತಿಂಗಳ ಮಗುವಿನ ಜೀವತೆಗೆದ ಹನಿ ನೀರು: ವಿವಾಹವಾಗಿ 10 ವರ್ಷದ ನಂತರ ಜನಿಸಿದ್ದ ಕಂದಮ್ಮ!

10 ವರ್ಷಗಳ ನಂತರ ದೇವರು ನಮಗೆ ಖುಷಿ ನೀಡಿದ್ದನು. ಬಳಿಕ, ದೇವರೇ ಅದನ್ನು ಕಸಿದಿದ್ದಾನೆ ಎಂದು ಇಂದೋರ್‌ನ ಮನೆಯ ಮೂಲೆಯೊಂದರಲ್ಲಿ ಕುಳಿತಿದ್ದ ವೃದ್ಧೆಯೊಬ್ಬರು ನೋವಿನಿಂದ ಹೇಳುತ್ತಿದ್ದರು.

ಭೋಪಾಲ್: ಮಗುವಿಗೆ ಕುಡಿಸುವ ಹಾಲಿಗೆ ಬೆರೆಸಿದ್ದ ನಲ್ಲಿ ನೀರು ಮಗುವಿನ ಜೀವವನ್ನೇ ತೆಗೆದಿರುವ ಘಟನೆ ಇಂದೋರ್‌ನಲ್ಲಿ ನಡೆದಿದೆ. ಕಲುಷಿತ ನೀರು ಸೇವಿಸಿ ಐದೂವರೆ ತಿಂಗಳ ಅಯಾನ್ ಎಂಬ ಮಗು ಸಹ ಸಾವನ್ನಪ್ಪಿದೆ.

ಅವ್ಯಾನ್ ಅವರ ತಂದೆ ಸುನಿಲ್ ಸಾಹು ಖಾಸಗಿ ಕೊರಿಯರ್ ಕಂಪನಿಯಲ್ಲಿ ಕೆಲಸ ಮಾಡುತ್ತಾರೆ. ವರ್ಷಗಳ ಪ್ರಾರ್ಥನೆ ಮತ್ತು ಕಾಯುವಿಕೆಯ ನಂತರ ಅವರಿಗೆ ಜುಲೈನಲ್ಲಿ ಮಗು ಜನಿಸಿತ್ತು.

10 ವರ್ಷಗಳ ನಂತರ ದೇವರು ನಮಗೆ ಖುಷಿ ನೀಡಿದ್ದನು. ಬಳಿಕ, ದೇವರೇ ಅದನ್ನು ಕಸಿದಿದ್ದಾನೆ ಎಂದು ಇಂದೋರ್‌ನ ಮನೆಯ ಮೂಲೆಯೊಂದರಲ್ಲಿ ಕುಳಿತಿದ್ದ ವೃದ್ಧೆಯೊಬ್ಬರು ನೋವಿನಿಂದ ಹೇಳುತ್ತಿದ್ದರು.

ನೋವು ತೋಡಿಕೊಂಡ ವೃದ್ಧೆಯ ಮಗನಿಗೆ ಮದುವೆಯಾಗಿ 10 ವರ್ಷಗಳ ಕಾಲ ಮಕ್ಕಳಿರಲಿಲ್ಲ. ಇತ್ತೀಚೆಗೆ ಅವರ ಸೊಸೆ ಗಂಡು ಮಗುವಿಗೆ ಜನ್ಮ ನೀಡಿದ್ದರು. ಅದಕ್ಕೆ ಅವ್ಯಾನ್ ಎಂದು ಹೆಸರಿಟ್ಟಿದ್ದರು. ತಾಯಿಯಿಂದ ಎದೆಹಾಲು ಬರದ ಕಾರಣ ಪ್ಯಾಕೇಟ್ ಹಾಲನ್ನು ಕೊಡಲು ವೈದ್ಯರು ಸಲಹೆ ನೀಡಿದ್ದರು. ಅದರಂತೆ, ಗಟ್ಟಿ ಹಾಲಿಗೆ ತಾವು ಸದಾ ಬಳಸುತ್ತಿದ್ದ ನಲ್ಲಿ ನೀರನ್ನೇ ಬೆರೆಸಿ ಮಗುವಿಗೆ ನೀಡಿದ್ದರು. ದುರಾದೃಷ್ಟವಶಾತ್, ಕಲುಷಿತಗೊಂಡಿದ್ದ ನೀರು ವಿಷವಾಗಿ ಪರಿಣಮಿಸಿದ್ದು, ಮಗು ಮೃತಪಟ್ಟಿದೆ.

ಮಗು ಆರೋಗ್ಯವಾಗಿತ್ತು. ಯಾವುದೇ ಸಮಸ್ಯೆ ಇರಲಿಲ್ಲ. ಎರಡು ದಿನಗಳ ಹಿಂದೆ ಅಯಾನ್‌ಗೆ ಜ್ವರ, ಭೇದಿ ಕಾಣಿಸಿಕೊಂಡಿತು. ಬಳಿಕ, ಅವನನ್ನು ಆಸ್ಪತ್ರೆಗೆ ಕರೆದೊಯ್ದೆವು. ವೈದ್ಯರು ಔಷಧ ನೀಡಿದ್ದರು. ಆದರೂ ಪರಿಸ್ಥಿತಿ ಸುಧಾರಿಸಿರಲಿಲ್ಲ. ಭಾನುವಾರ ರಾತ್ರಿ ಮಗುವಿನ ಸ್ಥಿತಿ ಗಂಭೀರವಾಯಿತು. ಸೋಮವಾರ ಆಸ್ಪತ್ರೆಗೆ ಕರೆದೊಯ್ಯುವಾಗ ಮೃತಪಟ್ಟಿತು ಎಂದು ಹೇಳಿದ್ದಾರೆ.

ಕಲುಷಿತ ನೀರಿನಿಂದಲೇ ಮಗು ಮೃತಪಟ್ಟಿದೆ ಎಂದಿರುವ ಸುನಿಲ್, ನೀರು ಕಲುಷಿತಗೊಂಡಿದೆ ಎಂದು ಯಾರೊಬ್ಬರೂ ನಮಗೆ ತಿಳಿಸಲಿಲ್ಲ. ನೆರೆಹೊರೆಯವರೂ ಇದೇ ನೀರು ಬಳಸುತ್ತಿದ್ದು, ಯಾವುದೇ ಎಚ್ಚರಿಕೆ ನೀಡಿಲ್ಲ ಎಂದು ಆಕ್ರೋಶ ಹೊರಹಾಕಿದ್ದಾರೆ.

ನಾವು ಬಡವರು, ನಮ್ಮ ಮಗ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾನೆ. ಈ ದುರಂತದ ಬಗ್ಗೆ ನಾವು ಯಾರನ್ನೂ ದೂರುವುದಿಲ್ಲ. ದೇವರು 10 ವರ್ಷಗಳ ನಂತರ ನಮಗೆ ಖುಷಿ ನೀಡಿದ್ದ. ಈಗ ಅವನೇ ಹಿಂಪಡೆದಿದ್ದಾನೆ ಎಂದು ಸುನಿಲ್ ತಾಯಿ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Ballari banner row: ಯಾರ ಗನ್ ನಿಂದ ಗುಂಡು ಹಾರಿತ್ತು ಎಂದು ತನಿಖೆ ಮಾಡಲು ಹೇಳಿದ್ದೇನೆ: ಸಿಎಂ ಸಿದ್ದರಾಮಯ್ಯ

'ಮುಲ್ಲಾಗಳು ತೊಲಗಲಿ': 3 ವರ್ಷದ ಬಳಿಕ ಇರಾನ್‌ನಲ್ಲಿ ಮತ್ತೆ ಬೃಹತ್ ಪ್ರತಿಭಟನೆ; ಬೀದಿಗಿಳಿದ Gen Zಗಳು, ಗುಂಡೇಟಿಗೆ 7 ಮಂದಿ ಬಲಿ!

Ballari clash: ಜನಾರ್ಧನ ರೆಡ್ಡಿ ಗುರಿಯಾಗಿಸಿಯೇ ಫೈರಿಂಗ್‌, Petrol bomb ಎಸೆಯುವ ಪ್ರಯತ್ನ ಕೂಡ ನಡೆದಿದೆ: ಶ್ರೀರಾಮುಲು ಗಂಭೀರ ಆರೋಪ

ಚೆನ್ನೈನಲ್ಲಿಂದು 3ನೇ ಆವೃತ್ತಿಯ ರಾಮನಾಥ್ ಗೋಯೆಂಕಾ ಸಾಹಿತ್ಯ ಸಮ್ಮಾನ್ ಪ್ರಶಸ್ತಿ ಪ್ರದಾನ ಸಮಾರಂಭ

ಇಂದೋರ್‌ನಲ್ಲಿ ಕಲುಷಿತ ನೀರು ಸೇವನೆಯಿಂದ ಅತಿಸಾರದಿಂದ ಬಳಲುತ್ತಿರುವ ಮಂದಿ: ಮೃತರ ಸಂಖ್ಯೆ 10ಕ್ಕೆ ಏರಿಕೆ

SCROLL FOR NEXT