ನಿತೀಶ್ ಕುಮಾರ್ 
ದೇಶ

ಬಿಹಾರ: ವೃದ್ಧರಿಗೆ 'ಮನೆ ಬಾಗಿಲಿಗೆ ಆರೋಗ್ಯ ಸೇವೆ'; ನಿತೀಶ್ ಸರ್ಕಾರ ಘೋಷಣೆ

ಸಾಥ್ ನಿಶ್ಚಯ್(ಏಳು ನಿರ್ಣಯಗಳು) ಅಡಿಯಲ್ಲಿ ಬರುವ ಹಿರಿಯ ನಾಗರಿಕರ ಆರೋಗ್ಯ ಸೇವೆಯನ್ನು ಆದ್ಯತೆ ಆಧಾರದ ಮೇಲೆ ಜಾರಿ ಮಾಡುವಂತೆ ಆರೋಗ್ಯ ಇಲಾಖೆಗೆ ಸೂಚಿಸಿದ್ದಾರೆ.

ಪಾಟ್ನಾ: ಹಿರಿಯ ನಾಗರಿಕರ ಮನೆ ಬಾಗಿಲಿಗೆ ಆರೋಗ್ಯ ಸೇವೆ ಕಲ್ಪಿಸುವ ಯೋಜನೆಯನ್ನು ಜಾರಿಗೊಳಿಸಲು ಆದೇಶಿಸಿರುವುದಾಗಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಶನಿವಾರ ಹೇಳಿದ್ದಾರೆ.

ಈ ಸಂಬಂಧ ತಮ್ಮ ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ನಿತೀಶ್, ಅಗತ್ಯವಿರುವ ಹಿರಿಯ ನಾಗರಿಕರಿಗೆ ಶುಶ್ರೂಷಕರ ನೆರವು, ಮನೆಯಲ್ಲೇ ರಕ್ತದೊತ್ತಡ, ಇಸಿಜಿ ಹಾಗೂ ಇತರ ಪರೀಕ್ಷೆ ಹಾಗೂ ಇತರ ರೀತಿಯ ವೈದ್ಯಕೀಯ ನೆರವು ಸೇರಿದಂತೆ ಅಗತ್ಯ ಆರೋಗ್ಯ ಸೇವೆಗಳು ಅಗತ್ಯವಿರುವ ಸಮಯದಲ್ಲಿ ಅವರ ಮನೆಗಳಲ್ಲೇ ಸಿಗುವಂತೆ ನೋಡಿಕೊಳ್ಳುವುದು ನಮ್ಮ ಪ್ರಯತ್ನವಾಗಿದೆ ಎಂದು ತಿಳಿಸಿದ್ದಾರೆ.

ಸಾಥ್ ನಿಶ್ಚಯ್(ಏಳು ನಿರ್ಣಯಗಳು) ಅಡಿಯಲ್ಲಿ ಬರುವ ಹಿರಿಯ ನಾಗರಿಕರ ಆರೋಗ್ಯ ಸೇವೆಯನ್ನು ಆದ್ಯತೆ ಆಧಾರದ ಮೇಲೆ ಜಾರಿ ಮಾಡುವಂತೆ ಆರೋಗ್ಯ ಇಲಾಖೆಗೆ ಸೂಚಿಸಿದ್ದಾರೆ. ಆರೋಗ್ಯ ಸಂಬಂಧಿತ ಸೌಲಭ್ಯಗಳು ರಾಜ್ಯದ ಹಿರಿಯ ನಾಗರಿಕರಿಗೆ ಅವರ ಮನೆಗಳಲ್ಲಿ ಲಭ್ಯವಾಗುವಂತೆ ನೋಡಿಕೊಳ್ಳಲು ತ್ವರಿತವಾಗಿ ಕಾರ್ಯೋನ್ಮುಖವಾಗುವಂತೆ ಆರೋಗ್ಯ ಇಲಾಖೆಗೆ ನಿರ್ದೇಶನ ನೀಡಲಾಗಿದೆ ಎಂದು ಅವರು ಬರೆದಿದ್ದಾರೆ.

ರಾಜ್ಯದಲ್ಲಿ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ, ನಾವು ಸಮಾಜದ ಎಲ್ಲ ವರ್ಗಗಳ ಜನರ ಉನ್ನತಿಗಾಗಿ ಮತ್ತು ನ್ಯಾಯಯುತ ಅಭಿವೃದ್ಧಿಯ ತತ್ವದಿಂದ ಮಾರ್ಗದರ್ಶಿಸಲ್ಪಟ್ಟ ಪ್ರತಿಯೊಂದು ವಲಯದ ಅಭಿವೃದ್ಧಿಗಾಗಿ ಕೆಲಸ ಮಾಡಿದ್ದೇವೆ. ನಾವು ಇಡೀ ಬಿಹಾರವನ್ನು ನಮ್ಮ ಕುಟುಂಬವೆಂದು ಪರಿಗಣಿಸಿದ್ದೇವೆ ಎಂದಿದ್ದಾರೆ.

ಬಿಹಾರವನ್ನು ಅಭಿವೃದ್ಧಿ ಹೊಂದಿದ ರಾಜ್ಯವನ್ನಾಗಿ ಮಾಡಲು ರಾಜ್ಯ ಸರ್ಕಾರ 'ಸಾತ್ ನಿಶ್ಚಯ್ -3' ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ ಎಂದು ಅವರು ಹೇಳಿದ್ದಾರೆ.

ನವೆಂಬರ್ 24, 2005 ರಂದು ರಾಜ್ಯದಲ್ಲಿ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ, ನಾವು ಸಮಾಜದ ಎಲ್ಲಾ ವರ್ಗಗಳ ಜನರ ಉನ್ನತಿಗಾಗಿ ಮತ್ತು ಪ್ರತಿಯೊಂದು ವಲಯದ ಅಭಿವೃದ್ಧಿಗಾಗಿ, ನ್ಯಾಯದೊಂದಿಗೆ ಅಭಿವೃದ್ಧಿಯ ತತ್ವದಿಂದ ನಡೆಯುತ್ತಿದ್ದೇವೆ. ನಾವು ಇಡೀ ಬಿಹಾರವನ್ನು ನಮ್ಮ ಕುಟುಂಬವೆಂದು ಪರಿಗಣಿಸಿದ್ದೇವೆ ಮತ್ತು ಪ್ರತಿಯೊಬ್ಬರ ಗೌರವವನ್ನು ಸಂಪೂರ್ಣವಾಗಿ ನೋಡಿಕೊಂಡಿದ್ದೇವೆ" ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ವಿಶ್ವಸಂಸ್ಥೆ ಸುಧಾರಣೆ ವಿರೋಧಿಸುವವರಿಗೆ ಜಾಗತಿಕ ವೇದಿಕೆ ಬಗ್ಗೆ ಕಾಳಜಿಯಿಲ್ಲ, ಕೇವಲ ಸ್ವಾರ್ಥಕ್ಕೆ ಬಳಕೆ: ಎಸ್. ಜೈಶಂಕರ್ ವಾಗ್ದಾಳಿ

ಸಿಕ್ಕಿಂನಲ್ಲಿ ವರುಣನ ಆರ್ಭಟ: Rimbi ಗ್ರಾಮದಲ್ಲಿ ಭೀಕರ ಭೂಕುಸಿತ; ಹಲವು ಮನೆಗಳು, ಸರ್ಕಾರಿ ವಸತಿ ಗೃಹಗಳು ಧ್ವಂಸ..!

Delhi SIR: ಕ್ಷೇತ್ರ ಪರಿಶೀಲನೆ ಬಳಿಕ ಎಲ್.ಕೆ. ಅಡ್ವಾಣಿ, ಜಗದೀಪ್ ಧನಕರ್, ಜೈಶಂಕರ್ ಸೇರಿ ಹಲವು ಗಣ್ಯರ Voter ID ಗೊಂದಲಕ್ಕೆ ತೆರೆ!

ಮಧ್ಯಪ್ರದೇಶ: ಕಿರಿಯ ವಿದ್ಯಾರ್ಥಿಗೆ ಬೆಲ್ಟ್‌ನಿಂದ ಹೊಡೆತ; ಕೈ ಸುಟ್ಟು ದೌರ್ಜನ್ಯ!

ಸಂಘರ್ಷ ಅಂತ್ಯಕ್ಕೆ ಇರಾನ್ 7 ದಿನಗಳ ಯೋಜನೆ ಪ್ರಸ್ತಾಪ: ಹಾರ್ಮುಜ್ ಜಲಸಂಧಿ ಮತ್ತೆ ಮುಕ್ತ