ನಡುಬೀದಿಯಲ್ಲಿ ವ್ಯಕ್ತಿ ಮೇಲೆ ಹಲ್ಲೆ 
ದೇಶ

ದೆಹಲಿ: ನಡು ಬೀದಿಯಲ್ಲಿ ವ್ಯಕ್ತಿ ಮೇಲೆ ಹಲ್ಲೆ, ಆತನ ಪತ್ನಿಗೆ ಲೈಂಗಿಕ ಕಿರುಕುಳ! Video

ಪೂರ್ವ ದೆಹಲಿಯ ಲಕ್ಷ್ಮಿ ನಗರದಲ್ಲಿ ಈ ಘಟನೆ ನಡೆದಿರುವುದಾಗಿ ಪೊಲೀಸರು ಸೋಮವಾರ ತಿಳಿಸಿದ್ದಾರೆ. ಆರೋಪಿಯೊಬ್ಬನನ್ನು ಬಂಧಿಸಿದ್ದು, ಇತರರು ತಲೆಮರೆಸಿಕೊಂಡಿದ್ದಾರೆ.

ನವದೆಹಲಿ: ಜಿಮ್ ಮಾಲೀಕತ್ವ ವಿಚಾರವಾಗಿ ಗಲಾಟೆಯಿಂದ ವ್ಯಕ್ತಿಯೊಬ್ಬನಿಗೆ ಹಲ್ಲೆ ಮಾಡಿ, ಆತನ ಹೆಂಡತಿಗೆ ಲೈಂಗಿಕ ಕಿರುಕುಳ ನೀಡಿ, ಮಕ್ಕಳನ್ನು ಬೀದಿಯಲ್ಲಿ ವಿವಸ್ತ್ರಗೊಳಿಸಿರುವ ಘಟನೆ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ನಡೆದಿದೆ.

ಪೂರ್ವ ದೆಹಲಿಯ ಲಕ್ಷ್ಮಿ ನಗರದಲ್ಲಿ ಈ ಘಟನೆ ನಡೆದಿರುವುದಾಗಿ ಪೊಲೀಸರು ಸೋಮವಾರ ತಿಳಿಸಿದ್ದಾರೆ. ಆರೋಪಿಯೊಬ್ಬನನ್ನು ಬಂಧಿಸಿದ್ದು, ಇತರರು ತಲೆಮರೆಸಿಕೊಂಡಿದ್ದಾರೆ.

ಜನವರಿ 2 ರಂದು ಸುದ್ದಿ ತಿಳಿದು ಘಟನಾ ಸ್ಥಳಕ್ಕೆ ಧಾವಿಸಿ ನೋಡಿದಾಗ ದೂರುದಾರರು ಹಾಗೂ ಆತನ ಕುಟುಂಬ ಸದಸ್ಯರು ಗಾಯಗೊಂಡಿರುವುದನ್ನು ನೋಡಿದ್ದೇವು. ಬಳಿಕ ಅವರನ್ನು ಚಿಕಿತ್ಸೆಗಾಗಿ ಹೆಡಗೇವಾರ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಸಂತ್ರಸ್ತರ ಒಡೆತನದ ಜಿಮ್‌ನಲ್ಲಿ ಕೇರ್‌ಟೇಕರ್ ಆಗಿ ಕೆಲಸ ಮಾಡುತ್ತಿದ್ದ ಸತೀಶ್ ಎನ್ನಲಾದ ಆರೋಪಿಯನ್ನು ಬಂಧಿಸಲಾಗಿದೆ.

ಇತರರು ತಲೆಮರೆಸಿಕೊಂಡಿದ್ದಾರೆ. ಸತೀಶ್ ದಂಪತಿಗೆ ಮೋಸ ಮಾಡಿ ಜಿಮ್‌ನ್ನು ತನ್ನ ವಶಕ್ಕೆ ತೆಗೆದುಕೊಂಡ ನಂತರ ಗಲಾಟೆ ನಡೆದಿದೆ ಎಂದು ಪೊಲೀಸರು ತಿಳಿಸಿದರು.

ಹಲ್ಲೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಅದರಲ್ಲಿ ನಾಲ್ವರು ಒಬ್ಬ ವ್ಯಕ್ತಿಯನ್ನು ಹೊಡೆಯುವುದು, ಬಟ್ಟೆ ಬಿಚ್ಚಿ ಕಪಾಳಕ್ಕೆ ಹೊಡೆಯುವ ದೃಶ್ಯವಿದೆ. ಅವರಲ್ಲಿ ಒಬ್ಬ ವ್ಯಕ್ತಿ ಶೂನಲ್ಲಿ ಹೊಡೆಯುತ್ತಿದ್ದರೆ ಅನೇಕ ಮಂದಿ ಘಟನೆಯನ್ನು ನೋಡುತ್ತಿದ್ದರೂ ಏನು ಮಾಡುತ್ತಿಲ್ಲ. ಸ್ಥಳಕ್ಕೆ ಬರುವ ಇಬ್ಬರು ಪೊಲೀಸರು, ಆರೋಪಿಗಳನ್ನು ಸ್ಥಳದಲ್ಲಿದ್ದರೂ ಸಂತ್ರಸ್ತನ ಭುಜಕ್ಕೆ ಕೈ ಹಾಕಿ ಹಿಡಿಯುವ ದೃಶ್ಯ ವಿಡಿಯೋದಲ್ಲಿದೆ.

ವೈದ್ಯಕೀಯ ಚಿಕಿತ್ಸೆ ಬಳಿಕ ದೂರುದಾರರು ಹಾಗೂ ಅವರ ಕುಟುಂಬ ಸದಸ್ಯರು ಪೊಲೀಸ್ ಠಾಣೆಗೆ ಭೇಟಿ ನೀಡಿದ್ದು ಹೇಳಿಕೆ ನೀಡಿದ್ದಾರೆ.

ಪೊಲೀಸರು ಸಿಸಿಟಿವಿ ದೃಶ್ಯಾವಳಿ ಪರಿಶೀಲಿಸಿ, ಘಟನೆಯ ಸತ್ಯಾಸತ್ಯತೆ ಪರಿಶೀಲಿಸಿದ್ದು, ಆರೋಪಿಗಳ ಪಾತ್ರದ ಕುರಿತು ತಿಳಿದಿದ್ದಾರೆ. ಈ ಸಂಬಂಧ ಆರೋಪಿಯನ್ನು ಬಂಧಿಸಿದ್ದು, ಇತರ ಆರೋಪಿಗಳ ಹುಡುಕಾಟ ನಡೆಸಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

ಮತ ಬೇಟೆ ತಡೆಯಲು 'ಕೈ' ಕಲಿಗಳ ಮಾಸ್ಟರ್ ಪ್ಲ್ಯಾನ್: ಸಿಎಂ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಮಹತ್ವದ ಸಭೆ, ಬೂತ್ ಮಟ್ಟದಲ್ಲಿ ಸಮರಕ್ಕೆ ಸಜ್ಜು..!

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

SIR ಗೊಂದಲ: ಅಕ್ರಮ ಬಯಲಾಗುವ ಭೀತಿಯಿಂದಲೇ ರಾಜಪಾಲರ ಬಳಿ ಓಡಿದ್ದಾರೆ: NDA ನಾಯಕರ ವಿರುದ್ಧ ಡಿಕೆ.ಶಿವಕುಮಾರ್ ವಾಗ್ದಾಳಿ

ಕೋಟಿ ಕೋಟಿ ಲೂಟಿ: ಅರಣ್ಯ ಇಲಾಖೆ ಮಾಜಿ ಅಧಿಕಾರಿಗೆ ಕೋರ್ಟ್ ಶಾಕ್; ಬರೋಬ್ಬರಿ 1.38 ಕೋಟಿ ದಂಡ, 3 ವರ್ಷ ಜೈಲು ಶಿಕ್ಷೆ..!