ಪ್ರಧಾನಿ ಮೋದಿ, ಡೊನಾಲ್ಡ್ ಟ್ರಂಪ್ 
ದೇಶ

'ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ವ್ಯಾಪಾರ ಒಪ್ಪಂದ ಹಳ್ಳ ಹಿಡಿದಿದೆ': ಲುಟ್ನಿಕ್ ಹೇಳಿಕೆ ತಳ್ಳಿಹಾಕಿದ MEA, ಹೇಳಿದ್ದೇನು?

ಲುಟ್ನಿಕ್ ಅವರ ಹೇಳಿಕೆಗಳು ನಿಖರವಾಗಿಲ್ಲ. ಪ್ರಧಾನಿ ನರೇಂದ್ರ ಮೋದಿ 2025 ರಲ್ಲಿ ಎಂಟು ಬಾರಿ ಅಧ್ಯಕ್ಷ ಟ್ರಂಪ್ ಅವರೊಂದಿಗೆ ಫೋನ್ ಮೂಲಕ ಮಾತನಾಡಿದ್ದಾರೆ ಎಂದು MEA ವಕ್ತಾರ ರಣಧೀರ್ ಜೈಸ್ವಾಲ್ ಹೇಳಿದ್ದಾರೆ.

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂಬ ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್ ಹೇಳಿಕೆಯನ್ನು ವಿದೇಶಾಂಗ ವ್ಯವಹಾರಗಳ ಸಚಿವಾಲಯ (MEA) ತಳ್ಳಿಹಾಕಿದೆ. ಅಲ್ಲದೇ ರಷ್ಯಾದಿಂದ ಇಂಧನ ಖರೀದಿಸುವ ರಾಷ್ಟ್ರಗಳ ಮೇಲೆ ಶೇ. 500 ರಷ್ಟು ಸುಂಕ ವಿಧಿಸುವ US ಶಾಸನವನ್ನು ಮೇಲ್ವಿಚಾರಣೆ ಮಾಡುತ್ತಿದೆ ಎಂದು ಸಚಿವಾಲಯ ಹೇಳಿದೆ.

ಲುಟ್ನಿಕ್ ಅವರ ಹೇಳಿಕೆಗಳು ನಿಖರವಾಗಿಲ್ಲ. ಪ್ರಧಾನಿ ನರೇಂದ್ರ ಮೋದಿ 2025 ರಲ್ಲಿ ಎಂಟು ಬಾರಿ ಅಧ್ಯಕ್ಷ ಟ್ರಂಪ್ ಅವರೊಂದಿಗೆ ಫೋನ್ ಮೂಲಕ ಮಾತನಾಡಿದ್ದಾರೆ ಎಂದು MEA ವಕ್ತಾರ ರಣಧೀರ್ ಜೈಸ್ವಾಲ್ ತಿಳಿಸಿದ್ದಾರೆ.

ಗುರುವಾರ ಪಾಡ್‌ಕ್ಯಾಸ್ಟ್‌ನಲ್ಲಿ ಮಾತನಾಡಿದ ಲುಟ್ನಿಕ್, ವ್ಯಾಪಾರ ಮಾತುಕತೆ ಒಪ್ಪಂದವನ್ನು ಮುಕ್ತಾಯಗೊಳಿಸಲು ಅಧ್ಯಕ್ಷರಿಗೆ ಕರೆ ಮಾಡುವಂತೆ ಮೋದಿ ಅವರನ್ನು ಕೇಳಿಕೊಂಡಿದ್ದೇನೆ. ಆದಾಗ್ಯೂ, ಭಾರತ ಒಪ್ಪಂದವನ್ನು ಮುಕ್ತಾಯಗೊಳಿಸಲು ಮನಸ್ಸು ಮಾಡಿಲ್ಲ. ಆದ್ದರಿಂದ ಮೋದಿ ಕರೆ ಮಾಡಲಿಲ್ಲ ಎಂದು ಅವರು ಹೇಳಿದರು.

ನಾವು ಇಂಡೋನೇಷ್ಯಾ, ಫಿಲಿಪೈನ್ಸ್, ವಿಯೆಟ್ನಾಂಗಳನ್ನು ಮಾಡಿದ್ದೇವೆ, ನಾವು ಹಲವಾರು ಒಪ್ಪಂದಗಳನ್ನು ಘೋಷಿಸಿದ್ದೇವೆ "ನಾವು ಅವುಗಳ ಬಗ್ಗೆ ಮಾತುಕತೆ ನಡೆಸಿದ್ದರಿಂದ ಮತ್ತು ಭಾರತದೊಂದಿಗಿನ ಒಪ್ಪಂದ ಆ ಎಲ್ಲಾ ದೇಶಗಳಿಗಿಂತ ಮೊದಲೇ ಮುಗಿಯುತ್ತದೆ ಎಂದು ಭಾವಿಸಿದ್ದರಿಂದ, ನಾನು ಅವುಗಳ ಬಗ್ಗೆ ಹೆಚ್ಚಿನ ಮಾತುಕತೆ ನಡೆಸಿದ್ದೇನೆ. ಈಗ ಸಮಸ್ಯೆ ಏನೆಂದರೆ ಒಪ್ಪಂದಗಳು ದುಬಾರಿಯಾಗಿ ಹೊರಬಂದಿವೆ. ತದನಂತರ ಭಾರತ ಮತ್ತೆ ಕರೆ ಮಾಡಿ, ಸರಿ, ನಾವು ಸಿದ್ಧರಿದ್ದೇವೆ ಎಂದು ಹೇಳುತ್ತದೆ. ನಾನು, ಯಾವುದಕ್ಕೆ ಸಿದ್ಧ ಎಂದು ಭಾವಿಸಲಿ?" ಎಂದು ಲುಟ್ನಿಕ್ ಪ್ರಶ್ನಿಸಿದ್ದರು.

ಈ ಮಧ್ಯೆ ರಷ್ಯಾದಿಂದ ಇಂಧನ ಖರೀದಿಸುವ ರಾಷ್ಟ್ರಗಳ ಮೇಲೆ ಶೇ. 500 ರಷ್ಟು ಸುಂಕ ವಿಧಿಸುವ US ಶಾಸನ ಕುರಿತು ಪ್ರತಿಕ್ರಿಯಿಸಿದ ಜೈಸ್ವಾಲ್, "ಉದ್ದೇಶಿತ ಮಸೂದೆ ಬಗ್ಗೆ ನಮಗೆ ಸಂಪೂರ್ಣವಾಗಿ ತಿಳಿದಿದೆ ಮತ್ತು ಅದಕ್ಕೆ ಸಂಬಂಧಿಸಿದ ಎಲ್ಲಾ ಸಮಸ್ಯೆಗಳು ಮತ್ತು ಬೆಳವಣಿಗೆಗಳನ್ನು ನಾವು ಎಚ್ಚರಿಕೆಯಿಂದ ಮೇಲ್ವಿಚಾರಣೆ ಮಾಡುತ್ತಿದ್ದೇವೆ ಎಂದು ತಿಳಿಸಿದರು.

ಇದೇ ವೇಳೆ ಇಂಧನ ಮೂಲಗಳಿಗೆ ಸಂಬಂಧಿಸಿದಂತೆ ನಮ್ಮ ಕಾರ್ಯ ತಂತ್ರದ ಬಗ್ಗೆ ಚೆನ್ನಾಗಿ ತಿಳಿದಿದೆ ಎಂದು ಹೇಳಲು ಬಯಸುತ್ತೇನೆ. ಜಾಗತಿಕ ಮಾರುಕಟ್ಟೆಯಲ್ಲಿನ ಪರಿಸ್ಥಿತಿಗಳು ಮತ್ತು ಪರಿಸರವನ್ನು ಗಣನೆಗೆ ತೆಗೆದುಕೊಳ್ಳುತ್ತೇವೆ. ನಮ್ಮ 1.4 ಶತಕೋಟಿ ಜನರಿಗೆ ಕೈಗೆಟುಕುವ ಬೆಲೆಯಲ್ಲಿ ಇಂಧನ ಲಭ್ಯವಾಗುವಂತೆ ನೋಡಿಕೊಳ್ಳುವುದು ಗಮನದಲ್ಲಿದೆ. ಈ ಅಂಶಗಳ ಆಧಾರದ ಮೇಲೆ ನಾವು ನಮ್ಮ ಕಾರ್ಯತಂತ್ರ ಮತ್ತು ನೀತಿಯನ್ನು ನಿರ್ಧರಿಸುತ್ತೇವೆ ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್ ನಲ್ಲಿ 2 ವಾರ ಪೂರೈಸಿದ ಪ್ರತಿಭಟನೆ: ಸರ್ಕಾರಿ ಕಟ್ಟಡಗಳಿಗೆ ಬೆಂಕಿ, ಪ್ರತಿಭಟನಾಕಾರರಿಗೆ 'ಮರಣ ದಂಡನೆ' ಬೆದರಿಕೆ!

"Surely It's Time": ಕೊಹ್ಲಿ ನಿವೃತ್ತಿ ಬಗ್ಗೆ ದೊಡ್ಡ ಸಂದೇಶ ರವಾನಿಸಿದ ಉತ್ತಪ್ಪ!

'ಮನ್ರೇಗಾ ಬಚಾವೋ' ಸಂಗ್ರಾಮ: ಕಾಂಗ್ರೆಸ್ ಪಕ್ಷದಿಂದ ದೇಶಾದ್ಯಂತ 45 ದಿನಗಳ ಹೋರಾಟ ಆರಂಭ!

ಮಹಾರಾಷ್ಟ್ರದಲ್ಲಿ ಸಿಎಂ, ಡಿಸಿಎಂ ಮುಸುಕಿನ ಗುದ್ದಾಟ: ಅಜಿತ್ ಪವಾರ್ ವಿರುದ್ಧ ಫಡ್ನವೀಸ್ ಕಿಡಿ!

ಭಾಷಾ ಮಸೂದೆ ವಿರೋಧಿಸಿ ಸಿದ್ದರಾಮಯ್ಯ ಪತ್ರ: ಕೇರಳ ಸಿಎಂ ಸ್ಪಷ್ಟೀಕರಣ; ಪಿಣರಾಯಿ ವಿಜಯನ್ ಹೇಳಿದ್ದೇನು?

SCROLL FOR NEXT