ನವದೆಹಲಿ: 2025-26ರ ಕೇಂದ್ರ ಬಜೆಟ್ ಅನ್ನು ಫೆಬ್ರವರಿ 1 ರಂದು ಭಾನುವಾರ ಸಂಸತ್ತಿನಲ್ಲಿ ಮಂಡಿಸಲಾಗುವುದು. ಜನವರಿ 29 ರಂದು ಮುಖ್ಯ ಆರ್ಥಿಕ ಸಲಹೆಗಾರ ವಿ ಅನಂತ ನಾಗೇಶ್ವರನ್ ಅವರು ಆರ್ಥಿಕ ಸಮೀಕ್ಷೆಯನ್ನು ಮಂಡಿಸಲಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ಶುಕ್ರವಾರ ಮಾಹಿತಿ ಹಂಚಿಕೊಂಡಿದ್ದಾರೆ.
ಸಂಸತ್ತಿನ ಬಜೆಟ್ ಅಧಿವೇಶನ ಜನವರಿ 28 ರಂದು ಆರಂಭವಾಗಲಿದ್ದು, ಏಪ್ರಿಲ್ 2 ರವರೆಗೆ ಮುಂದುವರಿಯುತ್ತದೆ ಎಂದು ಅವರು ತಿಳಿಸಿದ್ದಾರೆ.
ವಾಡಿಕೆಯಂತೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು 28 ರಂದು ಲೋಕಸಭಾ ಹಾಗೂ ರಾಜ್ಯಸಭಾ ಸದಸ್ಯರ ಜಂಟಿ ಅಧಿವೇಶವನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ. ಭಾರತ ಸರ್ಕಾರದ ಶಿಫಾರಸಿನ ಮೇರೆಗೆ ಮುರ್ಮು ಅವರು ಬಜೆಟ್ ಅಧಿವೇಶನಕ್ಕಾಗಿ ಸಂಸತ್ತಿನ ಎರಡೂ ಸದನಗಳನ್ನು ಕರೆಯಲು ಅನುಮೋದನೆ ನೀಡಿದ್ದಾರೆ ಎಂದು ತಿಳಿಸಿದ್ದಾರೆ.
ಅಧಿವೇಶನದ ಮೊದಲ ಹಂತವು ಜನವರಿ 28 ರಿಂದ ಫೆಬ್ರವರಿ 13ರವರಗೆ, ಎರಡನೇ ಹಂತ ಮಾರ್ಚ್ 9 ರಿಂದ ಏಪ್ರಿಲ್ 2ರವರೆಗೆ ನಡೆಯಲಿದೆ ಎಂದು ಅವರು ತಿಳಿಸಿದ್ದಾರೆ.