ಕೇಂದ್ರ ಗೃಹ ಸಚಿವ ಅಮಿತ್ ಶಾ 
ದೇಶ

ಕೇರಳದಲ್ಲಿ ಕಾನೂನು ಸುವ್ಯವಸ್ಥೆಗೆ ಬೆದರಿಕೆ: SDPI, ಜಮಾತ್, ಸಂಘಟನೆಗಳ ಪಾತ್ರ ಪ್ರಶ್ನಿಸಿದ ಅಮಿತ್ ಶಾ!

ಮಲಯಾಳಂನ ಪ್ರಮುಖ ಪತ್ರಿಕೆ ಕೇರಳ ಕೌಮುದಿ ಆಯೋಜಿಸಿದ್ದ ಸಮಾವೇಶದಲ್ಲಿ ಮಾತನಾಡಿದ ಅಮಿತ್ ಶಾ ಕೆಲವು ಸಂಘಟನೆಗಳ ಪಾತ್ರವನ್ನು ಪ್ರಶ್ನಿಸಿದರು

ತಿರುವನಂತಪುರಂ: ಕೇರಳದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಪರಿಸ್ಥಿತಿ ಸದ್ಯಕ್ಕೆ ಶಾಂತವಾಗಿರಬಹುದು ಆದರೆ ಅನೇಕ ಬೆದರಿಕೆಗಳು ನಿಧಾನವಾಗಿ ಹೊರಹೊಮ್ಮುತ್ತಿದ್ದು, ಭವಿಷ್ಯದಲ್ಲಿ ಅಪಾಯಕಾರಿಯಾಗಬಹುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾನುವಾರ ಹೇಳಿದ್ದಾರೆ.

ಮಲಯಾಳಂನ ಪ್ರಮುಖ ಪತ್ರಿಕೆ ಕೇರಳ ಕೌಮುದಿ ಆಯೋಜಿಸಿದ್ದ ಸಮಾವೇಶದಲ್ಲಿ ಮಾತನಾಡಿದ ಅವರು, ಕೆಲವು ಸಂಘಟನೆಗಳ ಪಾತ್ರವನ್ನು ಪ್ರಶ್ನಿಸಿದರು ಮತ್ತು ಅವರು ನಿಜವಾಗಿಯೂ ಜನರನ್ನು ಸುರಕ್ಷಿತವಾಗಿರಿಸಲು ಸಾಧ್ಯವೇ? ಸಹಬಾಳ್ವೆಯಲ್ಲಿ ನಂಬಿಕೆಯಿಲ್ಲದವರು ಏಕತೆಯನ್ನು ಹೇಗೆ ಖಚಿತಪಡಿಸಿಕೊಳ್ಳಬಹುದು" ಎಂದು ಶಾ ಕೇಳಿದರು.

PFI, ಜಮಾತ್-ಎ-ಇಸ್ಲಾಮಿಯಂತಹ ಸಂಘಟನೆಗಳು ಮತ್ತು SDPI ಯಂತಹ ರಾಜಕೀಯ ಪಕ್ಷಗಳು ಕೇರಳವನ್ನು ಸುರಕ್ಷಿತವಾಗಿರಿಸಬಹುದೇ? ಎಂದು ಈ ಕಾರ್ಯಕ್ರಮದ ಮೂಲಕ ಕೇರಳದ ಜನರನ್ನು ಕೇಳಲು ಬಯಸುತ್ತೇನೆ ಎಂದರು. ಇಂತಹ ಬೆದರಿಕೆಗಳನ್ನು ಗುರುತಿಸುವುದು ಮತ್ತು ಅವುಗಳನ್ನು ತೊಡೆದುಹಾಕಲು ಪ್ರಯತ್ನಿಸುವುದು ಸರ್ಕಾರದ ಜವಾಬ್ದಾರಿಯಾಗಿದೆ ಎಂದು ಅವರು ಹೇಳಿದರು.

ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (PFI) ಮೇಲಿನ ನಿಷೇಧವನ್ನು ಉಲ್ಲೇಖಿಸಿದ ಶಾ, ಎಲ್‌ಡಿಎಫ್ ಮತ್ತು ಯುಡಿಎಫ್ ಈ ನಿರ್ಧಾರವನ್ನು ವಿರೋಧಿಸಿಲ್ಲ ಅಥವಾ ಬೆಂಬಲಿಸಿಲ್ಲ. ನಾನು ದೇಶಾದ್ಯಂತ ಎಲ್ಲಿಗೆ ಹೋದರೂ ಇದನ್ನು ಸ್ಪಷ್ಟವಾಗಿ ಹೇಳುತ್ತೇನೆ. ನಾವು PFI ನಿಷೇಧಿಸುವ ಮೂಲಕ ಅದರ ಸಂಪೂರ್ಣ ಕಾರ್ಯಕರ್ತರನ್ನು ಕಂಬಿ ಹಿಂದೆ ಹಾಕಿದ್ದೇವೆ. ಇಡೀ ದೇಶವು ಸುರಕ್ಷಿತವಾಗಿದೆ" ಎಂದು ಗೃಹ ಸಚಿವರು ಹೇಳಿದರು.

ಕಾನೂನು ಸುವ್ಯವಸ್ಥೆ ಹದಗೆಡಿಸುವವರ ಹಿಂದಿನ ಕಾಣದ ಅಪಾಯಕಾರಿ ಜನರನ್ನು ಗುರುತಿಸಿದಾಗ ಮಾತ್ರ ಕೇರಳಕ್ಕೆ ಸುರಕ್ಷತೆ ಖಾತ್ರಿಯಾಗಲಿದೆ. ಅದರೊಂದಿಗೆ ಕೇರಳ ಅಭಿವೃದ್ಧಿಯಾಗಲಿದೆ. ಕೇರಳದ ಸುರಕ್ಷತೆ ಪ್ರಮುಖವಾಗಿದೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್